ಕಲಬುರಗಿ: ಗುಂಡು ಹಾರಿಸಿಕೊಂಡು ಕಾನ್ಸ್ಟೇಬಲ್ ಆತ್ಮಹತ್ಯೆ
ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಕಾನಸ್ಟೇಬಲ್ಲೊಬ್ಬ ತನ್ನ ಸರ್ವಿಸ್ 303 ರೈಪಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಲಬುರಗಿ: ಜಿಲ್ಲೆಯ ಚಿತ್ತಾಪುರ(Chittapur) ಪಟ್ಟಣದಲ್ಲಿ ಕಾನಸ್ಟೇಬಲ್ಲೊಬ್ಬ ತನ್ನ ಸರ್ವಿಸ್ 303 ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು(ಮೇ.4) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ ಇದೀಗ ಏಕಾಎಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ; ಆರೋಪಿ ಬಂಧನ
ಗದಗ: ಮನೆಗೆ ನುಗ್ಗಿ ಇಮಾಮ್ ಹುಸೇನ್ ಎಂಬಾತನಿಗೆ ಚಾಕು ಇರಿದ ಘಟನೆ ಗದಗ ಶಹರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಹೌದು ಹುಸೇನ್ ಹೊಟ್ಟೆಗೆ ನಾಲ್ಕೈದು ಬಾರಿ ಚಾಕುವಿನಿಂದ ಇರಿಯಲಾಗಿದೆ. ಕೂಡಲೇ ಗಾಯಾಳು ಇಮಾಮ್ ಹುಸೇನ್ಗೆ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆರೋಪಿ ಕೆಂಚಪ್ಪನನ್ನು ಗದಗ ಶಹರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಕೊಲೆ: ಮದ್ಯವ್ಯಸನಿ ಪುತ್ರನಿಂದಲೇ ಘೋರ ಕೃತ್ಯ
ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು
ಯಾದಗಿರಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೃತಪಟ್ಟಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತರು. ಮೃತರನ್ನು ಜಿಲ್ಲೆಯ ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಘಟನೆ ಜರುಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:47 am, Fri, 5 May 23