ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರ; ಪರಾರಿಯಾಗಿರುವ ಪ್ರಮುಖ ಆರೋಪಿಗಳು ಒಂದೇ ಕಡೆ ಇರುವ ಅನುಮಾನ

ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ ಸಿಐಡಿ ಅಧಿಕಾರಿಗಳು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸಿಆರ್ಪಿಸಿ ಕಲಂ 91ರಡಿ ನೋಟಿಸ್ ನೀಡಿದ್ದಾರೆ.

ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ವಿಚಾರ; ಪರಾರಿಯಾಗಿರುವ ಪ್ರಮುಖ ಆರೋಪಿಗಳು ಒಂದೇ ಕಡೆ ಇರುವ ಅನುಮಾನ
ಆರೋಪಿ ಮಂಜುನಾಥ ಮೇಳಕುಂದಿ, ವಿರೇಶ್
Follow us
TV9 Web
| Updated By: sandhya thejappa

Updated on:Apr 21, 2022 | 8:46 AM

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ (PSI Recruitment) ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ವಿಚಾರಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು (CID Police) ಪ್ರಮುಖ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಕಾಶಿನಾಥ್, ಮಂಜುನಾಥ ಮೇಳಕುಂದಿ, ದಿವ್ಯಾ ಹಾಗರಗಿ, ಇಬ್ಬರು ಕೊಠಡಿ ಮೇಲ್ವಿಚಾರಕಿಯರು ನಾಪತ್ತೆಯಾಗಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ ಹೆಚ್ಚಿನ ಮಾಹಿತಿ ಸಿಗಲಿಲ್ಲ. ಕೇಸ್ ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಎಲ್ಲರೂ ಒಂದೇ ಕಡೆ ಇರುವ ಬಗ್ಗೆ ಅನುಮಾನ ಇದೆ. ಕಳೆದ ಕೆಲ ದಿನಗಳಿಂದ ಸಿಐಡಿ ಪೊಲೀಸರು ಐವರಿಗಾಗಿ ಬಲೆ ಬೀಸಿದ್ದಾರೆ.

ಆರೋಪಿ ಮಂಜುನಾಥ ಮೇಳಕುಂದಿ ಕಲಬುರಗಿ ನೀರಾವರಿ ಇಲಾಖೆಯು ಸಹಾಯಕ ಇಂಜನೀಯರ್. ಈತ ವಿರೇಶ್ ಅನ್ನೋ ಅಭ್ಯರ್ಥಿಯಿಂದ ಬರೋಬ್ಬರಿ 39 ಲಕ್ಷ ಹಣ ಪಡೆದಿದ್ದಾನಂತೆ. ವಿರೇಶ್, ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ. ಇಡೀ ಪ್ರಕರಣ ಬೆಳಕಿಗೆ ಬಂದಿದ್ದೆ ವಿರೇಶ್ ಅನ್ನೋ ಅಭ್ಯರ್ಥಿ ಬಂಧನದ ನಂತರ. ವಿರೇಶ್, ಕಲಬುರಗಿ ಜಿಲ್ಲೆಯ ಸೇಡಂ ನಿವಾಸಿ. ವಿಚಾರಣೆ ವೇಳೆ ತಾನು ಮಂಜುನಾಥ ಎಂಬುವವನಿಗೆ 39 ಲಕ್ಷ ಹಣ ನೀಡಿರೋದಾಗಿ ವಿರೇಶ್ ಒಪ್ಪಿಕೊಂಡಿದ್ದಾನೆ.

ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ ಸಿಐಡಿ ಅಧಿಕಾರಿಗಳು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸಿಆರ್ಪಿಸಿ ಕಲಂ 91ರಡಿ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಹಾಲ್ಟಿಕೆಟ್, ಒಎಂಆರ್ ಶೀಟ್​ನ ಕಾರ್ಬನ್ ಪ್ರತಿ ತರಬೇಕು ಎಂದಿದ್ದಾರೆ. ಹಂತ ಹಂತವಾಗಿ ವಿಚಾರಣೆ ನಡೆಸಲಿರುವ ಸಿಐಡಿ ಅಧಿಕಾರಿಗಳು, ಆಯ್ಕೆಯಾಗಿರುವ 545 ಅಭ್ಯರ್ಥಿಗಳನ್ನೂ ವಿಚಾರಣೆ ಮಾಡುವ ಸಾಧ್ಯತೆಯಿದೆ.

ಬಿಜೆಪಿ ನಾಯಕರ ಕೊರಳಿಗೆ ಸುತ್ತಿಕೊಳ್ಳುತ್ತಾ?: ಈ ಅಕ್ರಮ ಬಿಜೆಪಿಯ ಅನೇಕ ನಾಯಕರ ಕೊರಳಿಗೆ ಸುತ್ತಿಕೊಳ್ಳುತ್ತಾ? ಎಂಬ ಪ್ರಶ್ನೆ ಮೂಡಿದೆ. ಜ್ಞಾನಜ್ಯೋತಿ ಶಾಲೆಗೆ PSI ಪರೀಕ್ಷಾ ಕೇಂದ್ರ ಅನುಮತಿ ಪತ್ರ ಪತ್ರವನ್ನು ಕೆಲ ಜನಪ್ರತಿನಿಧಿಗಳು ನೀಡಿರುವ ಶಂಕೆ ಇದೆ. ಅದರ ಬಗ್ಗೆಯೂ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ

Virgin Food Addiction: ‘ಕನ್ಯೆಯರು ಖಾದ್ಯಗಳಿಗೆ ವ್ಯಸನಿಗಳಾಗಲಿ’ ಎಂದ ಫಾಸ್ಟ್ ಫುಡ್ ಕಂಪೆನಿ ಎಂಡಿ ವಜಾ

ರಷ್ಯಾದಿಂದ ಹೊಸ ಕ್ಷಿಪಣಿ ಪರೀಕ್ಷೆ; ಶತ್ರು ರಾಷ್ಟ್ರಗಳು ಬೆದರಿಕೆಯೊಡ್ಡುವ ಮುನ್ನ ಎರಡು ಬಾರಿ ಯೋಚಿಸಿ ಎಂದ ಪುಟಿನ್

Published On - 8:41 am, Thu, 21 April 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ