AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬಿಸಿಯೂಟಕ್ಕಾಗಿ 2 ಕಿ.ಮೀ. ದೂರ ನಡೆಯುತ್ತಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಹಿರಿಯ ಪ್ರಾಥಮಿಕ ಶಾಲಯಲ್ಲಿ ಮಕ್ಕಳ ಗೋಳು ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ. ಮಧ್ಯಾಹ್ನದ ಬಿಸಿಯೂಟಕ್ಕಾಗಿ ಬರೋಬ್ಬರಿ 2 ಕಿ.ಮೀ. ನಡೆಯಬೇಕಾದ ಪರಿಸ್ಥಿತಿ ಇಲ್ಲಿನ ಮಕ್ಕಳದ್ದಾಗಿದೆ.

ಕಲಬುರಗಿ: ಬಿಸಿಯೂಟಕ್ಕಾಗಿ 2 ಕಿ.ಮೀ. ದೂರ ನಡೆಯುತ್ತಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಸಿ ಊಟಕ್ಕಾಗಿ 2 ಕಿ.ಮೀ ನಡೆಯುತ್ತಿರುವ ಲಾಡ್ಲಾಪುರ ಗ್ರಾಮದ ಹಿರಿಯ ಪ್ರಾಥಮಿಕ ಶಾಲಯ ಮಕ್ಕಳು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Dec 01, 2023 | 2:02 PM

Share

ಕಲಬುರಗಿ, ಡಿ.1: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರೇ.. ನಿಮ್ಮ ತವರು ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಒಂದು ಹೊತ್ತಿನ ಊಟಕ್ಕಾಗಿ ಅಲೆದಾಡುತ್ತಿದ್ದಾರೆ. ಇವರ ಗೋಳು ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ. ಮಧ್ಯಾಹ್ನದ ಬಿಸಿ ಊಟ ಮಾಡಲು ವಿದ್ಯಾರ್ಥಿಗಳು ಬರೋಬ್ಬರಿ 2 ಕಿಲೋ ಮೀಟರ್ ನಡೆದುಕೊಂಡು ಹೋಗುತ್ತಿದ್ದಾರೆ.

ಊಟಕ್ಕಾಗಿ ವಿದ್ಯಾರ್ಥಿಗಳು ಬಿಸಿಲಿನಲ್ಲೇ ಎರಡು ಕಿಲೋ ಮೀಟರ್ ನಡೆದುಕೊಂಡು ಹೋಗುತ್ತಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಶಾಲೆಯಿಂದ ಎರಡು ಕಿ.ಮೀ. ದೂರದಲ್ಲಿರುವ ಪಾಕಶಾಲೆಗೆ ಮಕ್ಕಳು ಕೆರೆಯೇರಿ ಹತ್ತಿಕೊಂಡು ಕಲ್ಲಮುಳ್ಳು ಲೆಕ್ಕಿಸದೇ ಹೋಗುತ್ತಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಡ್ರಾಪ್‌ಔಟ್‌ ಸಂಖ್ಯೆಯಲ್ಲಿ ಏರಿಕೆ; ಉನ್ನತ ಶಿಕ್ಷಣದಲ್ಲಿ ಆಳವಾಗಿ ಬೇರೂರಿರುವ ಸಮಸ್ಯೆಗಳನ್ನು ಬಹಿರಂಗಪಡಿಸುತ್ತದೆ

ಸುಮಾರು 150ಕ್ಕೂ ಹೆಚ್ಚು ಮಕ್ಕಳು ಎಲ್ಲಿ ತಮಗೆ ಹಾವು, ಚೇಳು ಕಚ್ಚುತ್ತೋ ಎಂಬ ಭಯದಲ್ಲೇ ಪ್ರತಿನಿತ್ಯ ನಡೆದುಕೊಂಡು ಹೋಗುತ್ತಿದ್ದಾರೆ. ಅಕ್ಷರ ದಾಸೋಹದಡಿ ಶಾಲೆಯಲ್ಲೇ ಬಿಸಿಯೂಟ ಮಾಡಬೇಕು ಎಂಬ ನಿಯಮ ಇದೆ. ಆದರೆ ಶಿಕ್ಷಣ ಇಲಾಖೆಯ ನಿಯಮಕ್ಕೂ ಕ್ಯಾರೇ ಎನ್ನದೇ ಮಕ್ಕಳನ್ನ ಅಲೆದಾಡಿಸುತ್ತಿದ್ದಾರೆ. ಇನ್ನಾದರೂ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚೆತ್ತು ಕಣ್ಣಿದ್ದು ಕುರುಡರಂತೆ ವರ್ತಿಸುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ ಶಾಲೆ ಬಳಿಯೇ ಊಟ ಮಾಡುವ ವ್ಯವಸ್ಥೆ ಕಲ್ಪಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Fri, 1 December 23