ದೇವದುರ್ಗ ಆಡಿಯೋ ಪ್ರಕರಣ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣದ ವಿಚಾರಣೆ
Operation kamala: ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.
ಕಲಬುರಗಿ: ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾ ಕಲಬುರಗಿಯಲ್ಲಿರುವ ಹಿನ್ನೆಲೆಯಿಂದಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ಕಲಬುರಗಿ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಕುನ್ಹಾ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಬಿಎಸವೈ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಬಗ್ಗೆ ಕಲಬುರಗಿ ಹೈಕೋರ್ಟ್ನಿಂದ ಬಿಎಸ್ವೈ ವಿಚಾರಣೆಗೆ ತಡೆ ಪಡೆದಿದ್ದರು. ಕಳೆದ ತಿಂಗಳು ಕಲಬುರಗಿ ಹೈಕೋರ್ಟ್ ಪೀಠ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್ಗೆ ವರ್ಗಾಯಿಸಿತ್ತು.
ಆಪರೇಷನ್ ಕಮಲದಡಿಯಲ್ಲಿ ಬಿಎಸವೈ ಸೇರಿ ಇನ್ನೂ ನಾಲ್ವರು ನನ್ನನ್ನು ಬಿಜೆಪಿಗೆ ಸೇರುವಂತೆ ಆಮಿಷವೊಡಿದ್ದರು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಾಂಬ್ ಸಹ ಸಿಡಿಸಿದ್ದರು. 2018 ರ ಪೆಬ್ರವರಿಯಲ್ಲಿ ಈ ಘಟನೆ ನಡೆದಿತ್ತು.
Published On - 8:47 am, Sat, 20 February 21