ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಶಾಲಾ ಸಿಬ್ಬಂದಿ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದರು.ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಇಮೇಲ್ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.

ಕಲಬುರಗಿ, ಫೆಬ್ರವರಿ 04: ಕಲಬುರಗಿಯ (Kalaburagi) ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಸಂದೇಶ ಕಂಡ ಕೂಡಲೆ ಶಾಲೆಯ ಸಿಬ್ಬಂದಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ. ಅಶೋಕ ನಗರ ಠಾಣೆ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಸಂದೇಶ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಪರಿಶೀಲನೆ ನಡೆಸಿದೆ. ಮೇಲ್ನಲ್ಲಿ ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತಮಿಳು ಮೇಲ್ ಐಡಿಯಿಂದ ಇ-ಮೇಲ್ ಸಂದೇಶ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:32 pm, Tue, 4 February 25