Kalaburagi News: ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿ ಸಾವು; ಲಿಕ್ವಿಡ್ ಆಕ್ಸಿಜನ್ ಕೊರತೆಯೇ ಕಾರಣವೆಂದ ಸಂಬಂಧಿಕರು

ಜಿಲ್ಲೆಯ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿ ಝಕೀರಾ ಬೇಗಂ(50) ಸಾವನ್ನಪ್ಪಿದ್ದು, ಲಿಕ್ವಿಡ್ ಆಕ್ಸಿಜನ್ ಕೊರತೆಯೇ ಇದಕ್ಕೆ ಕಾರಣವೆಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.

Kalaburagi News: ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿ ಸಾವು; ಲಿಕ್ವಿಡ್ ಆಕ್ಸಿಜನ್ ಕೊರತೆಯೇ ಕಾರಣವೆಂದ ಸಂಬಂಧಿಕರು
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 27, 2023 | 3:14 PM

ಕಲಬುರಗಿ: ಜಿಲ್ಲೆಯ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿ ಝಕೀರಾ ಬೇಗಂ(50) ಸಾವನ್ನಪ್ಪಿದ್ದು, ಲಿಕ್ವಿಡ್ ಆಕ್ಸಿಜನ್ ಕೊರತೆಯೇ ಇದಕ್ಕೆ ಕಾರಣವೆಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ. ಇಂದು(ಮೇ.27) ಬೆಳಗ್ಗೆ ಆಸ್ಪತ್ರೆಯಲ್ಲಿ ಆಕ್ಸಿಜನ್​ ಖಾಲಿಯಾಗಿತ್ತು, ಆಕ್ಸಿಜನ್ ಖಾಲಿಯಾಗಿದ್ದರಿಂದ ಮೂವರಲ್ಲಿ ಓರ್ವ ರೋಗಿ ಝಕೀರಾ ಬೇಗಂ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. ಮತ್ತೊಬ್ಬ ರೋಗಿಯನ್ನ ಕಲಬುರಗಿ(Kalaburagi)ಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಬೆಳಗ್ಗೆ 2 ಗಂಟೆಗಳ ಕಾಲ ಆಕ್ಸಿಜನ್ ಖಾಲಿಯಾಗಿತ್ತು. ಆಕ್ಸಿಜನ್ ಖಾಲಿಯಾಗಿದ್ದರಿಂದ ಕನ್ಯಾಕುಮಾರಿ ಬೇರೆಡೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಆಕ್ಸಿಜನ್​ ಖಾಲಿಯಾಗಿರುವ ಆರೋಪವನ್ನ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ. ಹೌದು ಹಾಗೆನಾದರೂ ಆಕ್ಸಿಜನ್​ ಕಾಲಿಯಾಗಿದ್ದರೆ 15 ರಿಂದ 20 ನಿಮಿಷದಲ್ಲಿಯೇ ಬರ್ತಾ ಇತ್ತು, ಮೃತ ಝಕೀರಾ ಬೇಗಂ ಕ್ಯಾನ್ಸರ್​ ತೀವ್ರತೆಯಿಂದ ಬಳಲಿ ಮೃತಪಟ್ಟಿದ್ದಾರೆಂದು ವೈದ್ಯರು ಹೇಳಿದ್ದಾರೆ.

ಬೈಕ್ ಮತ್ತು ಕಾರು ನಡುವೆ ಡಿಕ್ಕಿ, ಇಬ್ಬರಿಗೆ ಗಾಯ

ಮಂಗಳೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಮಂಗಳೂರು ತಾಲೂಕಿನ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ಘಟನೆ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಹಿಂಬದಿ ಸವಾರ ಮೇಲೆ ಹಾರಿ‌ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಕಾಲು, ತಲೆ ಭಾಗಕ್ಕೆ ಪೆಟ್ಟು ಬಿದ್ದಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಕೊರೊನಾಗೆ 13 ತಿಂಗಳ ಮಗು ಬಲಿ, ಆಕ್ಸಿಜನ್ ಕೊರತೆ ಕಾರಣವೆಂದು ಕಣ್ಣೀರಿಟ್ಟ ತಂದೆ

ಪಿಎಸ್‌ಐ ಮನೆಗೆಯೇ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ

ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆಯೇ ದುಷ್ಕರ್ಮಿಗಳು ಬೆಂಕಿ (Fire) ಹಚ್ಚಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ (PSI) ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ