ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಇಂದು ಬೆಳಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ. ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡಲಿದ್ದಾರೆ.

ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ
ವೇದಿಕೆ ಪರಿಶೀಲಿಸಿದ ಇಂಧನ ಸಚಿವ ಕೆ.ಜೆ ಜಾರ್ಜ್
Follow us
| Updated By: ಆಯೇಷಾ ಬಾನು

Updated on:Aug 05, 2023 | 10:48 AM

ಕಲಬುರಗಿ, ಆ.05: ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಮ್ಯಾಜಿಕ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದೆ. ಇದೀಗ ಸರ್ಕಾರ ತಾನು ನೀಡಿರುವ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ(Mallikarjuna Kharge) ಚಾಲನೆ ನೀಡಲಿದ್ದಾರೆ. ಮತ್ತೊಂದೆಡೆ ಇಂದು ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಕಾಂಗ್ರೆಸ್, ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಪ್ರತಿಯೊಂದು ಕುಟುಂಬಕ್ಕೆ ಇನ್ನೂರು ಯುನಿಟ್ ವಿದ್ಯುತನ್ನು ಉಚಿತವಾಗಿ ನೀಡೋದಾಗಿ ಹೇಳಿತ್ತು. ಜುಲೈ ಒಂದರಿಂದಲೇ ಯೋಜನೆ ಜಾರಿಯಾಗಿದ್ದು, ಜುಲೈ ತಿಂಗಳ ಬಿಲ್ ಉಚಿತವಾಗಿ ಇರಲಿದೆ. ಇಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಗೃಹ ಜೋತಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಕಲಬುರಗಿ ನಗರದಲ್ಲಿ ಇಂಧನ ಇಲಾಖೆ ಆಯೋಜಿಸಿದೆ. ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ, ನಗರದ ಎನ್ ವಿ ಮೈದಾನದಲ್ಲಿ ಗೃಹ ಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ. ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಜನ ಕೂತು ಕಾರ್ಯಕ್ರಮ ವೀಕ್ಷಿಸಲು ಅನಕೂಲವಾಗುವಂತೆ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆಯನ್ನು ಕೂಡಾ ಕಲ್ಪಿಸಲಾಗಿದೆ. ಇನ್ನು ಇಂದಿನ ಕಾರ್ಯಕ್ರಮ ಯಶಸ್ವಿಗೊಳಿಸಲು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಎಲ್ಲಾ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಕಾರ್ಯಕ್ರಮದ ವೇದಿಕೆ ಮೇಲೆ ಹತ್ತು ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ನ್ನು ಸಿಎಂ, ಮತ್ತು ಖರ್ಗೆ ಅವರು ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಇನ್ನೂರು ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಇನ್ನು ಬಂದವರಿಗೆ ಮುಂಜಾನೆ ಉಪಹಾರ ಮತ್ತು ಮಧ್ಯಾಹ್ನದ ಊಟಕ್ಕೆ ಪಲಾವ್ ಮತ್ತು ಲಡ್ಡು ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಗೃಹ ಜೋತಿ ಯೋಜನೆಯಡಿ ರಾಜ್ಯದಲ್ಲಿ ಜುಲೈ 25 ರವರಗೆ ಒಂದು ಕೋಟಿ 41 ಲಕ್ಷ 23 ಸಾವಿರ ಜನರು ನೋಂದಣಿ ಮಾಡಿಕೊಂಡಿದ್ದು, ಅವರು ಯೋಜನೆಯ ಲಾಭ ಪಡೆಯಲಿದ್ದಾರೆ.

ಸರ್ಕಾರದ ಮೂರನೇ ಗ್ಯಾರಂಟಿಗೆ ಎಲ್ಲಾ ರೀತಿಯ ಸಿದ್ದತೆ ಜೋರಾಗಿ ನಡೆದಿದ್ದು, ಮೂರನೇ ಗ್ಯಾರಂಟಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಆ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಟೀಕೆ ಮಾಡೋರ ಬಾಯಿಮುಚ್ಚಿಸಲು ಮುಂದಾಗಿದೆ. ಜೊತೆಗೆ ಜನರಿಗೆ ಭರವಸೆ ನೀಡಿದಂತೆ ಯೋಜನೆ ಜಾರಿಗೊಳಿಸಿ, ಅದರ ಲಾಭ ಸಿಗುವಂತೆ ಮಾಡುತ್ತಿದೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 7:15 am, Sat, 5 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!