AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸದಸ್ಯನಿಂದ ಮುಸ್ಲಿಂ ಮಹಿಳೆಯರ ಅವಹೇಳನ ಆರೋಪ: ಕಾಂಗ್ರೆಸ್​​ ಸದಸ್ಯ ಆಕ್ರೋಶ

ಬಿಜೆಪಿ ಸದಸ್ಯ ಕೃಷ್ಣಾ ನಾಯಕ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಘಟನೆ ನಡೆದಿದೆ. ಇದರಿಂದ ಕೆರಳಿದ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸದಸ್ಯನಿಂದ ಮುಸ್ಲಿಂ ಮಹಿಳೆಯರ ಅವಹೇಳನ ಆರೋಪ: ಕಾಂಗ್ರೆಸ್​​ ಸದಸ್ಯ ಆಕ್ರೋಶ
ಮಹಾನಗರ ಪಾಲಿಕೆ ಸಭೆಯಲ್ಲಿ ಗಲಾಟೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 29, 2023 | 6:16 PM

Share

ಕಲಬುರಗಿ, ಡಿಸೆಂಬರ್​ 29: ಮಂಡ್ಯದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಸದ್ಯ ಇದರ ಮಧ್ಯೆ ಕಲಬುರಗಿ ಮಹಾನಗರ ಪಾಲಿಕೆ ಸಭೆಯಲ್ಲಿ ಬಿಜೆಪಿ ಸದಸ್ಯ ಕೃಷ್ಣಾ ನಾಯಕ ಮುಸ್ಲಿಂ ಮಹಿಳೆಯರ (Muslim women) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ನಡೆದಿದೆ.

ಪೌರ ಕಾರ್ಮಿಕ ನೇಮಕಾತಿ ಸಂಬಂಧ ಗಲಾಟೆ ಮಾಡಲಾಗಿದ್ದು, ಬಂಜಾರ ಸಮುದಾಯದ ಮಹಿಳೆಯರು ಕಸ ಗುಡಿಸುವುದನ್ನು ಕಂಡಿದ್ದೇವೆ. ಆದರೆ ಬುರ್ಖಾ ಹಾಕಿಕೊಂಡ ಮಹಿಳೆಯರು ಕಸ ಗುಡಿಸುವುದನ್ನು ನೋಡಿದ್ದೀರಾ ಎಂದು ಕೃಷ್ಣಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಇದರಿಂದ ಕೆರಳಿದ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾ ನಾಯಕ ಕ್ಷೆಮೆ ಕೋರುವಂತೆ ಕೈ ಸದಸ್ಯರು ಪಟ್ಟು ಹಿಡಿದರು. ಬಳಕ ಮೇಯರ್ ಸೂಚನೆಯಂತೆ ಕೃಷ್ಣಾ ನಾಯಕ ಕ್ಷಮೆ ಕೋರಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

ತಮ್ಮ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಹಲವು ದಿನಗಳಿಂ ಪ್ರತಿಭಟನೆ ನಡೆಸಿದ್ದು, ಈ ಕುರಿತಾಗಿ ಚರ್ಚೆ ಕೈಗೊಳ್ಳಲಾಗಿತ್ತು. 967 ಪೌರಕಾರ್ಮಿಕರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಒಟ್ಟಾರೆ 1041 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಎಲ್ಲರನ್ನೂ ಖಾಯಂ ಮಾಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Fri, 29 December 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್