AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raids: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: ಬೆಂಗಳೂರು ಸೇರಿದಂತೆ ಕರ್ನಾಟಕದ 60 ಕಡೆ ಎಸಿಬಿ ದಾಳಿ

ACB Raids in Karnataka: ಕರ್ನಾಟಕ ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಲಿದ್ದು, ಬಳಿಕ ಪರಿಶೀಲನೆಗೂ ಮುಂದಾಗಲಿದ್ದಾರೆ.

ACB Raids: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: ಬೆಂಗಳೂರು ಸೇರಿದಂತೆ ಕರ್ನಾಟಕದ 60 ಕಡೆ ಎಸಿಬಿ ದಾಳಿ
ಭ್ರಷ್ಟಾತಿಭ್ರಷ್ಟ ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ದಾಳಿ
TV9 Web
| Updated By: preethi shettigar|

Updated on:Nov 24, 2021 | 11:53 AM

Share

ಬೆಂಗಳೂರು: ನಗರದಲ್ಲಿ ಬೆಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿಗೆ (ACB Raid) ಮುಂದಾಗಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದಾದ್ಯಂತ ಒಟ್ಟು 60 ಕಡೆ ದಾಳಿ ನಡೆಸಿರುವ ಎಸಿಬಿ ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಲಿದ್ದು, ಬಳಿಕ ಪರಿಶೀಲನೆಗೂ ಮುಂದಾಗಲಿದ್ದಾರೆ. ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್,  ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ,  ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ತಂಡದಿಂದ ದಾಳಿ ನಡೆಯಲಿದೆ.

15 ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ ಹಿನ್ನೆಲೆ, 8 ಜನ ಎಸಿಬಿ, 100 ಎಸ್​ಪಿ, 300 ಜನ ಸಿಬ್ಬಂದಿ ಸೇರಿ ಒಟ್ಟು 408 ಜನರಿಂದ  ದಾಳಿ ನಡೆಯಲಿದೆ.

ದೊಡ್ಡಬಳ್ಳಾಪುರದಲ್ಲೂ ಎಸಿಬಿ ಅಧಿಕಾರಿಗಳ ದಾಳಿ ರೆವಿನ್ಯೂ ಇನ್ಸ್‌ಪೆಕ್ಟರ್ ಲಕ್ಷ್ಮೀನರಸಿಂಹಯ್ಯ ಎಂಬುವರ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ತೇರಿನ ಬೀದಿಯಲ್ಲಿನ ಮನೆ ಮೇಲೆ ದಾಳಿ ಮಾಡಿದ್ದು, ಬೆಳಗಿನಿಂದ ಅಧಿಕಾರಿಗಳು ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ಮಾಡುತ್ತಿದ್ದಾರೆ.

ಕಲಬುರಗಿ: ಅಕ್ರಮ ಆಸ್ತಿ ಗಳಿಸಿದ ಆರೋಪ; ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ದಾಳಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ (PWD) ಜೆ.ಇ. ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದಾರ್‌ ಅವರ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು, ಜೆ.ಇ. ಶಾಂತಗೌಡ ಬಿರಾದಾರ್‌ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕಲಬುರಗಿ ಪಿಡಬ್ಲೂಡಿ ಅಧಿಕಾರಿ ಬಳಿ ಕೋಟಿ ಕೋಟಿ ಆಸ್ತಿ ಪತ್ತೆ: ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿದ್ದು, ಕಲಬುರಗಿ ಗುಬ್ಬಿ ಕಾಲೋನಿಯಲ್ಲಿ ಮೂರಂತಸ್ತಿನ ಭವ್ಯ ಬಂಗಲೆ, ವಿವಿ ರಸ್ತೆಯಲ್ಲಿ ಎರಡು ನಿವೇಶನ, ಯಡ್ರಾಮಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ 40 ಎಕರೆ ಜಮೀನು, ಹಂಗರಗಾ ಗ್ರಾಮದಲ್ಲಿ ಮೂರು ಮನೆಗಳು ಸೇರಿ ಕೋಟಿ ಕೋಟಿ ಆಸ್ತಿ ಪತ್ತೆಯಾಗಿದೆ. ಇನ್ನು ಬೆಂಗಳೂರಿನಲ್ಲೂ ಆಸ್ತಿ ಇರುವ ಮಾಹಿತಿ ಸಿಕ್ಕಿದ್ದು, ಎರಡು ಕಾರ್, ಎರಡು ಬೈಕ್ ಸೇರಿ ವಾಹನಗಳು ಸಹ ಪತ್ತೆಯಾಗಿದೆ.

ಮಂಡ್ಯ: ಜಿಲ್ಲೆಯಲ್ಲಿ ಎಸಿಬಿ ದಾಳಿ ನಿವೃತ್ತ ಸಬ್ ರಿಜಿಸ್ಟಾರ್ ಕೆ. ಎಸ್. ಶಿವಾನಂದ್ ಮನೆ ಮೇಲೆ ಬಳ್ಳಾರಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸಿ ಜುಲೈ 30 ರಂದು ನಿವೃತ್ತರಾಗಿದ್ದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಹಾಗೂ ಬೆಂಗಳೂರಿನ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯ:  ಕೆ. ಆರ್. ಪೇಟೆಯ ಶ್ರೀನಿವಾಸ್ ಇಇ ಮನೆ ಮೇಲೆ ಎಸಿಬಿ ದಾಳಿ ಹೇಮಾವತಿ ಜಲಾಶಯ ಯೋಜನೆಯ 3 ನೇ ವಿಭಾಗದ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ ಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹೇಮಾವತಿ ನದಿಯಲ್ಲಿ ಪ್ರವಾಹ ಇಲ್ಲದಿದ್ದರೂ ಪ್ರವಾಹ ಉಂಟಾಗಿದೆ ಎಂದು ಯಾವುದೇ ಟೆಂಡರ್ ಕರೆಯದೆ ಅನಾವಶ್ಯಕ ಕಾಮಗಾರಿ ನಡೆಸಿ ಸುಮಾರು 20 ಕೋಟಿ ರೂ. ಅವ್ಯವಹಾರದ ಆರೋಪ ಶ್ರೀನಿವಾಸ್​ ಮೇಲೆ ಇದೆ. ಇದಲ್ಲದೆ ನೂರಾರು ಕೋಟಿ ರೂ. ನಾಲೆಯ ಆಧುನೀಕರಣ ಕಾಮಗಾರಿ ನಡೆಸಲಾಗಿತ್ತು. ಈ ವೇಳೆಯೂ ಕಳಪೆ ಕಾಮಗಾರಿ ನಡೆಸಿ ಹಣ ವಂಚಿಸಿರುವ ಬಗೆಗೂ ದೂರುಗಳು ಕೇಳಿ ಬಂದಿದ್ದವು. ಸದ್ಯ ಮೈಸೂರಿನ ಬೋಗಾದಿಯಲ್ಲಿರುವ ನಿವಾಸ ಹಾಗೂ ನಂಜನ ಗೂಡಿನ ಹದಿನಾರು ಗ್ರಾಮದ ಫಾರ್ಮ್ ಹೌಸ್ ಮೇಲೆ‌ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಅಧಿಕಾರಿಗಳಿಗೆ ಎಸಿಬಿ ಶಾಕ್ ಮೂವರು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆರ್‌ಟಿಒ ಮೋಟಾರು ವೆಹಿಕಲ್ ಇನ್ಸ್‌ಪೆಕ್ಟರ್‌ ಸದಾಶಿವ ಮರಲಿಂಗಣ್ಣನವರ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ, ಬೆಳಗಾವಿ ಹೆಸ್ಕಾಂ ವಿಭಾಗದ ಗ್ರೂಪ್ ಸಿ ನೌಕರ ನಾತಾಜಿ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿರುವ ಮನೆ ಸೇರಿ ಒಟ್ಟು 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:

Cricket Betting: ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: 5 ಲಕ್ಷ ರೂ. ವಶಕ್ಕೆ

ಅನರ್ಹ ವ್ಯಕ್ತಿಗೆ ಪರಿಹಾರ, ನಿವೇಶನಗಳ ಅಕ್ರಮ ಹಂಚಿಕೆ: ಬಿಡಿಎ ಕಚೇರಿಗಳ ಮೇಲೆ ಎಸಿಬಿ ದಾಳಿ ವೇಳೆ ಹಲವು ಅಕ್ರಮಗಳು ಬಯಲಿಗೆ

Published On - 7:56 am, Wed, 24 November 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?