AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಪರಿಚಿತ ಬೈಕ್​ ಡಿಕ್ಕಿ: ಕಾಂಗ್ರೆಸ್ ಎಂಎಲ್​ಸಿ ತಾಯಿ ಸಾವು

ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರ ತಾಯಿ ಹಿಟ್ ಆ್ಯಂಡ್​ ರನ್​ಗೆ ಬಲಿಯಾಗಿದ್ದಾರೆ. ಅಪರಿಚಿತ ಬೈಕ್​ ವೇಗವಾಗಿ ಬಂದು ಅರವಿಂದ ಅರಳಿ ಅವರ ತಾಯಿ ಸುಮಿತ್ರಾ ಅವರಿಗೆ ಗುದ್ದಿದೆ. ಪರಿಣಾಮ ಸುಮಿತ್ರಾ ಅವರು ಮೃತಪಟ್ಟಿದ್ದಾರೆ.

ಕಲಬುರಗಿಯಲ್ಲಿ ಅಪರಿಚಿತ ಬೈಕ್​ ಡಿಕ್ಕಿ: ಕಾಂಗ್ರೆಸ್ ಎಂಎಲ್​ಸಿ ತಾಯಿ ಸಾವು
ಮೃತ ಸುಮಿತ್ರಾ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 13, 2023 | 11:39 PM

ಕಲಬುರಗಿ, (ಡಿಸೆಂಬರ್ 13): ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ( Aravinda Kumar Arali)  ಅವರ ತಾಯಿ ಹಿಟ್ ಆ್ಯಂಡ್​ ರನ್​ಗೆ ಬಲಿಯಾಗಿದ್ದಾರೆ. ಕಲಬುರಗಿಯ (Kalaburagi) ಸೇಡಂ ರಿಂಗ್ ರಸ್ತೆಯಲ್ಲಿರುವ ಟೊಯೋಟಾ ಶೋರೂಂ ಬಳಿ ಅರವಿಂದ ಅರಳಿ ಅವರ ತಾಯಿ ಸುಮಿತ್ರಾಗೆ ಬೈಕ್ ಬಂದು ಗುದ್ದಿದೆ. ಪರಿಣಾಮ ಸುಮೀತ್ರಾಬಾಯಿ (75) ಮೃತಪಟ್ಟಿದ್ದಾರೆ.

ಬೀದರ್‌ನಿಂದ ಕಲಬುರಗಿಯಲ್ಲಿರುವ ಅಳಿಯನ ಮನೆಗೆ ಬಂದಿದ್ದ ಸುಮಿತ್ರಾ ಅವರು, ಇಂದು(ಡಿಸೆಂಬರ್ 13) ಟೊಯೋಟಾ ಶೋರೂಂ ಬಳಿ ರಸ್ತೆ ದಾಟುತ್ತಿದ್ದಾಗ ಅಪರಿಚಿತ ಬೈಕ್ ಬಂದು​ ಡಿಕ್ಕಿ ಹೊಡಿದೆ.​ ಬೈಕ್​ ಗುದ್ದಿದ ರಭಸಕ್ಕೆ ಸುಮಿತ್ರಾ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಕನ್ನಿಕಾ, ಇನ್ಸ್​ಪೆಕ್ಟರ್ ಖಾಜಾ ಹುಸೇನ್​ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಸಂಬಂಧ ಕಲಬುರಗಿ ಸಂಚಾರಿ ಠಾಣೆ 1 ರಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಿದ್ದ ಪುತ್ರ, ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರು ತಾಯಿ ವಿಷಯ ತಿಳಿಯುತ್ತಿದ್ದಂತೆಯೇ ಕಲಬುರಗಿಯೆ ದೌಡಾಯಿಸಿದ್ದಾರೆ.

ಗುದ್ದಿದ ಬೈಕ್​ ಯಾವುದು ಎನ್ನುವ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 pm, Wed, 13 December 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್