ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Oct 20, 2023 | 7:51 AM

ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆಡಿಯೋ ರೆಕಾರ್ಡ್​ ಮಾಡಿದ್ದ ಶಿವಕುಮಾರ್, ನನ್ನ ಸಾವಿಗೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಕಾಂಗ್ರೆಸ್​​ ಕಾರ್ಯಕರ್ತರು ಎಂದು ಗಂಭೀರ ಆರೋಪ ಮಾಡಿದ್ದ. ಆದ್ರೆ, ಇದೀಗ ಈ ಪ್ರಕರಣ ಹೊಸ ತಿರುವುಪಡೆದುಕೊಂಡಿದೆ.

ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಶಿವಕುಮಾರ್​- ಸಚಿವ ಶರಣ ಪ್ರಕಾಶ್ ಪಾಟೀಲ್
Follow us on

ಕಲಬುರಗಿ, (ಅಕ್ಟೋಬರ್ 20): ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಬಿಜೆಪಿ(BJP)  ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ (Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು…ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್​ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದ. ಆದ್ರೆ, ಇದೀಗ ಈ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತಃ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಪತಿ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಲಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆ ಕೂಡಾ ಅನುಮಾನ ಇಲ್ಲ ಎಂದು ಉಲ್ಲೇಖವಾಗಿರುವುದು ಅಚ್ಚರಿಕೆ ಕಾರಣವಾಗಿದೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ, ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಗಂಭೀರ ಆರೋಪ

ಅಕ್ಟೋಬರ್ 18ರಂದು ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ನನ್ನ ಸಾವಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಕಾಂಗ್ರೆಸ್ ನಾಯಕರೇ ಕಾರಣ ‌ಎಂದು ಹೇಳಿರೋ ಆಡಿಯೋ ವೈರಲ್ ಆಗಿದ್ದವು. ಅಲ್ಲದೇ ಈ ಬಗ್ಗೆ ಬಿಜೆಪಿ ನಾಯಕರು ಸಿಡಿದೆದ್ದಿದ್ದು, ಈ ಪ್ರಕರಣ ಇನ್ನೇನು ರಾಜಕೀಯ ಸ್ವರೂಪ ಪಡೆದುಕೊಂಡಿತು ಎನ್ನುವಷ್ಟರಲ್ಲೇ ಶಿವಕುಮಾರ್​ ಪತ್ನಿ ಮಲ್ಲಮ್ಮ ಅವರು ತಮ್ಮ ಪತಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ