ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಕೈ ಶಾಸಕರಿಂದಲೇ ಮನವಿ; ರಾಹುಲ್ ಗಾಂಧಿ, ಸಿಎಂಗೆ ಪತ್ರ

| Updated By: ಆಯೇಷಾ ಬಾನು

Updated on: Dec 02, 2023 | 12:47 PM

545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 23ರಂದು ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಕಾಂಗ್ರೆಸ್ ಶಾಸಕರಿಂದಲೇ ಮನವಿ ಕೇಳಿ ಬರುತ್ತಿದೆ. ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಕೈ ಶಾಸಕರಿಂದಲೇ ಮನವಿ; ರಾಹುಲ್ ಗಾಂಧಿ, ಸಿಎಂಗೆ ಪತ್ರ
ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಪತ್ರ
Follow us on

ಕಲಬುರಗಿ, ಡಿ.02: ಪರೀಕ್ಷೆ ವೇಳೆ ಅಕ್ರಮ ನಡೆದ (PSI Recruitment Scam) ಹಿನ್ನೆಲೆ ರದ್ದಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 23ರಂದು ಮರುಪರೀಕ್ಷೆ (PSI Re-examination) ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಆದರೆ ಇತ್ತ ಪಿಎಸ್‌ಐ ಮರುಪರೀಕ್ಷೆ ದಿನಾಂಕ ಮುಂದೂಡಲು ಕಾಂಗ್ರೆಸ್ ಶಾಸಕರಿಂದಲೇ ಮನವಿ ಕೇಳಿ ಬರುತ್ತಿದೆ. ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ 2021ರ ಅಕ್ಟೋಬರ್ 3ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ಅಕ್ರಮ ಕಂಡುಬಂದಿತ್ತು. ಈ ಕಾರಣಕ್ಕೆ ಪರೀಕ್ಷೆ ರದ್ದಾಗಿತ್ತು. ಸದ್ಯ ಈಗ ಡಿಸೆಂಬರ್ 23ರಂದು ಮರುಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಬೆಂಗಳೂರು ನಗರದಲ್ಲಿ ಮಾತ್ರ ಪಿಎಸ್‌ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆ ನಡೆಸಲು ತಿಳಿಸಿದೆ. ಆದರೆ ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದಾರೆ.

ಕೇವಲ 20 ದಿನದಲ್ಲಿ ಓದಿ ಪಿಎಸ್‌ಐ ಪರೀಕ್ಷೆ ಎದುರಿಸುವುದು ಕಷ್ಟದ‌ ಕೆಲಸ. ಪರೀಕ್ಷೆ ಎದುರಿಸಲು ಕನಿಷ್ಠ 3 ತಿಂಗಳಾದರೂ ಬೇಕು. ಹೀಗಾಗಿ ಮರುಪರೀಕ್ಷೆ ದಿನಾಂಕವನ್ನ ಮುಂದೂಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಸಿಎಂಗೆ ಪತ್ರ‌ ಬರೆದು ಅಭ್ಯರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮರುಪರೀಕ್ಷೆ ದಿನಾಂಕ ಮುಂದೂಡಲು ಮನವಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನಲೆಯಲ್ಲಿ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿತ್ತು. ರಾಜ್ಯಾದ್ಯಂತ 55 ಸಾವಿರ ಅಭ್ಯರ್ಥಿಗಳು ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲಿದ್ದಾರೆ.

ಇದನ್ನೂ ಓದಿ: PSI ಅಕ್ರಮ ಪ್ರಕರಣ: ಡಿ. 23ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ಕೇಸ್ ದಾಖಲಾಗಿದ್ದವು. ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪಾಲಕರನ್ನು ಬಂಧಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ