AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ಕೇಸ್​: ಪ್ರಕರಣ ಹಿಂಪಡೆದಿದ್ದ ಸರ್ಕಾರಕ್ಕೆ ಹಿನ್ನಡೆ

ಕಲಬುರಗಿಯ ಚಿತ್ತಾಪುರದಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಕಲಬುರಗಿ ಪೀಠ ತಾತ್ಕಾಲಿಕ ತಡೆ ನೀಡಿದೆ. 2019ರ ಬಕ್ರೀದ್ ವೇಳೆ ಗೋವು ಸಾಗಾಟ ವಾಹನ ಸೀಜ್ ಮಾಡಿದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಸಂಬಂಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿತ್ತು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಚಿತ್ತಾಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ಕೇಸ್​: ಪ್ರಕರಣ ಹಿಂಪಡೆದಿದ್ದ ಸರ್ಕಾರಕ್ಕೆ ಹಿನ್ನಡೆ
ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಪ್ರಸನ್ನ ಹೆಗಡೆ|

Updated on: Nov 19, 2025 | 8:13 AM

Share

ಕಲಬುರಗಿ, ನವೆಂಬರ್​ 19: 2019ರ ಆಗಸ್ಟ್​ ತಿಂಗಳಲ್ಲಿ ಚಿತ್ತಾಪುರದಲ್ಲಿ ನಡೆದಿದ್ದ ಪೊಲೀಸರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಸಲ್ಲಿಸಿದ್ದ ಅರ್ಜಿಯನ್ನ ನ್ಯಾಯಾಲಯ ಪರಿಗಣಿಸಿದೆ.

2019ರ ಆಗಸ್ಟ್​​ ತಿಂಗಳಲ್ಲಿ ನಡೆದ ಬಕ್ರೀದ್​ ಹಬ್ಬದ ಸಂದರ್ಭದಲ್ಲಿ ಗೋವು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿ ಪೊಲೀಸರು ಸೀಜ್​ ಮಾಡಿದ್ದರು. ಚಿತ್ತಾಪುರ ಪಟ್ಟಣದ ದಿಗ್ಗಾಂವ ಕ್ರಾಸ್ ಹತ್ತಿರದ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು. ಆದರೆ ವಾಹನ ಬಿಡುವಂತೆ ಚಿತ್ತಾಪುರ ಪಟ್ಟಣದ ಶೇಖ್ ಮೋಸೀನ್, ಮಹಮ್ಮದ ಫಯಾಜ್, ಮಹಮ್ಮದ ಯೂಸಫ್, ಇಮ್ರಾನ್, ನೂರ್ ಮಹಮ್ಮದ್ ಆಸೀಫ್, ಮಹಮ್ಮದ್ ಝಾಕೀರ್, ಮಹಮ್ಮದ ವಾಜೀದ್, ಮುಜಾಹೀದ್, ಮಹಮ್ಮದ್ ಖಲೀಲ್, ಇಕ್ಬಾಲ್, ರಿಯಾಜ್, ಫಾರೂಖ್, ಬಾಬಾ ಸೌದಾಗಾರ್ ಸೇರಿ 15-20 ಜನರು ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಜೊತೆ ವಾಗ್ವಾದ ನಡೆಸಿದ್ದರು. ಈ ಬಗ್ಗೆ ವಿಚಾರಣೆ ಮಾಡಿ ಕಾನೂನು ಕ್ರಮ ಕೈಕೊಳ್ಳಲಾಗುವದು. ನೀವೆಲ್ಲರೂ ಇಲ್ಲಿಂದ ಹೋಗಿ ಅಂತಾ ಪದೇ ಪದೇ ಹೇಳಿದರೂ ಆರೋಪಿಗಳು ಅದನ್ನು ಲೆಕ್ಕಿಸದೆ ತಮ್ಮ ವಾಹನ ಬಿಡುವಂತೆ ಪಟ್ಟು ಹಿಡಿದಿದ್ದರು. ಬಳಿಕ ಪೊಲೀಸ್​​ ಠಾಣೆಯ ಮುಂಭಾಗದಿಂದ ಬಸೀರ್ ಗಂಜ್​ ಚೌಕ್​ ಕಡೆಗೆ ಹೋಗಿ ಏಕಾಏಕಿ ಕಲ್ಲು ತೂರಾಟ ಮಾಡಿದ್ದರು.

ಇದನ್ನೂ ಓದಿ: ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ; RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಶೇಖ್ ಮೋಸೀನ್ ಎಸೆದ ಕಲ್ಲು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ಅಭಿಜಿತ್ ಅವರ ಕಾರಿಗೆ ತಾಗಿ ಹಾನಿಯಾಗಿತ್ತು. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡೆತಡೆ ಮಾಡಿದ್ದಲ್ಲದೆ ಕಲ್ಲು ತೂರಾಟ ನಡೆಸಿ ವಾಹನ ಜಖಂಗೊಳಿಸಿದ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಈ ಕೇಸ್​​ನ ರಾಜ್ಯ ಸರ್ಕಾರ ಈ ವರ್ಷ ಸೆಪ್ಟೆಂಬರ್​​ನಲ್ಲಿ ವಾಪಸ್​ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಆದೇಶಕ್ಕೆ ಸದ್ಯ ತಡೆ ನೀಡಿರುವ ಕೋರ್ಟ್,​​ ಮುಂದಿನ ವಿಚಾರಣೆಯನ್ನು ಡಿಸೆಂಬರ್​​ 4ಕ್ಕೆ ನಿಗದಿಪಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ