ಕಲಬುರಗಿ: ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ, ನಾಸೀರ್ ಹುಸೇನ್ ವಿರುದ್ಧ ದೂರು ದಾಖಲು

ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ ನಡೆದಿರುವ ಘಟನೆ ಕಲಬುರಗಿ ನಗರದ ಮುಸ್ಲಿಂ ಚೌಕ್‌ನಲ್ಲಿ ನಿನ್ನೆ (ಏ.6) ರಾತ್ರಿ ನಡೆದಿದೆ.

ಕಲಬುರಗಿ: ಜೆಡಿಎಸ್ ಮುಖಂಡ ಮತ್ತು ಪೊಲೀಸ್ ಕಮಿಷನರ್ ನಡುವೆ ವಾಗ್ವಾದ, ನಾಸೀರ್ ಹುಸೇನ್ ವಿರುದ್ಧ ದೂರು ದಾಖಲು
ಜೆಡಿಎಸ್​ ಮುಖಂಡ ನಾಸಿರ್​ ಹುಸೇನ್​, ಪೊಲೀಸ್​ ಕಮಿಷನರ್​ ಆರ್.ಚೇತನ್​​ ನಡುವೆ ವಾಗ್ವಾದ್​​
Follow us
ವಿವೇಕ ಬಿರಾದಾರ
|

Updated on:Apr 07, 2023 | 2:09 PM

ಕಲಬುರಗಿ: ಜೆಡಿಎಸ್ ಮುಖಂಡ (JDS Leader) ಮತ್ತು ಪೊಲೀಸ್ ಕಮಿಷನರ್ (Police Commissioner) ನಡುವೆ ವಾಗ್ವಾದ ನಡೆದಿರುವ ಘಟನೆ ಕಲಬುರಗಿ (Kalaburgi) ನಗರದ ಮುಸ್ಲಿಂ ಚೌಕ್‌ನಲ್ಲಿ ನಿನ್ನೆ (ಏ.6) ರಾತ್ರಿ ನಡೆದಿದೆ. ವ್ಯಾಪಾರಸ್ಥರು (Businessman) ರಸ್ತೆ ಮೇಲೆ ಆಹಾರ ಸಾಮಾಗ್ರಿ ಮಾರಾಟ ಮಾಡುತ್ತಿದ್ದರು. ಈ ವೇಳೆ ನೈಟ್ ರೌಂಡ್‌‌ಗೆ ತೆರಳಿದ್ದ ಕಮಿಷನರ್ ಆರ್.ಚೇತನ್ ಅವರು ಇದನ್ನು ಕಂಡು ವ್ಯಾಪಾರದಿಂದ ಫುಲ್ ಟ್ರಾಫಿಕ್​ಜಾಮ್ ಆಗುತ್ತಿದೆ, ತಕ್ಷಣ ವ್ಯಾಪಾರಸ್ಥರನ್ನು ತೆರವುಗೊಳಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಜೆಡಿಎಸ್​ ಮುಖಂಡ ನಾಸೀರ್ ಹುಸೇನ್ ಉಸ್ತಾದ್, ರಂಜಾನ್ ವೇಳೆ ಮಳಿಗೆ ಹಾಕುವುದು ಮೊದಲಿನಿಂದಲೂ ರೂಢಿಯಲ್ಲಿದೆ ಎಂದಿದ್ದಾರೆ.

ಇದಕ್ಕೆ ಕಮಿಷನರ್ ಆರ್.ಚೇತನ್ ನೀವು 50 ಬಾರಿ ಮಳಿಗೆ ಹಾಕಿರಬಹುದು, 51ನೇ ಬಾರಿ ಅವಕಾಶವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಕಮಿಷನರ್ ಮಾತಿಗೆ ಕೆರಳಿದ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಪ್ರತಿಭಟನೆ ನಡೆಸಿದ ನಾಸೀರ್ ಹುಸೇನ್ ಉಸ್ತಾದ್ ಸೇರಿದಂತೆ ಹಲವರ ವಿರುದ್ಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಆರೋಪಿ ಪುನೀತ್ ಕೆರೆಹಳ್ಳಿ ತಂಡವನ್ನು ರಾಜಸ್ಥಾನದಿಂದ ರಾಮನಗರಕ್ಕೆ ಕರೆತರಲು ಪೊಲೀಸ್ ಸಿದ್ಧತೆ

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, 15 ಕಾರುಗಳು ಜಖಂ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ಮದ್ಯೆ ನಿನ್ನ (ಏ.6)  ಸಂಘರ್ಷ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ (Stone Pelting) ನಡೆಸಿದ್ದರು. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 15 ಕಾರುಗಳು ಜಖಂಗೊಂಡಿದ್ದವು. ಕಾರುಗಳ ಗಾಜು ಪುಡಿ ಪುಡಿಯಾಗಿದ್ದವು. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದರು. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಯಾದಗಿರಿ ಎಸ್​​ಪಿ ಡಾ. ಸಿ.ಬಿ. ವೇದಾಮೂರ್ತಿ ಭೇಟಿ ನೀಡಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

2 ದಿನ ನಿಷೇಧಾಜ್ಞೆ ಜಾರಿ

ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುರಪುರ ಕ್ಷೇತ್ರದಲ್ಲಿ ಇಂದಿನಿಂದ ನಾಳೆ(ಏಪ್ರಿಲ್ 08) ರಾತ್ರಿ 8 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಯಾದಗಿರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಲಬುರಗಿ ಈಶಾನ್ಯ ವಲಯ ವಿಭಾಗೀಯ ಐಜಿಪಿ ಅನುಪಮ ಅಗರ್ವಾಲ್ ನಿನ್ನೆ ರಾತ್ರಿಯಿಂದಲೂ ಕೊಡೆಕಲ್​ನಲ್ಲೇ ಮೊಕ್ಕಾಂ ಹೂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Fri, 7 April 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ