ಸರ್ಕಾರಿ ನೌಕರಿ ಬೇಕಾದರೆ ಯುವತಿಯರು ಮಂಚವೇರಬೇಕು ಎಂಬ ಹೇಳಿಕೆ ವಿವಾದವಾದ ಬಳಿಕ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ಪ್ರತಿ ದಿನ ಬೆಳಕಿಗೆ ಬರುತ್ತಲೇ ಇವೆ. ಇದು ಈ ಸರ್ಕಾರದ ಭ್ರಷ್ಟಾಚಾರದ ವಿರಾಟ ರೂಪ ಹಾಗೂ ಲಂಚಕೋರ ಆಡಳಿತಕ್ಕೆ ಹಿಡಿದ ಕೈಗನ್ನಡಿ.

ಸರ್ಕಾರಿ ನೌಕರಿ ಬೇಕಾದರೆ ಯುವತಿಯರು ಮಂಚವೇರಬೇಕು ಎಂಬ ಹೇಳಿಕೆ ವಿವಾದವಾದ ಬಳಿಕ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಪ್ರಿಯಾಂಕ್ ಖರ್ಗೆ
Follow us
TV9 Web
| Updated By: ಆಯೇಷಾ ಬಾನು

Updated on:Aug 13, 2022 | 5:11 PM

ಕಲಬುರಗಿ: ರಾಜ್ಯದಲ್ಲಿ ಸರ್ಕಾರಿ ನೌಕರಿ ಬೇಕಾದರೆ ಯುವತಿಯರು ಮಂಚವೇರಬೇಕು, ಯುವಕರು ಲಂಚ ಕೊಡಬೇಕು ಅಂತ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ(Priyank kharge) ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿವಾದದ ಸ್ವರೂಪ ಪಡೆದಿತ್ತು. ಆಗಸ್ಟ್ 12ರ ಶುಕ್ರವಾರ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ್ದ ಪ್ರಿಯಾಂಕ್ ಖರ್ಗೆ ಲಂಚ ಮಂಚದ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಮೇಲೆ ಮುಗಿಬಿದ್ದಿದ್ದರು. ಇಂದು ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಕೆಲಸ ಮಾಡಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ಪ್ರತಿ ದಿನ ಬೆಳಕಿಗೆ ಬರುತ್ತಲೇ ಇವೆ. ಇದು ಈ ಸರ್ಕಾರದ ಭ್ರಷ್ಟಾಚಾರದ ವಿರಾಟ ರೂಪ ಹಾಗೂ ಲಂಚಕೋರ ಆಡಳಿತಕ್ಕೆ ಹಿಡಿದ ಕೈಗನ್ನಡಿ. ವಿಷೇಶವಾಗಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ರಾಜ್ಯದ ಸಾವಿರಾರು ಯುವಕರ ಕಣ್ಣಲ್ಲಿ ನೀರು ತರಿಸುತ್ತಿದೆ.

ಇತ್ತೀಚಿಗೆ ನಡೆದ KPTCL ಪರೀಕ್ಷೆಯಲ್ಲಿ ಆಗಿರುವ ಅಕ್ರಮಕ್ಕೆ ಯಾವುದೇ ಶಿಕ್ಷೆ ನೀಡಿದರೂ ಕಮ್ಮಿಯೇ ಇಲ್ಲ. ಸರ್ಕಾರಿ ಕೆಲಸ ಒಂದಿಡೀ ಕುಟುಂಬವನ್ನೇ ಬಡತನದಿಂದ ಮೇಲೆತ್ತುವ, ಸುಭದ್ರ ಭವಿಷ್ಯ ಕಟ್ಟಿಕೊಡುವ ಅವಕಾಶ. ಲಂಚ ಪಡೆದು ಪರೀಕ್ಷೆಯಲ್ಲಿ ಅಕ್ರಮವಾಗಿ ಉತ್ತೀರ್ಣರಾಗುವ ಮೂಲಕ ವ್ಯವಸ್ಥಿತವಾಗಿ ಬಡವರ್ಗದ ಹಾಗೂ ಯೋಗ್ಯ ಯುವ ಜನರ ಕೈಯಿಂದ ಆ ಅವಕಾಶವನ್ನು ಕಿತ್ತುಕೊಳ್ಳುವುದನ್ನು ಈ ಭ್ರಷ್ಟ ಬಿಜೆಪಿ ಸರ್ಕಾರ ಸಕ್ರಮಗೊಳಿಸಿಬಿಟ್ಟಿದೆ.

ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿದ್ದಾರೆ

ಇದನ್ನು ವಿರೋಧಿಸಿ ನಾನು ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಈ ಸರ್ಕಾರವನ್ನು ಲಂಚ-ಮಂಚದ ಸರ್ಕಾರವೆಂದು ಕರೆದಿದ್ದೆ. ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು, ತನ್ನ ಭ್ರಷ್ಟ ರೂಪವನ್ನು ರಕ್ಷಿಸಿಕೊಳ್ಳಲು, ಹಾಗೂ ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿ KPTCL ಅಕ್ರಮವನ್ನು ಈ ಮೂಲಕ ಮುಚ್ಚಿ ಹಾಕಲು ಬಿಜೆಪಿ ಹೊರಟು ನಿಂತಿದೆ ಎಂದು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ ಎಳೆ ಎಳೆಯಾಗಿ ಕೆಲವೊಂದು ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.

  1. ಕೆಲಸಕ್ಕಾಗಿ ಬಂದ ಯುವತಿಯನ್ನು ಈ ಸರ್ಕಾರದ ಮಂತ್ರಿ ಮೋಸ ಮಾಡಿ, ಸಿಕ್ಕಿ ಬಿದ್ದು ರಾಜೀನಾಮೆ ನೀಡಬೇಕಾಯಿತು. ಆದರೆ ಅವರ ಬಳಿ ಕ್ಷಮೆಯನ್ನು ಬಿಜೆಪಿಯ ಯಾರೊಬ್ಬರೂ ಕೇಳಲಿಲ್ಲ!
  2. ಕೇಂದ್ರ ಮಂತ್ರಿಯೊಬ್ಬರು ಅಶ್ಲೀಲವಾಗಿ ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ವಿಡಿಯೋ ವೈರಲ್ ಆದಾಗ ಹೆಣ್ಣನ್ನು ತೃಣವಾಗಿ ಕಂಡಿದ್ದ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ.
  3.  ಸದನದಲ್ಲಿ ಕೂತು ಪಾರ್ನ್ ವೀಕ್ಷಿಸಿ ಇಡೀ ರಾಜ್ಯದ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರ ಬಳಿ ಕ್ಷಮೆಗೆ ಆಗ್ರಹಿಸಲಿಲ್ಲ, ಬದಲಾಗಿ ಮತ್ತೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬಂದರು, ಸೋತವರನ್ನ MLC ಮಾಡಿ DCM ಮಾಡಿದ್ದು ಇದೇ BJP ಪಕ್ಷ.
  4.  ಈ ಸರ್ಕಾರದ ಮಂತ್ರಿಯೊಬ್ಬರ “ಈ ರಾಜ್ಯದ ಯಾವ ಶಾಸಕ “ಏಕ ಪತ್ನಿವೃತಸ್ಥ? ಎಂಬ ಪ್ರಶ್ನೆ ಬಿಜೆಪಿಗೆ ಈ ನಾಡಿನ ಹೆಣ್ಣು ಮಕ್ಕಳ ಅವಮಾನದಂತೆ ಕಂಡುಬರಲಿಲ್ಲ
  5.  ಈ ನಾಡಿನ ಹೆಣ್ಣು ಮಕ್ಕಳು ಕೆಲಸಕ್ಕಾಗಿ ಹೋದಾಗ ಅಶ್ಲೀಲವಾಗಿ ವರ್ತಿಸಿ “ಮೀ ಟೂ” ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ಸಂಸದರು ಸಿಕ್ಕಿ ಬಿದ್ದಾಗ ಬಿಜೆಪಿ ಅವರ ಬಳಿ ಕ್ಷಮೆ ಕೇಳಲಿಲ್ಲ.
  6.  ಈ ರಾಜ್ಯದ ಸಚಿವ ಸಂಪುಟದ ಸಚಿವರ “ಮಂಚದ ವಿಚಾರ”ಕ್ಕೆ ಹೆದರಿ ಹೈಕೋರ್ಟ್ ನಿಂದ ಸ್ಟೇ ತಂದಾಗ ಬಿಜೆಪಿ ಇವರ್ಯಾರ ಬಳಿಯೂ ಕ್ಷಮೆ ಕೇಳಲಿಲ್ಲ.

ಈ ಸರ್ಕಾರದ ಅನಿಷ್ಟ ಆಡಳಿತಕ್ಕೆ ಇವರ ಕಾರ್ಯಕರ್ತರೇ ‘ಜನಾಕ್ರೋಶ’ ರೂಪಿಸಿ ಇವರ ಜನೋತ್ಸವಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನು ಈಗಷ್ಟೆ ಬಿಜೆಪಿ ಸರ್ಕಾರದ ಮಂತ್ರಿಯೊಬ್ಬರು “ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿಲ್ಲ, ಬದಲಿಗೆ ಮ್ಯಾನೇಜ್ಮೆಂಟ್ ನಡೆಸುತ್ತಿದ್ದೇವೆ” ಎಂದು ಮಾತನಾಡಿರುವ ಆಡಿಯೋ ವೈರೆಲ್ ಆಗುತ್ತಿದೆ.

ಈ ಸರ್ಕಾರದಲ್ಲಿ ಆಗಿರುವ ಹಾಗೂ ಈಗಲೂ ಘಟಿಸುತ್ತಿರುವ ಮಂಚ-ಲಂಚದ ಪ್ರಕರಣಗಳಿಗೆ ಕನ್ನಡಿಯಾಗಿ ಮಾತನಾಡುವುದು ವಿರೋಧ ಪಕ್ಷವಾಗಿ ನಮ್ಮ ಆದ್ಯ ಕರ್ತವ್ಯ. ಆ ಕೆಲಸವನ್ನು ಇಂದು ನಾವು ಸರಿಯಾಗಿ ನಿರ್ವಹಿಸುತ್ತಿರುವದರಿಂದಲೇ ಬಿಜೆಪಿ ನಾಯಕರು ಇಂದು ವಿಚಲಿತರಾಗಿ ಹೇಳಿಕೆ ನೀಡುತ್ತಿರುವುದು.

ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದ

ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದ್ದೇನೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ.

ಆದರೆ ಬಿಜೆಪಿ, ಹೆಣ್ಣು ಮಕ್ಕಳಿಗೆ ನಿಜವಾಗಿ ಅಪಮಾನ ಮಾಡಿರುವ ತನ್ನೆಲ್ಲಾ ನಾಯಕರ ಬಳಿ ರಾಜೀನಾಮೆ ಪಡೆದು ರಾಜ್ಯದ ಮಹಿಳಾ ಸಮುದಾಯಕ್ಕೆ ಎಸಗಿದ ಅವಮಾನಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಕೆಲಸ ಮಾಡಲಿದೆಯಾ? ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಬಿಜೆಪಿಯಿಂದ ಉತ್ತರವನ್ನು ನಿರೀಕ್ಷಿಸಬಹುದೇ? ಎಂದು ಪ್ರಿಯಾಂಕ್ ಖರ್ಗೆ ತಮ್ಮ ಫೇಸ್ಬುಕ್ನಲ್ಲಿ ಫೋಸ್ಟ್ ಹಾಕಿ ಬಿಜೆಪಿಗೆ ಪ್ರಶ್ನಿಸಿದ್ದಾರೆ.

Published On - 5:09 pm, Sat, 13 August 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?