ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್‌: ಸಾವು ಬದುಕಿನ ನಡುವೆ ಹೋರಾಟ, ಹದಿನೈದು ಗಂಟೆಯಾದ್ರೂ ದಾಖಲಾಗದ ಮೊಕದ್ದಮೆ

ಸಿಪಿಐ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಒಳ್ಳೆಯ ಕಡೆ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್‌: ಸಾವು ಬದುಕಿನ ನಡುವೆ ಹೋರಾಟ, ಹದಿನೈದು ಗಂಟೆಯಾದ್ರೂ ದಾಖಲಾಗದ ಮೊಕದ್ದಮೆ
ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಸಿಪಿಐ ಶ್ರೀಮಂತ ಇಲ್ಲಾಳ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 24, 2022 | 5:05 PM

ಕಲಬುರಗಿ: ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್‌ ಹಿನ್ನೆಲೆ ಹಲ್ಲೆ ನಡೆದು ಹದಿನೈದು ಗಂಟೆಯಾದ್ರೂ ಮೊಕದ್ದಮೆ ದಾಖಲಾಗಿಲ್ಲ. ಯಾವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಬೇಕೆಂಬ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಗೊಂದಲ ಉಂಟಾಗಿದೆ. ಹಲ್ಲೆಯಾಗಿರೋದು ಮಹಾರಾಷ್ಟ್ರದ ಉಮ್ಮರ್ಗಾ ಠಾಣಾ ವ್ಯಾಪ್ತಿಯಲ್ಲಿ. ಗಾಂಜಾ ಬೆಳೆದ ಜಮೀನು ಇರೋದು ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ. ಹೀಗಾಗಿ ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕೆಂಬ ಗೊಂದಲ ಉಂಟಾಗಿದ್ದು, ಮಂಠಾಳ ಠಾಣೆಯಲ್ಲಿ ಕೇಸ್ ದಾಖಲಿಸುವಂತೆ ಪೊಲೀಸರು ಹೇಳುತ್ತಿದ್ದಾರೆ. ಉಮ್ಮರ್ಗಾ ಠಾಣೆಯಲ್ಲಿ ಕೇಸ್ ದಾಖಲಿಸಿಕೊಳ್ಳಲು ಪೊಲೀಸರು ನಕಾರವೆತ್ತಿದ್ದಾರೆ. ಹಾಗಾಗಿ ಸ್ವತಃ ಸಿಪಿಐ ಮೇಲೆ ಹಲ್ಲೆಯಾದರೂ ಇನ್ನೂ ಮೊಕದ್ದಮೆ ದಾಖಲಾಗಿಲ್ಲ.

ಸಿಪಿಐ ಸಾವು ಬದುಕಿನ ನಡುವೆ ಹೋರಾಟ

ಹಲ್ಲೆ ಕುರಿತಾಗಿ ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಒಬ್ಬ ಇನ್ಸ್​ಪೆಕ್ಟರ್​ ಮೇಲೆ 30 ಜನರು ದಾಳಿ ಮಾಡಿದ್ದಾರೆ. ಸಿಪಿಐ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಒಳ್ಳೆಯ ಕಡೆ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿಗೆ ಕರೆತಂದು ಚಿಕಿತ್ಸೆ ಕೊಡಲು ವಿಳಂಬವಾಗುತ್ತದೆ. ಹೀಗಾಗಿ ಹೈದರಾಬಾದ್​​ ಆಸ್ಪತ್ರೆಗೆ ಕರೆದೊಯ್ಯಲು ಸಿದ್ದತೆ ನಡೆಯುತ್ತಿದೆ. ವೈದ್ಯರ ಅನುಮತಿ ಸಿಕ್ಕಿದ ತಕ್ಷಣ ಹೈದರಾಬಾದ್​ಗೆ ಶಿಫ್ಟ್ ಮಾಡಲಾಗುವುದು ಎಂದು ​​ಆರಗ ಜ್ಞಾನೇಂದ್ರ ಹೇಳಿದರು.

ಘಟನೆ ಹಿನ್ನೆಲೆ:

ಗಾಂಜಾ ಮಾರಾಟಗಾರ ಸಂತೋಷ್​ನನ್ನು ಎರಡು ದಿನದ ಹಿಂದೆ ಪೊಲೀಸರು ಬಂಧಿಸಿದ್ದರು. ಆರೋಪಿಯ ಮಾಹಿತಿ ಮೇರೆಗೆ ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ತರೂರಿ ಬಳಿ ಗಾಂಜಾ ಬೆಳೆಯುತ್ತಿದ್ದ ಗ್ಯಾಂಗ್ ಪತ್ತೆ ಮಾಡಲು ಶ್ರೀಮಂತ ಇಲ್ಲಾಳ್ ಮತ್ತು ಸಿಬ್ಬಂದಿ ಹೋಗಿದ್ದರು. ಈ ವೇಳೆ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ದಿಢೀರನೆ ನಲವತ್ತು ಜನರ ತಂಡ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಶ್ರೀಮಂತ ಇಲ್ಲಾಳ ಅವರ ಸ್ಥಿತಿ ಗಂಭೀರವಾಗಿದೆ. ಇನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಎಸ್​​ಪಿ ಇಶಾ ಪಂತ್ ಭೇಟಿ ನೀಡಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಮಾತನಾಡಿದ ಪೊಲೀಸ್​ ವರಿಷ್ಠಾಧಿಕಾರಿ ಇಶಾ ಪಂತ್, ಗಾಂಜಾ ಜಪ್ತಿ​​ ಮಾಡಲು ಹೋಗಿದ್ದಾಗ ದಾಳಿ ನಡೆದಿದೆ. ಮಹಾರಾಷ್ಟ್ರದ ಗಡಿ ಉಮ್ಮರ್ಗಾ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಆಗಿದೆ. 30ಕ್ಕೂ ಹೆಚ್ಚು ಜನರು ದಿಢೀರ್​​ ಅಟ್ಯಾಕ್ ಮಾಡಿದ್ದಾರೆ. ಸಿಪಿಐ ಆರೋಗ್ಯದ ಕುರಿತು ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಏರ್​ಲಿಫ್ಟ್​ ಮಾಡಿ ಬೇರೆಡೆ ಚಿಕಿತ್ಸೆ ಕೊಡಿಸುವ ಬಗ್ಗೆ ಚಿಂತನೆ ನಡೆದಿದೆ. ಗೃಹಸಚಿವರು, ಎಲ್ಲ ಹಿರಿಯ ಅಧಿಕಾರಿಗಳು ಮಾತಾಡಿದ್ದಾರೆ ಎಂದರು.

ಇನ್ನು ಶ್ರೀಮಂತ ಇಲ್ಲಾಳ ಅವರಿಗೆ ಡಾ.ಸುದರ್ಶನ್ ಲಾಖೆ, ಡಾ.ರಾಕೇಶ್ ನೇತ್ರತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಮಾಧ್ಯಮಗಳಿಗೆ ಆಸ್ಪತ್ರೆಯ ವೈದ್ಯ ಡಾ ಸುದರ್ಶನ ಆರೋಗ್ಯ ಸಂಬಂಧ ಮಾಹಿತಿ ನೀಡಿದ್ದಾರೆ. ಸದ್ಯ ಶ್ರೀಮಂತ್ ಇಲ್ಲಾಖ್ ಕಂಡೀಷನ್ ಕ್ರಿಟಿಕಲ್ ಇದೆ. ದೇಹದ ವಿವಿದೆಡೆ ಗಾಯಗಳಾಗಿವೆ. ಪಕ್ಕೆಲಬು, ಮುಖದ ಎಲಬುಗಳು ಮುರಿದಿವೆ. ಮೆದುಳಿನ ಕೆಲ ಭಾಗಕ್ಕೆ ಗಾಯಗಳಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವ ಕೂಡಾ ಆಗಿದೆ. ಮುಂಜಾನೆ ನಾಲ್ಕು ಗಂಟೆಗೆ ಆಸ್ಪತ್ರೆಗೆ ಬಂದಿದ್ದಾರೆ. ಅವರ ಆರೋಗ್ಯ ಸುಧಾರಣೆಗೆ ಎಲ್ಲಾ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್ ನಲ್ಲಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Sat, 24 September 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ