ಶಾಸಕ, ಮಂತ್ರಿ ಮಾಡೋ ಕೆಲಸವನ್ನ ಪ್ರಧಾನಿಯಿಂದ ಮಾಡಿಸ್ತಿದ್ದಾರೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಶಾಸಕ, ಮಂತ್ರಿ ಮಾಡೋ ಕೆಲಸವನ್ನ ಪ್ರಧಾನಿಯಿಂದ ಮಾಡಿಸ್ತಿದ್ದಾರೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಟಾಂಗ್
ಪ್ರಿಯಾಂಕ್ ಖರ್ಗೆ , ನರೇಂದ್ರ ಮೋದಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 17, 2023 | 4:05 PM

ಕಲಬುರಗಿ: ಇದೇ ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕಲಬುರಗಿ(Kalaburagi) ಜಿಲ್ಲೆಗೆ ಭೇಟಿ ನೀಡಲಿದ್ದು, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ಅಲ್ಲದೇ ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಇನ್ನು ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿ, ಶಾಸಕ, ಮಂತ್ರಿ ಮಾಡೋ ಕೆಲಸವನ್ನ ಪ್ರಧಾನಿಯಿಂದ ಮಾಡಿಸ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಜ.19 ರಂದು ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಇಲ್ಲಿದೆ ಯಾದಗಿರಿ, ಕಲಬುರಗಿ ಜಿಲ್ಲಾ ಪ್ರವಾಸ ವೇಳಾಪಟ್ಟಿ

ಕಲಬುರಗಿಯಲ್ಲಿ ಇಂದು(ಜನವರಿ 17) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಶಾಸಕ, ಮಂತ್ರಿ ಮಾಡುವ ಕೆಲಸವನ್ನ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ. ಕಂದಾಯ ಗ್ರಾಮ ಮಾಡಬೇಕೆಂದು ಕಾಂಗ್ರೆಸ್​ ಸರ್ಕಾರದಲ್ಲೇ ಆಗಿತ್ತು. ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಬಿಜೆಪಿಯವರಿಗೆ ಇರೋದು ನಡುಕ. ಬಿಜೆಪಿ ನಾಯಕರಿಗೆ ಯತ್ನಾಳ್​ ಬಾಯಿ ಮುಚ್ಚಿಸಲು ಆಗುತ್ತಿಲ್ಲ ಎಂದು ಟಾಂಗ್ ಕೊಟ್ಟರು.

ಮುಖ್ಯಮಂತ್ರಿ ಕಚೇರಿಯಲ್ಲಿ ಹನಿಟ್ರ್ಯಾಪ್​ ಆಗಿರುವುದು ನಿಜಾನಾ, ಸುಳ್ಳಾ? ಹೈಕೋರ್ಟ್​​ನಲ್ಲಿ ಶಾಸಕರು ಜಾಮೀನು ಪಡೆದಿದ್ದು, ನಿಜಾನಾ, ಸುಳ್ಳಾ? ಇದು ಲಂಚ, ಮಂಚದ ಸರ್ಕಾರವಲ್ಲವಾ? ಲಂಚ, ಮಂಚದ ಸರ್ಕಾರ ಅಂದಾಗ ನನ್ನ ಮೇಲೆ ಮುಗಿದು ಬಿದ್ದಿದ್ದರು. ಸ್ಯಾಂಟ್ರೋ ರವಿ ಪಿಂಪ್ ಎನ್ನುವುದು ನಿಜಾನಾ ಸುಳ್ಳಾ? ಎಂದು ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು.

ಮೋದಿ ಕಲಬುರಗಿ ಜಿಲ್ಲಾ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಜ.19ರಂದು ಕಲಬುರಗಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸೇಡಂ ತಾಲೂಕಿನ ಮಳಖೇಡ ಹೆಲಿಪ್ಯಾಡ್​ನಲ್ಲಿ ಮಧ್ಯಾಹ್ನ 2 ಗಂಟೆಗೆ ಇಳಿಯಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 02.15ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 03.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್​ಪೋರ್ಟ್​​ಗೆ ಹೋಗುತ್ತಾರೆ. ಅಲ್ಲಿಂದ 03.35ಕ್ಕೆ ಕಲಬುರಗಿ ಏರ್​ಪೋರ್ಟ್​​ನಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.

Published On - 4:02 pm, Tue, 17 January 23

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ