ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದ ಬಿ.ಎಸ್. ಯಡಿಯೂರಪ್ಪ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 16, 2024 | 3:04 PM

ಲೋಕಸಭಾ ಚುನಾವಣೆ(Lok sabha election) ಕಾವು ಜೋರಾಗಿದೆ. ಇದರ ಬೆನ್ನಲ್ಲೇ ಇಂದು(ಮಾ.16) ಕಲ್ಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ಹಮ್ಮಿಕೊಂಡಿದ್ದು, ಈ ಮಧ್ಯೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa), ‘ಕಲ್ಯಾಣ ಕರ್ನಾಟಕಕ್ಕೆ ಮೋದಿ ಅವರು ಹೆಚ್ಚು ಆಸಕ್ತಿಯನ್ನ ಕೊಟ್ಟಿದ್ದು, ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಈ ಮೂಲಕ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದರು.

ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದ ಬಿ.ಎಸ್. ಯಡಿಯೂರಪ್ಪ
ಬಿಎಸ್​ ಯಡಿಯೂರಪ್ಪ
Follow us on

ಕಲಬುರಗಿ, ಮಾ.16: ಲೋಕಸಭಾ ಚುನಾವಣೆ(Lok sabha election) ಕಾವು ಜೋರಾಗಿದೆ. ಇದರ ಬೆನ್ನಲ್ಲೇ ಇಂದು(ಮಾ.16) ಕಲ್ಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕಲಬುರಗಿಗೆ ಆಗಮಿಸಿದ್ದಾರೆ. ಈ ಮಧ್ಯೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa), ‘ರಾಜ್ಯಕ್ಕೆ ಮೋದಿ ಅವರು ಸಾಕಷ್ಟು ಅನುದಾನ ಕೊಟ್ಟಿದ್ದು, ಕಲ್ಯಾಣ ಕರ್ನಾಟಕದಿಂದಲೇ ಪ್ರಧಾನಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು

ಕಲ್ಯಾಣ ಕರ್ನಾಟಕಕ್ಕೆ ಮೋದಿ ಹೆಚ್ಚು ಆಸಕ್ತಿಯನ್ನ ಕೊಟ್ಟಿದ್ದು, ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಈ ಮೂಲಕ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದರು. ಇದೇ ವೇಳೆ ‘ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಕೇವಲ ಪ್ರಚಾರಕ್ಕಾಗಿ ಕೆಲವರ ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ. ಯಾವುದೋ ಕಾರಣದಿಂದ ವಿಧಾನಸಭೆಯಲ್ಲಿ ಹಿನ್ನಡೆಯಾಗಿರಬಹುದು ಅಷ್ಟೇ, ರಾಜ್ಯದ 28 ಕ್ಷೇತ್ರದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನಾದರೂ ಗೆಲ್ಲಲಿ ನೋಡೋಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿ ಮೋದಿ ರಣಕಹಳೆ; ಇಂದು ಕಲಬುರಗಿಯಲ್ಲಿ ಮೋದಿ ಮಿನಿ ರೋಡ್​ ಶೋ

ಈಶ್ವರಪ್ಪರನ್ನ ಯಡಿಯೂರಪ್ಪ ಕುಟುಂಬ ರಾಜಕೀಯವಾಗಿ ಮುಗಿಸ್ತಿದೆ-ಮುಕಡಪ್ಪ

ಇತ್ತ ಬೆಂಗಳೂರಿನ ಪ್ರೆಸ್ ಕ್ಲಬ್​ನಲ್ಲಿ ನಡೆಯುತ್ತಿರುವ ‌ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ದಲಿತ ಸಮುದಾಯಗಳ ಒಕ್ಕೂಟದ ಮುಖಂಡ ಮುಕಡಪ್ಪ, ‘ಮಾಜಿ ಸಚಿವ ಈಶ್ವರಪ್ಪ ಪುತ್ರ ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಡಿಯೂರಪ್ಪ ವಿರುದ್ದ ಕಿಡಿಕಾರಿದ್ದಾರೆ. ‘ಈಶ್ವರಪ್ಪರನ್ನ, ಯಡಿಯೂರಪ್ಪ ಕುಟುಂಬ ರಾಜಕೀಯವಾಗಿ ಮುಗಿಸುತ್ತಿದೆ ಎಂದಿದ್ದಾರೆ. ನಮಗೆ ಮೋದಿ ಅವರೇ ಗೆಲ್ಲಬೇಕು ಎಂಬ ಆಸೆಯಿದೆ. ಆದ್ರೆ, ಯಡಿಯೂರಪ್ಪ ಅವರ ಕೆಟ್ಟ ಬುದ್ದಿಯಿಂದ ಕುರುಬರಿಗೆ ಬಿಜೆಪಿಯಿಂದ ಅನ್ಯಾಯ ಆಗುತ್ತಿದೆ ಎಂದು ಯಡಿಯೂರಪ್ಪ ವಿರುದ್ದ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ