ಎಸ್​​ಟಿ ಬೋರ್ಡ್​​​ನಲ್ಲಿ ದೊಡ್ಡ ಹಗರಣ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಆತ್ಮಹತ್ಯೆಯಿಂದ ಸಾಬೀತಾಗಿದೆ. ತಕ್ಷಣವೇ ಸಚಿವ ನಾಗೇಂದ್ರರನ್ನು ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಲಬುರಗಿಯಲ್ಲಿ ಆಗ್ರಹಿಸಿದ್ದಾರೆ. ಜತೆಗೆ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದಾರೆ. ವಿವರಗಳಿಗೆ ಮುಂದೆ ಓದಿ.

ಎಸ್​​ಟಿ ಬೋರ್ಡ್​​​ನಲ್ಲಿ ದೊಡ್ಡ ಹಗರಣ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ
ವಿಜಯೇಂದ್ರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on: May 28, 2024 | 11:22 AM

ಕಲಬುರಗಿ, ಮೇ 28: ಎಸ್​​ಟಿ ಬೋರ್ಡ್​​ನಲ್ಲಿ (Maharshi Valmiki Schedule Tribe Development Corp) ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು (Nagendra) ವಜಾ ಮಾಡಬೇಕು. ಇಲ್ಲವಾದಲ್ಲಿ ಬಿಜೆಪಿ (BJP) ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸರ್ಕಾರವನ್ನು ಆಗ್ರಹಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ನಿಜವಾಗಿಯೂ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್. ಕೂಡಲೆ ಸಿಎಂ ಸಿದ್ದರಾಮಯ್ಯ ಆ ಇಲಾಖೆಯ ಸಚಿವರನ್ನು ಮಂತ್ರಿ ಮಂಡಲದಿಂದ ಕೈ ಬಿಡಬೇಕು ಎಂದರು.

ಹೈಕೋರ್ಟ್ ನ್ಯಾಯಧೀಶರ ನೈತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ಈ ವಿಚಾರವಾಗಿ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿತ್ತು. ಇದಕ್ಕೆ ಪೂರಕ ಅಂಶಗಳು ಅವರು ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿತ್ತು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್​ನೋಟ್​ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ

ಮಧು ಬಂಗಾರಪ್ಪ ಹೇರ್​ ಕಟಿಂಗ್ ಬಗ್ಗೆ ನೀಡಿದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರಿಗೆ ಕೇಳಿದ್ದು ನನ್ನ ಪ್ರಶ್ನೆಯಲ್ಲ. ಅಲ್ಲಿನ ಕೆಲ ಶಿಕ್ಷಕರು ಕೇಳಿದ್ದನ್ನು ನಾನು ಹೇಳಿದ್ದೆ ಅಷ್ಟೆ. ಕನ್ನಡ ಬರಲ್ಲ ಎಂದು ಮಧು ಬಂಗಾರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಶಿಕ್ಷಣ ಸಚಿವರಾಗಿ ಹೇಗೆ ಇರಬೇಕು ಎಂದು ಶಿಕ್ಷಕರು ಹೇಳಿದ್ದನ್ನೇ ಹೇಳಿದ್ದೆ. ಮಧು ಬಂಗಾರಪ್ಪ ಬಹಳ ಮನಸ್ಸಿಗೆ ಹಚ್ಚಿಕೊಂಡಿದ್ದಾರೆ ಅನ್ಸುತ್ತೆ ಎಂದರು.

ಹಣಕಾಸಿನ ಸಮಸ್ಯೆ ಇದ್ರೆ ಯುವ ಮೋರ್ಚಾದವರಿಗೆ ಹೇಳುತ್ತೇನೆ. ಪ್ರತಿ ತಿಂಗಳು ಹೇರ್ ಕಟ್​ಗೆ ಮಧು ಬಂಗಾರಪ್ಪಗೆ ಹಣ ಕೊಡಬೇಕು ಎಂದು ಹೇಳುತ್ತೇನೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಪ್ರಜ್ವಲ್ ವಿಡಿಯೋ ಹೇಳಿಕೆಗೆ ಏನಂದ್ರು ವಿಜಯೇಂದ್ರ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೇಳಿಕೆ ಗಮನಿಸಿದ್ದೇನೆ. ತನಿಖೆಗೆ ಒಳಗಾಗುತ್ತೇನೆ ಎಂದು ಹೇಳಿದ್ದನ್ನು ಸ್ವಾಗತಿಸುತ್ತೇನೆ. ಜನಪ್ರತಿನಿಧಿ ಆಗಿರುವವರು ಧೈರ್ಯವಾಗಿ ಎದುರಿಸಬೇಕು. ಕಳೆದ 1 ತಿಂಗಳಿಂದ ನಾನಾ ರೀತಿಯ ವಿಷಯಗಳು ಹರಿದಾಡಿವೆ. ತನಿಖಾ ಸಂಸ್ಥೆ ಮುಂದೆ ಹಾಜರಾಗಬೇಕು, ತನಿಖೆ ಎದುರಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ