AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಎನ್ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಪ್ರಿಯಾಂಕ್ ಖರ್ಗೆ

ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮೊನ್ನೆ ನನಗೆ ಮತ್ತೊಂದು ಜೀವ ಬೇದರಿಕೆ ಪತ್ರ ಬಂದಿದ್ದು, ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದರು.

ನನ್ನನ್ನು ಎನ್ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಪ್ರಿಯಾಂಕ್ ಖರ್ಗೆ
ನನ್ನನ್ನು ಎನ್ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ ಎಂದ ಪ್ರಿಯಾಂಕ್ ಖರ್ಗೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Mar 28, 2024 | 1:07 PM

Share

ಕಲಬುರಗಿ, ಮಾ.28: ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಮತ್ತು ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನೀವೇ (ಬಿಜೆಪಿ) ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿ ಸುದ್ದಿಗೋಷ್ಠಿಯಲ್ಲಿ ಜೀವ ಬೆದರಿಕೆ ಪತ್ರ ಓದಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಒಂದೇ ಕುಟುಂಬದ ಹಿಡಿತಕ್ಕೆ ಸಿಕ್ಕಿ ನಲುಗಿರುವುದರಿಂದ ಹೊಸದಾಗಿ ಕಟ್ಟಬೇಕಿದೆ ಎನ್ನುತ್ತಿದ್ದಾರೆ ನಾಯಕರು: ಪ್ರಿಯಾಂಕ್ ಖರ್ಗೆ

“ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗೂ, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. “ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ” ಎಂದರು.

ಬಿಜೆಪಿಯವರಿಗೆ ನಮ್ಮನ್ನ ರಾಜಕೀಯವಾಗಿ ಎದುರಿಸಲು ಆಗುತ್ತಿಲ್ಲ. ಹೀಗಾಗೇ ವೈಯಕ್ತಿಕವಾಗಿ ಟಾರ್ಗೇಟ್ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನೂ ಹೆದರುವುದಿಲ್ಲ. “ನಾನು ಬಳೆ ತೊಟ್ಟುಕೊಂಡಿಲ್ಲ, ಆಖಾಡದಲ್ಲಿ ರೆಡಿಯಿದ್ದೇನೆ” ಎಂದು ಸಂಸದ ಉಮೇಶ್ ಜಾದವ್ ಅವರೇ ಹೇಳುತ್ತಾರೆ. ಇದಕ್ಕೆ ನಮ್ಮ ಸಂಸದರು ಉತ್ತರ ನೀಡಬೇಕು. ನೇರವಗಿ ಮನುವಾದಿಗಳೇ ಬೇದರಿಕೆ ಹಾಕುತ್ತಿದ್ದಾರೆ ಎಂದರು.

ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ನಾವು ಹೆದರುವುದಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ