AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಚಾಲನೆ ನೀಡಿದರು.

ಕಲಬುರಗಿ: ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ
ಸಂಜಯ್ಯಾ ಚಿಕ್ಕಮಠ
| Updated By: ಆಯೇಷಾ ಬಾನು|

Updated on:Aug 05, 2023 | 2:30 PM

Share

ಕಲಬುರಗಿ, ಆ.05: ಕಾಂಗ್ರೆಸ್​ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ(Gruha Jyothi Scheme) ಸಿಎಂ ಸಿದ್ದರಾಮಯ್ಯ(Siddaramaiah), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಅಧಿಕೃತವಾಗಿ ಚಾಲನೆ ನೀಡಿದರು. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು. ಚಿದಾನಂದ್, ರೇಣುಕಾ, ಕೌಸರ್ ಬೇಗಂ, ತುಳಸಿರಾಮ್​, ನಾಗೇಶ್ ಸೇರಿದಂತೆ 10 ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಣೆ ಮಾಡಲಾಯಿತು. ತವರು ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆದರೂ ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯಸಿಂಗ್ ಗೈರಾಗಿದ್ದಾರೆ. ಮಂತ್ರಿಸ್ಥಾನ ಸಿಗದೇ ಇರೋದಕ್ಕೆ ಅಸಮಾಧಾನ ಹೊಂದಿದ್ದು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ಗೃಹಜೋತಿ ಯೋಜನೆ ನೋಂದಣಿಗೆ ಅಂತಿಮ ದಿನಾಂಕ ಇಲ್ಲ

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಗೃಹಜೋತಿ ಯೋಜನೆ ನೋಂದಣಿಗೆ ಅಂತಿಮ ದಿನಾಂಕ ಇಲ್ಲ ಎಂದರು. ರಾಹುಲ್ ಗಾಂಧಿ ಕರ್ನಾಟಕದಲ್ಲೂ ಜೋಡೋ ಯಾತ್ರೆ ಮಾಡಿದ್ದರು. ಭಾರತ ಜೋಡೋ ಯಾತ್ರೆ ವೇಳೆ ಸಾಮಾನ್ಯ ಜನರ ಜೊತೆ ಚರ್ಚೆ ಮಾಡಿ ಅವರ ಸಮಸ್ಯೆ ಅರಿತುಕೊಂಡಿದ್ದರು. ಆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮಧ್ಯಮ ವರ್ಗದವರು ಸಂಕಷ್ಟದಲ್ಲಿದ್ದಾರೆ. ಅವರ ಕೈ ಬಲಪಡಿಸಬೇಕು ಅಂತ ಹೇಳಿದ್ರು. ಅವರ ಸೂಚನೆ ಮೇರೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. ಒಂದು ಕೋಟಿ 42 ಲಕ್ಷ ಜವರು ಗೃಹಜೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜೋತಿ ನೋಂದಣಿಗೆ ಕಡೆಯ ದಿನ ಅಂತ ಇಲ್ಲ. ಉಚಿತವಾಗಿ ನೀಡೋದು ಗಿಫ್ಟ್ ಅಲ್ಲ. ಬದಲಾಗಿ ಜನರ ಆರ್ಥಿಕ ಸ್ಥಿತಿ ಸುಧಾರಿಸೋದು ಆಗಿದೆ. ಸಾಮಾನ್ಯ ಜನರಿಗೆ ಹಣ ಉಳಿದ್ರೆ ಅವರು ಬೇರೆ ರೂಪದಲ್ಲಿ ಹಣ ಖರ್ಚು ಮಾಡ್ತಾರೆ. ಇದರಿಂದ ಸರ್ಕಾರಕ್ಕೆ ಮತ್ತೆ ತೆರಿಗೆ ಬರುತ್ತೆ. ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹಾಗೆ ಈ ಬಾರಿ ಮಲ್ಲಿಕಾರ್ಜುನ ಖರ್ಗೆರನ್ನು ಕೂಡಾ ಗೆಲ್ಲಿಸಬೇಕು ಎಂದರು.

ನಾವು ನುಡಿದಂತೆ ನಡೆಯುತ್ತಿದ್ದೇವೆ -ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷ ಜನವರಿ 11 ರಂದು ಬೆಳಗಾವಿಯಲ್ಲಿ ಮೊದಲ ಗ್ಯಾರಂಟಿ ಯೋಜನೆ ಘೋಷಿಸಿತ್ತು. ಅದು ಮನೆಯ ಜ್ಯೋತಿ ಬೆಳಗೋ ಗೃಹಜೋತಿ ಗ್ಯಾರಂಟಿ. ಇಂದು ಗೃಹಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಿದೆ. ಕರ್ನಾಟಕ ಗ್ಯಾರಂಟಿಗಳ ಬಗ್ಗೆ ದೇಶದ ಜನರು ಮಾತನಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ದಿವಾಳಿಯಾಗುತ್ತೆ ಅಂತ ಪ್ರಧಾನಿ ಮೋದಿ ಅಂತಾರೆ. ದೇವರು ವರನು ಕೊಡೋದಿಲ್ಲಾ, ಶಾಪವನ್ನು ಕೊಡೋದಿಲ್ಲ. ಅವಕಾಶ ಮಾತ್ರ ಕೊಡ್ತಾನೆ. ಮೋದಿ ಅವರು ದೊಡ್ಡ ದೊಡ್ಡ ಜನರ ಸಾಲ ಮನ್ನಾ ಮಡ್ತಾರೆ. ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದು ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:51 pm, Sat, 5 August 23