ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿಗಳು ಬೆಂಗಳೂರಿನಲ್ಲಿ (Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರಿಗೆ ದೂರು ನೀಡಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕ್ಷೇತ್ರ ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್ ಅನ್ನೋರು ಅನೇಕ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಆದರೆ ಪ್ರಿಯಾಂಕ್ ಖರ್ಗೆ ಮಣಿಕಂಠ ರಾಠೋಡ್ ಮೇಲೆ ಸುಳ್ಳು ಕೇಸ್ ದಾಖಲಾಗುವಂತೆ ಮಾಡುತ್ತಿದ್ದಾರೆ ಎಂದು ಐವತ್ತಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ದೂರು ನೀಡಿದೆ.
ದಲಿತ ಮುಖಂಡರಿಂದ ಮಣಿಕಂಠ ರಾಠೋಡ್ ವಿರುದ್ಧ ಕೇಸ್ ಹಾಕಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬಂಜಾರ ಸ್ವಾಮೀಜಿಗಳು ದೂರು ನೀಡಿದ್ದಾರೆ.
Published On - 5:45 pm, Fri, 22 July 22