AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಭೈರೇಗೌಡ ಇದ್ದಾಗಲೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ​

ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ. ​ವಿಚಾರ ತಿಳಿದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರ ದೌಡಾಯಿಸಿ, ತಪಾಸಣೆ ನಡೆಸಿದರು.

ಕೃಷ್ಣಭೈರೇಗೌಡ ಇದ್ದಾಗಲೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ  ​
ಕಲಬುರಗಿ ವಿಮಾನ ನಿಲ್ದಾಣ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ|

Updated on:Jun 24, 2024 | 1:00 PM

Share

ಕಲಬುರಗಿ, ಜೂನ್​ 24: ಕಲಬುರಗಿ ವಿಮಾನ ನಿಲ್ದಾಣವನ್ನು (Kalaburagi Airport) ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್​ ಬೆದರಿಕೆ ಇ-ಮೇಲ್ (Bomb Threat E-Mail) ಬಂದಿದೆ. ​ವಿಚಾರ ತಿಳಿದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರ ದೌಡಾಯಿಸಿದ್ದಾರೆ. ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ ಬ್ಯಾಗ್​​ಗಳನ್ನು ಅಧಿಕಾರಿಗಳು ಸತತ ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಿದರು. ಯಾವುದೆ ಬಾಂಬ್​ ಪತ್ತೆಯಾಗಿಲ್ಲ. ಹುಸಿ ಬಾಂಬ್​ ಬೆದರಿಕೆ ಇ-ಮೆಲ್ ಕಳುಹಿಸಿದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್​ ಬೆದರಿಕೆ ಮೇಲ್​ ಬಂದ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ವಿಮಾನ ನಿಲ್ದಾಣದಲ್ಲಿದ್ದರು. ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರನ್ನು ಹೊರಗೆ ಬಿಡಲಿಲ್ಲ.  ನನಗೂ ಅರ್ಧ ಗಂಟೆ ಸಮಯ ವಿಳಂಬವಾಯಿತು. ಈ ರೀತಿಯ ಕರೆಗಳು ಬರುತ್ತಿರುತ್ತವೆ, ಕೆಲವರು ಸುಮ್ಮನೆ ಅನಾಮಧೇಯ ಕರೆ ಮಾಡುತ್ತಿರುತ್ತಾರೆ‌. ವಿಮಾನ ನಿಲ್ದಾಣದ ಸಿಬ್ಬಂದಿಗಳು ತಪಾಸಣೆ ನಡೆಸಿದರು. ಇದರಿಂದ ನನಗೆ ಅಧಿಕಾರಿಗಳ ಜೊತೆ ಸಭೆ ನಡೆಸಲು ನಿಗಧಿಗಿಂತ ಸಮಯಕ್ಕಿಂತ ಅರ್ಧಗಂಟೆ ವಿಳಂಬವಾಗಿದ್ದು ಬಿಟ್ಟರೆ ಮತ್ತೇನಾಗಿಲ್ಲ. ಅಲ್ಲಿ ಯಾವುದೇ ರೀತಿಯ ಆತಂಕ ಇರಲಿಲ್ಲ. ಅದೊಂದು ಅನಾಮಧೆಯ ಕರೆ ಅನ್ನಿಸುತ್ತೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಬೆಂಗಳೂರು ವಿಮಾನ ನಿಲ್ದಾಣಕ್ಕೂ ಬಾಂಬ್​ ಬೆದರಿಕೆ

ಇದೇ ವರ್ಷ ಏ.29 ರಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ವಿಮಾನ ನಿಲ್ದಾಣದ ಮ್ಯಾನೇಜರ್​​ ಅವರ ಮೇಲ್​ಗೆ “ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಸಂದೇಶ ಬಂದಿತ್ತು.

ಇದನ್ನೂ ಓದಿ: ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದಾದ ಬಳಿಕವೂ ಕೆಲವು ಬಾರಿ ಹುಸಿ ಬಾಂಬ್ ದಾಳಿ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:16 am, Mon, 24 June 24