ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಕೆಲ ಕಾಲ ಆತಂಕ ಸೃಷ್ಟಿ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ನಡೆದಿದೆ.
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ನಡೆದಿದೆ. ಜೇವರ್ಗಿಯಲ್ಲಿ ನಡೆಯುತ್ತಿರವ ವಿಜಯ ಸಂಕಲ್ಪ ರಥಯಾತ್ರೆ ಸಂಬಂಧ ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಬಿಎಸ್ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಲಾಗಿರೋ ಪ್ಲಾಸ್ಟಿಕ್ ಚೀಲಗಳನ್ನು ಹಾಕಿದ್ದರು. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೆ ಎಚ್ಚತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲೆಟ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
Published On - 12:51 pm, Mon, 6 March 23