AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್, ಗ್ಯಾಂಗ್‌ ವಿರುದ್ಧ ಕಬುರಗಿಯಲ್ಲಿ ಕೊನೆಗೂ ಎಫ್​ಐಆರ್ ದಾಖಲು

ಬಿಜೆಪಿ ನಾಯಕರ ತೀವ್ರ ಪ್ರತಿಭಟನೆಯ ಬಳಿಕ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಮತ್ತು ಗ್ಯಾಂಗ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಕ್ಕಿದ ಡೆತ್​​ನೋಟ್​​ನಲ್ಲಿ ಬಿಜೆಪಿ ನಾಯಕರ ಹತ್ಯೆಗೂ ಸುಪಾರಿ ನೀಡಲಾಗಿದೆ ಎಂದು ಉಲ್ಲೇಖವಾಗಿದ್ದು, ಕಮಲ ಪಾಳೆಯ ಮುಖಂಡರ ಭೀತಿಗೆ ಕಾರಣವಾಗಿದೆ.

ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್, ಗ್ಯಾಂಗ್‌ ವಿರುದ್ಧ ಕಬುರಗಿಯಲ್ಲಿ ಕೊನೆಗೂ ಎಫ್​ಐಆರ್ ದಾಖಲು
ರಾಜು ಕಪನೂರ್ ಮತ್ತು ಎಫ್​ಐಆರ್ ಪ್ರತಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma|

Updated on:Dec 28, 2024 | 3:55 PM

Share

ಕಲಬುರಗಿ, ಡಿಸೆಂಬರ್ 28: ಬೀದರ್​​ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡಿದ ದೂರಿನ ಅನ್ವಯ ಕೊನೆಗೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಮತ್ತು ಗ್ಯಾಂಗ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಜೆಪಿ ನಾಯಕರ ಒತ್ತಡಕ್ಕೆ ಕೊನೆಗೂ ಮಣಿದಿರುವ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ತಮ್ಮ ವಿರುದ್ಧ ಕೊಲೆ ಸಂಚು ಕೂಡಲಾಗಿದೆ ಎಂದು ಬಿಜೆಪಿ ನಾಯಕರು ದೂರು ನೀಡಿದ್ದರು.

ಬಿಜೆಪಿ ನಾಯಕರು ನೀಡಿದ್ದ ದೂರನ್ನು ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಹಾಗೂ ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ನಡೆದು, ಸ್ಟೇಷನ್ ಬಜಾರ್ ಠಾಣೆ ಎದುರು ಹೈಡ್ರಾಮವೇ ನಡೆದಿತ್ತು. ಇದೀಗ ರಾಜು ನಂದಕುಮಾರ್, ನಾಗಭುಜಂಗೆ ಸೇರಿದಂತೆ ಆರು ಜನರ ವಿರುದ್ಧ ಬಿಎನ್ಎಸ್ ಸೆಕ್ಷನ್ 351 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕೋರ್ಟ್ ಗಮನಕ್ಕೆ ತಂದ ಬಳಿಕವೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಈ ಮಧ್ಯೆ, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ಆಗಬೇಕೆಂದು ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ಕೈ ಬಿಟ್ಟು ಬಂಧಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ.

ಏನಿದು ಪ್ರಕರಣ?

ಬೀದರ್ ಗುತ್ತಿಗೆದಾರ ಸಚಿನ್ ಏಳು ಪುಟಗಳ ಡೆತ್​ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಡೆತ್ ನೋಟ್​​​ನಲ್ಲಿ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್, ಆಂದೋಲ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಂದು ಪಾಟೀಲ್, ಮಣಿಕಂಠ ಸೇರಿದಂತೆ ನಾಲ್ಕು ಜನರ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂದು ಉಲ್ಲೇಖವಾಗಿತ್ತು. ಇದು ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ: ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬಿಜೆಪಿ ನಾಯಕರು, ಪೊಲೀಸ್ ಮಧ್ಯೆ ಹೈಡ್ರಾಮಾ

ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರ್ಗಿ ಮಹಾ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್ ಈ ಹಿಂದೆ ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ 30 ಗುಂಡು ಖರೀದಿ ಮಾಡಿದ್ದ ಪ್ರಕರಣದಲ್ಲಿ ಬಂದನುಕ್ಕೊಳಗಾಗಿದ್ದ. ಇದೀಗ ಆತನ ವಿರುದ್ಧವೇ ಡೆತ್ ನೋಟ್​​ನಲ್ಲಿ ಉಲ್ಲೇಖವಾಗಿರುವುದು ರಾಜಕೀಯ ಆರೋಪಗಳಿಗೂ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Sat, 28 December 24