ಕಲಬುರಗಿ, ಡಿಸೆಂಬರ್ 29: ಮಂಡ್ಯದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಸದ್ಯ ಇದರ ಮಧ್ಯೆ ಕಲಬುರಗಿ ಮಹಾನಗರ ಪಾಲಿಕೆ ಸಭೆಯಲ್ಲಿ ಬಿಜೆಪಿ ಸದಸ್ಯ ಕೃಷ್ಣಾ ನಾಯಕ ಮುಸ್ಲಿಂ ಮಹಿಳೆಯರ (Muslim women) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ನಡೆದಿದೆ.
ಪೌರ ಕಾರ್ಮಿಕ ನೇಮಕಾತಿ ಸಂಬಂಧ ಗಲಾಟೆ ಮಾಡಲಾಗಿದ್ದು, ಬಂಜಾರ ಸಮುದಾಯದ ಮಹಿಳೆಯರು ಕಸ ಗುಡಿಸುವುದನ್ನು ಕಂಡಿದ್ದೇವೆ. ಆದರೆ ಬುರ್ಖಾ ಹಾಕಿಕೊಂಡ ಮಹಿಳೆಯರು ಕಸ ಗುಡಿಸುವುದನ್ನು ನೋಡಿದ್ದೀರಾ ಎಂದು ಕೃಷ್ಣಾ ನಾಯಕ ಹೇಳಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್
ಇದರಿಂದ ಕೆರಳಿದ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾ ನಾಯಕ ಕ್ಷೆಮೆ ಕೋರುವಂತೆ ಕೈ ಸದಸ್ಯರು ಪಟ್ಟು ಹಿಡಿದರು. ಬಳಕ ಮೇಯರ್ ಸೂಚನೆಯಂತೆ ಕೃಷ್ಣಾ ನಾಯಕ ಕ್ಷಮೆ ಕೋರಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ
ತಮ್ಮ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಹಲವು ದಿನಗಳಿಂ ಪ್ರತಿಭಟನೆ ನಡೆಸಿದ್ದು, ಈ ಕುರಿತಾಗಿ ಚರ್ಚೆ ಕೈಗೊಳ್ಳಲಾಗಿತ್ತು. 967 ಪೌರಕಾರ್ಮಿಕರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಒಟ್ಟಾರೆ 1041 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಎಲ್ಲರನ್ನೂ ಖಾಯಂ ಮಾಡಬೇಕು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:11 pm, Fri, 29 December 23