Cabinet Meeting: ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆ; ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ನೀಡಲು ನಿರ್ಧರಿಸಲಾಗಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಲ್ಯಾಣ ಕರ್ನಾಟಕ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Cabinet Meeting: ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆ; ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
ಸಿಎಂ ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: ಸುಷ್ಮಾ ಚಕ್ರೆ

Updated on:Sep 17, 2024 | 5:24 PM

ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ನೀಡಲಾಗಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದ್ದು, ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ. ಇದರ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಲಿವೆ. 9 ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. 2 ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ನಿರ್ಧಾರ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. 9 ತಾಲೂಕು ಆಸ್ಪತ್ರೆ ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 2 ತಾಲೂಕು ಆಸ್ಪತ್ರೆಗಳು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಲಿವೆ. ಒಟ್ಟು 890 ಕೋಟಿ ರೂ. ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಬಗ್ಗೆ ಚರ್ಚೆ ನಡೆಸಲಾಗಿದೆ.

ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ 56 ಕೋಟಿ ರೂ. ಮೊತ್ತದಲ್ಲಿ ಅನುದಾನ ನೀಡಲು ಒಪ್ಪಿಗೆ ಪಡೆಯುವ ಬಗ್ಗೆ ಚರ್ಚೆ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೆಲಂಗಾಣ ಗಡಿ ಪುಟ್ಟ ಪಾಕ ರಾಜ್ಯ ಹೆದ್ದಾರಿ ಕಾಗಿನ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 53 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ: ನಾವು ಬಡವರಿಗಾಗಿ ಕೆಲಸ ಮಾಡಿದರೆ ಕೆಲವರಿಗೆ ಹೊಟ್ಟೆಕಿಚ್ಚು; ವಿಪಕ್ಷಕ್ಕೆ ಚಾಟಿ ಬೀಸಿದ ಸಿಎಂ ಸಿದ್ದರಾಮಯ್ಯ

ಆಸ್ಪತ್ರೆಗಳಿಗೆ ಪೀಠೋಭಕರಣಗಳ ಗಳ ಖರೀದಿ ಹಾಗೂ ಮಾನವ ಸಂಪನ್ಮೂಲಗಳ ಪಡೆಯುವ ಸಲುವಾಗಿ ಒಟ್ಟು 890 ಕೋಟಿ ರೂ. ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚೆ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಯನ್ನು 56 ಕೋಟಿ ರೂಪಾಯಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಬಗ್ಗೆ ಚರ್ಚೆ ನಡೆಸಲಾಗಿದೆ.

ಇದರ ನಡುವೆ, ಕೊಪ್ಪಳ ಜಿಲ್ಲೆ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಕಲ್ಪಿಸಲು ನೂರು ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ 77.28 ಎಕರೆ ಸ್ವಾಧೀನ ಪಡಿಸಿಕೊಳ್ಳಲು 29.51 ಕೋಟಿಗಳನ್ನು ಕೊಪ್ಪಳ ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಅಂಜನಾದ್ರಿ ಬೆಟ್ಟ, ಬಳ್ಳಾರಿ ಕೋಟೆ, ಬೈಲಾಪುರ ಮೈಲಾರಲಿಂಗೇಶ್ವರ ದೇವಸ್ಥಾನಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರೋಪ್ ವೇ ಅಭಿವೃದ್ಧಿಪಡಿಸಲು ತಾತ್ವಿಕ ಅನುಮೋದನೆ ನೀಡುವ ಸಾಧ್ಯತೆಯಿದೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಅಶೋಕನ ಶಿಲಾ ಶಾಸನ ಪ್ರದೇಶದಲ್ಲಿ 10 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳನ್ನು ಒದಗಿಸಲು ಅನುಮೋದನೆ ಸಿಗುವ ನಿರೀಕ್ಷೆಯಿದೆ. ಕಲಬುರಗಿ ಜಿಲ್ಲೆಯಲ್ಲಿ 515 ನೂತನ ಅಂಗನವಾಡಿ ಕಟ್ಟಡಗಳನ್ನು 118.45 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ.

ಇದನ್ನೂ ಓದಿ:  ಕಲಬುರಗಿಯನ್ನು ಸ್ಮಾರ್ಟ್​ ಸಿಟಿ ಮಾಡಲು 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ ಸೇಡಂ ತಾಲೂಕಿನ ಕಾಚೂರ ಗ್ರಾಮದ ಹತ್ತಿರ ಏತ ನೀರಾವರಿ ಯೋಜನೆಯನ್ನು 82.5 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಸಾಧ್ಯತೆಯಿದೆ. 77.28 ಎಕರೆ ಸ್ವಾಧೀನ ಪಡಿಸಿಕೊಳ್ಳಲು 29.51 ಕೋಟಿಗಳನ್ನು ಕೊಪ್ಪಳ ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ. ಕನ್ನಡದ ಪ್ರಾಚೀನ ವಿಶ್ವವಿದ್ಯಾನಿಲಯವೆಂದು ಪ್ರಖ್ಯಾತಿ ಹೊಂದಿರುವ ನಾಗಾವಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 68 ಕೋಟಿ ರೂ. ಅಂದಾಜು ಮೊತ್ತಕ್ಕೆ ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ. ಯಾದಗಿರಿ ಜಿಲ್ಲೆ, ಯಾದಗಿರಿ ಕೋಟೆಯ ಸಮಗ್ರ ಅಭಿವೃದ್ಧಿ ಮತ್ತು ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲು 95 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡುವ ಸಾಧ್ಯತೆಯಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Tue, 17 September 24

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು