AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಅವಹೇಳನಾಕಾರಿ ಹೇಳಿಕೆ: ತೀವ್ರ ಪ್ರತಿಭಟನೆ ಬೆನ್ನಲ್ಲೇ ವಿಷಾದ

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಕಾರ್ಯಕರ್ತರನ್ನು ಬುಧವಾರ ಕೆರಳಿಸುವಂತೆ ಮಾಡಿತ್ತು. ಛಲವಾದಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ದಿನಿವಿಡೀ ಪ್ರತಿಭಟನೆ ನಡೆಸಿದ್ದರು. ಪರಿಣಾಮವಾಗಿ ಛಲವಾದಿ ಅವರು ಸುಮಾರು ನಾಲ್ಕೈದು ಗಂಟೆ ಕಾಲ ಚಿತ್ತಾಪುರದ ಪ್ರವಾಸಿ ಮಂದಿರದ ಒಳಗಡೆಯೇ ಕೂರುವಂತಾಯಿತು. ಕೊನೆಗೆ ಛಲವಾದಿ ತಾವಾಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಪರಿಷತ್ ವಿಪಕ್ಷ ನಾಯಕರಿಗೆ ಪ್ರವಾಸಿ ಮಂದಿರದ ಒಳಗೆ ದಿಗ್ಬಂಧನ ಹಾಕಿದ ಕೃತ್ಯವನ್ನು ಬಿಜೆಪಿ ಖಂಡಿಸಿದೆ. ಏನಿದು ವಿವಾದ ಎಂಬ ಸಮಗ್ರ ವಿವರ ಇಲ್ಲಿದೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಅವಹೇಳನಾಕಾರಿ ಹೇಳಿಕೆ: ತೀವ್ರ ಪ್ರತಿಭಟನೆ ಬೆನ್ನಲ್ಲೇ ವಿಷಾದ
ಛಲವಾದಿ ನಾರಾಯಣಸ್ವಾಮಿ & ಪ್ರಿಯಾಂಕ್ ಖರ್ಗೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:May 22, 2025 | 9:42 AM

Share

ಕಲಬುರಗಿ, ಮೇ 22: ಕಲಬುರಗಿ ಪ್ರವಾಸದಲ್ಲಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಆಡಿದ ಅವಹೇಳನಕಾರಿ ಮಾತು ತೀವ್ರ ವಿರೋಧಕ್ಕೆ ಗುರಿಯಾಯಿತು. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಯಶ್ವಸಿಯಾದ ಬಗ್ಗೆ ಬಿಜೆಪಿ ಎಲ್ಲಾ ಕಡೆ ತಿರಂಗಾ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದಕ್ಕಾಗಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ ಯಾತ್ರೆಯಲ್ಲಿ ಭಾಗವಹಿಸಲು ಬಂದಿದ್ದರು. ಅದಕ್ಕೂ ಮೊದಲು ಬೆಳಗ್ಗೆ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದರು. ಈ ವೇಳೆ, ಪ್ರಧಾನಿ ಮೋದಿಯನ್ನು ಪ್ರಶ್ನಿಸುವ ಸಚಿವ ಪ್ರಿಯಾಂಕ್ ಖರ್ಗೆ ಮೊದಲು ತಮ್ಮ ತಂದೆಯನ್ನು ಪ್ರಶ್ನಿಸಲಿ ಎಂದಿದ್ದಾರೆ. ಅಷ್ಟಕ್ಕೇ ಸುಮ್ಮನಾಗದೆ, ‘‘ಆನೆ ನಡೆಯುವಾಗ ನಾಯಿ ಬೊಗುಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ನಾಯಿ ತರ ಬೋಗಳುತ್ತಾರೆ’’ ಎಂದು ಬಿಟ್ಟಿದ್ದರು.

ಛಲವಾದಿ ಅವರ ಈ ಹೇಳಿಕೆ ಕಲಬುರಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ರಾಜಕೀಯವಾಗಿ ನಮ್ಮ‌ನಾಯಕರನ್ನು ನೀವು ಏನೇ ಟೀಕೆ ಮಾಡಿದರೂ ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕವಾಗಿ ನಾರಾಯಣಸ್ವಾಮಿ ಬೈದಿದ್ದಾರೆ. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದರು. ನಾರಾಯಣಸ್ವಾಮಿ ಚಿತ್ತಾಪುರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ ಗೇಟ್ ಮುಂದೆ ನೂರಾರು ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದ್ದಾರೆ. ಛಲುವಾದಿ ನಾರಾಯಣಸ್ವಾಮಿ ಕ್ಷಮೆ ಕೇಳಲೆಬೇಕು, ಅಲ್ಲಿಯವರೆಗೂ ಪ್ರತಿಭಟನೆ‌ ಕೈ ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಸಂಜೆ ನಾಲ್ಕು ಗಂಟೆಗೆ ಹೊತ್ತಿಗೆ ಚಿತ್ತಾಪುರ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ, ಕೈ ಕಾರ್ಯಕರ್ತರು ಘೆರಾವ್ ಹಾಕಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ನೀಡಿರುವ ಹೇಳಿಕೆಗೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಸಂಜೆ ತಿರಂಗಾಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಳಲು ಬಿಡದಂತೆ ಘೆರಾವ್ ಹಾಕಿದ್ದಾರೆ. ಸುಮಾರು ನಾಲ್ಕೈದು ಗಂಟೆಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರು ಐಬಿ ಗೇಟ್ ಮುಂದೆಯೇ ಪ್ರತಿಭಟನೆ ಮಾಡಿದ ಕಾರಣ ಛಲವಾದಿ ನಾರಾಯಣಸ್ವಾಮಿ ಸ್ವಾಮಿ ಪ್ರವಾಸಿ ಮಂದಿರದ ಒಳಗಡೆಯೇ ಕಾಲ ಕಳೆಯುವಂತಾಯಿತು. ಅಷ್ಟರಲ್ಲಿ ಈ ವಿಷಯ ರಾಜ್ಯ ಬಿಜೆಪಿ‌ ಹಿರಿಯ ನಾಯಕರ ಗಮನಕ್ಕೂ ಬಂದಿತ್ತು.

ಇದನ್ನೂ ಓದಿ
Image
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಶುಕ್ರವಾರ ಸಂಚಾರ ಸಮಯದಲ್ಲಿಲ್ಲ ಬದಲಾವಣೆ
Image
ಮಳೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ ಆತಂಕ
Image
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ
Image
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ

ನಾಲ್ಕೈದು ಗಂಟೆ ಪ್ರವಾಸಿ ಮಂದಿರದ ಒಳಗಡೆಯೇ ಲಾಕ್ ಆದ ಛಲವಾದಿ

ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆಯ ಕಾರಣ ಛಲವಾದಿ ನಾರಾಯಣಸ್ವಾಮಿ ಸುಮಾರು ನಾಲ್ಕೈದು ಗಂಟೆ ಪ್ರವಾಸಿ ಮಂದಿರದ ಒಳಗಡೆಯೇ ಉಳಿಯುವಂತಾಯಿತು. ಪ್ರವಾಸಿ ಮಂದಿರದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಮಾತ್ರವಲ್ಲದೆ, ಛಲವಾದಿ ನಾರಾಯಣಸ್ವಾಮಿ ಕಾರಿನ ಮೇಲೆ ಬಣ್ಣ ಎರಚಿ, ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೇಡಿಯ ಕೊನೆಯ ಅಸ್ತ್ರವೇ ವೈಯಕ್ತಿಕ ನಿಂದನೆ: ಪ್ರಿಯಾಂಕ್

ತಮ್ಮ ವಿರುದ್ಧದ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರ ಈ ಎಲ್ಲಾ ನಿಂದನೆಗಳು ನನ್ನ ವಿರುದ್ಧ ಅವರಿಗಿರುವ ಅಪರಿಮಿತ ಅಸಹನೆಯನ್ನು ತೋರಿಸುತ್ತದೆ. ಹೇಡಿಯ ಕೊನೆಯ ಅಸ್ತ್ರವೇ ಅಪಪ್ರಚಾರ ಮತ್ತು ವೈಯಕ್ತಿಕ ನಿಂದನೆ ಎನ್ನುವ ನಾಣ್ಣುಡಿಗೆ ಬಿಜೆಪಿಯವರೇ ಉದಾಹರಣೆಯಾಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ ಸೂಚನೆ ಮೇರೆಗೆ ಛಲವಾದಿ ವಿಷಾದ

ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ನಾರಾಯಣಸ್ವಾಮಿಗೆ ಪೋನ್ ಮಾಡಿ, ಹೇಳಿಕೆಯಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಆ ರೀತಿ ಉಲ್ಲೇಖಿಸಬಾರದಿತ್ತು ಎಂದಿದ್ದಾರೆ. ಹೀಗಾಗಿ ತಮ್ಮ ಹೇಳಿಕೆಯಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಛಲವಾದಿ ಹೇಳಿದ್ದಾರೆ. ಪ್ರವಾಸಿ ಮಂದಿರದ ಒಳಗಡೆಯಿಂದಲೇ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೊನೆಗೆ ನಾಲ್ಕೈದು ಗಂಟೆಗಳ ಬಳಿಕ ಪ್ರವಾಸಿ ಮಂದಿರದಿಂದ ಯಾದಗಿರಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: ಶಿಷ್ಟಾಚಾರದ ಪ್ರಕಾರ ಬಿಬಿಎಂಪಿ ಅಧಿಕಾರಿಗಳನ್ನು ನನ್ನನ್ನು ಸ್ವಾಗತಿಸಿದ್ದಾರೆ ಅಷ್ಟೇ, ಎಲ್ಲೂ ರೆಡ್ ಕಾರ್ಪೆಟ್ ಇರಲಿಲ್ಲ: ಸಿದ್ದರಾಮಯ್ಯ

ಒಟ್ಟಿನಲ್ಲಿ ಬೆಳಿಗ್ಗೆಯಿಂದ ಛಲವಾದಿ ನಾರಾಯಣಸ್ವಾಮಿ ಆಡಿದ ಅದೊಂದು ಮಾತು ಹಲ್ ಚಲ್ ಸೃಷ್ಟಿಸಿತ್ತು.ಕೊನೆಗೆ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.

ಪಾಳೆಗಾರಿಕೆ ಸಂಸ್ಕೃತಿ: ವಿಜಯೇಂದ್ರ ಕಿಡಿ

ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ. ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ ಎಂದು ಎಕ್ಸ್ ಸಂದೇಶದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 am, Thu, 22 May 25

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ