ಕಲಬುರಗಿಯನ್ನು ಸ್ಮಾರ್ಟ್​ ಸಿಟಿ ಮಾಡಲು 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕಲಬುರಗಿಗೆ ಭರ್ಜರಿ ಯೋಜನೆಯ ಘೋಷಣೆ ಮಾಡಿದ್ದಾರೆ. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಚಿವ ಸಂಪುಟ ಸಭೆಯಲ್ಲಿ ಭರ್ಜರಿ ಕೊಡುಗೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿದ್ದೇನೆಂಬ ವಿವರ ಇಲ್ಲಿದೆ.

ಕಲಬುರಗಿಯನ್ನು ಸ್ಮಾರ್ಟ್​ ಸಿಟಿ ಮಾಡಲು 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
Edited By:

Updated on: Sep 17, 2024 | 10:44 AM

ಕಲಬುರಗಿ, ಸೆಪ್ಟೆಂಬರ್ 17: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್​ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್​​ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನಾ ಹಂತದಲ್ಲಿದೆ. ಇಂದಿರಾ ಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಇಂದಿರಾಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಿದ್ದೇವೆ. ಆ ಮೂಲಕ ಕಲಬುರಗಿಯನ್ನು ರೀಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಭಾಗದ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು 2023-24 ಅನ್ನು ‘Year of education’ ಎಂದು ಘೋಷಣೆ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ‘ಅಕ್ಷರ ಅವಿಷ್ಕಾರ ಯೋಜನೆ’ ಜಾರಿಗೊಳಿಸಿದ್ದೇವೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಭರ್ಜರಿ ಕೊಡುಗೆ: ಸಿದ್ದರಾಮಯ್ಯ ಭರವಸೆ

ಜೊತೆಗೆ ಮೆಗಾ ಟೆಕ್ಸಟೈಲ್ಸ್ ಪಾರ್ಕ್, ಅತ್ಯಾಧುನಿಕ ಇನ್​ಕ್ಯುಬೇಷನ್ ಕೌಶಲ ಕೇಂದ್ರಗಳನ್ನು ತೆರೆಯುತ್ತಿದ್ದೇವೆ. ಹತ್ತು ವರ್ಷಗಳ ಬಳಿಕ ಇಂದು ಸಂಪುಟ ಸಭೆ ನಡೆಸುತ್ತಿದ್ದೇವೆ. ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ ಹಾಗೂ ಮೂಕಭೂತ ಸೌಕರ್ಯದ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದನ್ನೂ ಓದಿ: ದಶಕದ ನಂತರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ: ಈ ಹಿಂದಿನ​ ನಿರ್ಣಯಗಳಲ್ಲಿ ಜಾರಿಯಾಗಿದ್ದೆಷ್ಟು? ಇಲ್ಲಿದೆ ಸಮಗ್ರ ಮಾಹಿತಿ

ಇಂದು ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ತೆಗೆದುಕೊಳ್ಳುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಬಳ್ಳಾರಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗೆ 200 ಕೋಟಿ ಅನುದಾನ ನೀಡುವ ಬಗ್ಗೆಯೂ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:40 am, Tue, 17 September 24