ಬೆಲೆ ಏರಿಕೆ ಬಗ್ಗೆ ಚರ್ಚಿಸುವ ಧೈರ್ಯವಿಲ್ಲದ ಬಿಜೆಪಿ ದೇಶ ವಿಭಜಿಸುತ್ತಿದೆ: ಪ್ರಿಯಾಂಕ್ ಖರ್ಗೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 13, 2022 | 11:48 AM

ಧಾರ್ಮಿಕ ಸ್ಥಳಗಳಲ್ಲಿ ಮೈಕ್ ಬಳಕೆ ಬಗ್ಗೆ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೊಳಿಸುವ ಉದ್ದೇಶವೂ ಇವರಿಗೆ ಇಲ್ಲ ಹೇಳಿದರು.

ಬೆಲೆ ಏರಿಕೆ ಬಗ್ಗೆ ಚರ್ಚಿಸುವ ಧೈರ್ಯವಿಲ್ಲದ ಬಿಜೆಪಿ ದೇಶ ವಿಭಜಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ
Follow us on

ಕಲಬುರ್ಗಿ: ಹಣದುಬ್ಬರ, ಆರ್ಥಿಕ ಸಮಸ್ಯೆಗಳಿಂದ ದೇಶದಲ್ಲಿ ಜೀವನಾಶ್ಯಕ ವಸ್ತುಗಳ ಬೆಲೆ ವಿಪರೀತ ಎನಿಸುವಷ್ಟು ಹೆಚ್ಚಾಗಿದೆ. ಈ ಬಗ್ಗೆ ಚರ್ಚಿಸಲು ಧೈರ್ಯವಿಲ್ಲದ ಬಿಜೆಪಿ ಸರ್ಕಾರಗಳು ಹಿಂದೂ-ಮುಸ್ಲಿಂ ಎಂದು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಯತ್ನಿಸುತ್ತಿದೆ. ಧಾರ್ಮಿಕ ಸ್ಥಳಗಳಲ್ಲಿ ಮೈಕ್ ಬಳಕೆ ಬಗ್ಗೆ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೊಳಿಸುವ ಉದ್ದೇಶವೂ ಇವರಿಗೆ ಇಲ್ಲ. ಆದೇಶವನ್ನು ತಮ್ಮ ಮನಸ್ಸಿಗೆ ಬಂದಂತೆ ತಿರುಚಿ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಗಂಭೀರ ಆರೋಪ ಮಾಡಿದರು.

ಕರ್ನಾಟಕ ರಾಜಕಾರಣದ ಬಗ್ಗೆ ಇನ್ನಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗದ ಬಗ್ಗೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ, ಸಾಮಾಜಿಕ ಸ್ವಾಸ್ಥ್ಯ ಕದಡುವ ದುಷ್ಕರ್ಮಿಗಳ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ಕೇವಲ ಧಾರ್ಮಿಕ ವಿಚಾರಗಳನ್ನು ಮಾತ್ರ ಮಾತಾಡುತ್ತಾರೆ. ಎಲ್ಲದರಲ್ಲೂ ತಮ್ಮ ರಾಜಕೀಯ ಉದ್ದೇಶಗಳನ್ನು ಮುಂದೆ ತರುತ್ತಿದ್ದಾರೆ ಎಂದು ದೂರಿದರು.

ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ಕಾಯ್ದೆಗಳನ್ನು ಸರಿಯಾದ ರೀತಿಯಲ್ಲಿ ಚರ್ಚಿಸದೇ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡರು. ಚರ್ಚೆಗೆ ಹೆದರಿ ಸುಗ್ರೀವಾಜ್ಞೆಗಳ ಮೂಲಕ ಕಾಯ್ದೆಗಳನ್ನು ಜಾರಿ ಮಾಡುತ್ತಿದ್ದಾರೆ. ಕೇವಲ ಸಂಖ್ಯಾ ಬಲ ಆಧರಿಸಿ ಕಾಯ್ದೆಗಳನ್ನು ಪಾಸ್ ಮಾಡಿಸಿಕೊಂಡರೆ ಅದು ಸಂವಿಧಾನ ವಿರೋಧಿ ಧೋರಣೆ ಎಂದು ಹೇಳಲಾಗುತ್ತದೆ ಎಂದು ತಿಳಿಸಿದರು.

ರಮ್ಯಾ ಟ್ವೀಟ್ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದನ್ನು ಪ್ರಸ್ತಾಪಿಸಿದ ಅವರು, ‘ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಅದನ್ನು ಮೊದಲು ಸರಿಪಡಿಸಿಕೊಳ್ಳಿ. ನಮ್ಮ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ನಿಮಗೇಕೆ? ಯತ್ನಾಳ್ ಅವರು ಮುಖ್ಯಮಂತ್ರಿ ಆಗೋಕೆ 2200 ಕೋಟಿ ರೂಪಾಯಿ ಕೊಡಬೇಕು ಅಂತ ದೂರಿದ್ದರು. ಅದರ ಬಗ್ಗೆ ಏಕೆ ಕ್ರಮ ಜರುಗಿಸಿಲ್ಲ. ಸಚಿವರಾಗಲು ಸಿಡಿ ರೆಡಿ ಮಾಡಬೇಕು ಎಂಬ ಹೇಳಿಕೆ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ. ಮುಂದೆ ಇದಕ್ಕೂ ನೊಟೀಸ್ ಕೊಡಬೇಡಿ. ನನ್ನ ಹತ್ತಿರ ಯಾರ ಸಿಡಿಯೂ ಇಲ್ಲ’ ಎಂದು ವ್ಯಂಗ್ಯವಾಡಿದರು.

Published On - 11:38 am, Fri, 13 May 22