AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು

Bengaluru Kalaburagi special train; ಬೇಸಿಗೆ ರಜೆಯಲ್ಲಿ ಜನರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಆರಂಭಿಸಲಾಗಿರುವ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವಣ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಹಠಾತ್ ರದ್ದುಗೊಳಿಸಲಾಗಿದೆ. ಇಷ್ಟೇ ಅಲ್ಲದೆ, ದಕ್ಷಿಣ ರೈಲ್ವೆ ವ್ಯಾಪ್ತಿಯ ಅನೇಕ ರೈಲು ಸಂಚಾರದಲ್ಲಿಯೂ ವ್ಯತ್ಯಯವಾಗಿದೆ. ಆ ಕುರಿತು ವಿವರ ಇಲ್ಲಿದೆ.

ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು
ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು
ಗಣಪತಿ ಶರ್ಮಾ
|

Updated on: May 28, 2024 | 8:57 AM

Share

ಬೆಂಗಳೂರು, ಮೇ 28: ಸೆಂಟ್ರಲ್ ರೈಲ್ವೆ (Central Railway) ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ ರೈಲ್ವೆ (South Western Railway) ತಿಳಿಸಿದೆ. ಬೇಸಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ವಿಶೇಷ ರೈಲು ಆರಂಭಿಸಲಾಗಿತ್ತು.

ಎಸ್‌ಎಂವಿಟಿ ಬೆಂಗಳೂರಿನಿಂದ (ರೈಲು ಸಂಖ್ಯೆ 06261) ಮೇ 29 ಮತ್ತು ಜೂನ್ 27 ರ ನಡುವೆ ಮತ್ತು ಕಲಬುರಗಿಯಿಂದ (ರೈಲು ಸಂಖ್ಯೆ 06262) ಮೇ 30 ಮತ್ತು ಜೂನ್ 28 ರ ನಡುವೆ ಸಂಚರಿಸಲಿರುವ ವಿಶೇಷ ರೈಲುಗಳು ರದ್ದಾಗಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಇತರ ಕಡೆಗಳಲ್ಲಿಯೂ ರೈಲು ಸಂಚಾರದಲ್ಲಿ ವ್ಯತ್ಯಯ

ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ಪ್ಲಾಟ್​​ಫಾರ್ಮ್​​ ವಿಸ್ತರಣೆಗಾಗಿ 36 ಗಂಟೆಗಳ ಸಂಚಾರ ನಿರ್ಬಂಧದ ಕಾರಣ ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಮೇ 31 ಮತ್ತು ಜೂನ್ 2 ರ ನಡುವೆ 69 ದೂರ ಸಂಚಾರದ ರೈಲುಗಳು ರದ್ದಾಗಿವೆ. 24 ಕೋಚ್ ಸಾಮರ್ಥ್ಯದ ರೈಲುಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕೆ ಸಂಬಂಧಿಸಿದ ವಿಸ್ತರಣಾ ಕಾಮಗಾರಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ನಡೆಯುತ್ತಿದೆ. ಇದು ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಇತರ ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿದೆ.

ದಕ್ಷಿಣ ರೈಲ್ವೆಯು ಸದ್ಯ ಉಪನಗರ ರೈಲುಗಳನ್ನು ಭಾಗಶಃ ರದ್ದುಗೊಳಿಸಿದೆ. ಚೆನ್ನೈ ಬೀಚ್ – ಚೆಂಗಲ್‌ಪೇಟ್ ಎಮು ಮೂಲಕ ಸಂಚರಿಸುವವರು ಚೆನ್ನೈ ಬೀಚ್‌ನಿಂದ ಹೊರಡುವುದು ಸಿಂಗಪೆರುಮಾಳ್ ಕೋಯಿಲ್‌ವರೆಗೆ ಮಾತ್ರ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಉಡುಪಿ: ಕಾರ್ಗತ್ತಲ ರಾತ್ರಿಯಲ್ಲಿ ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ, ಸ್ವಲ್ಪದರಲ್ಲೇ ತಪ್ಪಿತು ರೈಲು ದುರಂತ

ದಕ್ಷಿಣ ರೈಲ್ವೆಯು ಭಾನುವಾರ ರಾತ್ರಿ ತಿರುಚ್ಚಿಯಿಂದ ಕುಂಭಕೋಣಂ ಮತ್ತು ಮೈಲಾಡುತುರೈ ಮೂಲಕ ತಾಂಬರಂಗೆ ಮೆಮು ವಿಶೇಷ ರೈಲನ್ನು ಓಡಿಸಲಿದೆ. ಆದರೆ, ಇದರಲ್ಲಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಇರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು