AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಿತ ಡ್ರಗ್ಸ್‌ ಸರಬರಾಜು ಆರೋಪಿಗೂ ನಿಗಮದಲ್ಲಿ ಸ್ಥಾನ!: KKRTC ನಿರ್ದೇಶಕರಾಗಿ ಲಿಂಗರಾಜ್ ಕಣ್ಣಿ ನೇಮಕಕ್ಕೆ ಆಕ್ಷೇಪ

ನಿಷೇಧಿತ ಡ್ರಗ್ಸ್ ಸರಬರಾಜು ಪ್ರಕರಣದ ಆರೋಪಿ ಹಾಗೂ ಉಚ್ಚಾಟಿತ ಕಾಂಗ್ರೆಸ್ ಮುಖಂಡ ಲಿಂಗರಾಜ್ ಕಣ್ಣಿ ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ನಿರ್ದೇಶಕರನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. 2025ರ ಜುಲೈನಲ್ಲಿ ಮಾದಕ ದ್ರವ್ಯ ಪ್ರಕರಣ ಬೆಳಕಿಗೆ ಬಂದ ತಕ್ಷಣ, ಜಿಲ್ಲಾ ಕಾಂಗ್ರೆಸ್ ಸಮಿತಿಯು ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿತ್ತು.

ನಿಷೇಧಿತ ಡ್ರಗ್ಸ್‌ ಸರಬರಾಜು ಆರೋಪಿಗೂ ನಿಗಮದಲ್ಲಿ ಸ್ಥಾನ!: KKRTC ನಿರ್ದೇಶಕರಾಗಿ ಲಿಂಗರಾಜ್ ಕಣ್ಣಿ ನೇಮಕಕ್ಕೆ ಆಕ್ಷೇಪ
ಲಿಂಗರಾಜ್ ಕಣ್ಣಿImage Credit source: Lingaraj Kanni Facebook
ದತ್ತಾತ್ರೇಯ ಪಾಟೀಲ್​
| Edited By: |

Updated on:Nov 12, 2026 | 7:45 PM

Share

ಕಲಬುರಗಿ, ನವೆಂಬರ್​​ 12: ರಾಜ್ಯ ಸರ್ಕಾರ ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿ ಉಚ್ಚಾಟಿತ ಕಾಂಗ್ರೆಸ್ ಮುಖಂಡ ಲಿಂಗರಾಜ್ ಕಣ್ಣಿ ನೇಮಕ ಮಾಡಿದೆ. ಈ ನಿರ್ಧಾರವೀಗ ತೀರ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಲಿಂಗರಾಜ್ ಕಣ್ಣಿ, ನಿಷೇಧಿತ ಕೋಡೈನ್ ಫಾಸ್ಫೇಟ್ ಡ್ರಗ್ಸ್‌ ಸರಬರಾಜು ಪ್ರಕರಣದ ಆರೋಪಿಯಾಗಿದ್ದು, ಇದೇ ಕಾರಣಕ್ಕೆ ಅವರು ಕಾಂಗ್ರೆಸ್​​ ಪಕ್ಷದಿಂದ ಉಚ್ಛಾಟಿಸಿತ್ತು. ಆದರೆ ಅದೇ ಡ್ರಗ್ಸ್‌ ಕೇಸ್ ಆರೋಪಿಯನ್ನು ಕೆಕೆಆರ್‌ಟಿಸಿ ನಿಗಮದ ನೂತನ ನಿರ್ದೇಶಕರಾಗಿ ಈಗ ನೇಮಿಸಲಾಗಿದೆ.

ನಿಷೇಧಿತ ಕೋಡೈನ್ ಫಾಸ್ಫೇಟ್ ಸಮೇತ ಸಿಕ್ಕಿಬಿದ್ದಿದ್ದ ಕಣ್ಣಿ

ಈ ಹಿಂದೆ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿದ್ದ ಲಿಂಗರಾಜ್ ಕಣ್ಣಿ ನಿಷೇಧಿತ ಕೋಡೈನ್ ಫಾಸ್ಫೇಟ್ ಸಮೇತ ಸಿಕ್ಕಿಬಿದ್ದಿದ್ದರು. ಕಣ್ಣಿ ಉಳಿದುಕೊಂಡಿದ್ದ ಲಾಡ್ಜ್‌ನಲ್ಲಿ 120 ಬಾಟಲ್ ಪತ್ತೆಯಾಗಿದ್ದ ಹಿನ್ನೆಲೆ ಎನ್‌ಡಿಪಿಎಸ್‌, ಡ್ರಗ್ಸ್‌ ಮತ್ತು ಕಾಸ್ಮೆಟಿಕ್‌ ಆ್ಯಕ್ಟ್‌ನಡಿ 2025ರ ಜೂ.22ರಂದು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದರು. ಈ ಸಂಬಂಧ ಕಲ್ಯಾಣ್ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕಣ್ಣಿ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ನಿಗಮ ಮಂಡಳಿ ಪಟ್ಟಿಯಲ್ಲಿ RSS ಕಾರ್ಯಕರ್ತನಿಗೆ ಸ್ಥಾನ! ‘ಕೈ’ ಕಾರ್ಯಕರ್ತರಿಂದ ತೀವ್ರ ಅಸಮಾಧಾನ

ಮೊದಲು ಬಿಜೆಪಿಯಲ್ಲಿದ್ದ ಲಿಂಗರಾಜ್ ಕಣ್ಣಿ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. 2025ರ ಜುಲೈನಲ್ಲಿ ಮಾದಕ ದ್ರವ್ಯ ಪ್ರಕರಣ ಬೆಳಕಿಗೆ ಬಂದ ತಕ್ಷಣ, ಜಿಲ್ಲಾ ಕಾಂಗ್ರೆಸ್ ಸಮಿತಿಯು ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿತ್ತು. ಮತ್ತೊಂದೆಡೆ ಆರ್​​ಎಸ್​​ಎಸ್​ ಕಾರ್ಯಕರ್ತನಿಗೆ ರೇಷ್ಮೆ ಅಭಿವೃದ್ಧಿ ನಿಗಮ ನಿರ್ದೇಶಕ ಸ್ಥಾನ ನೀಡಿರುವುದು ಕೂಡ ಕಾಂಗ್ರೆಸ್​ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಚಿತ್ರದುರ್ಗದ ಲೀಲಾಧರ ಠಾಕೂರ್​ಗೆ ನಿಗಮದ ನಿರ್ದೇಶಕ ಸ್ಥಾನ ಒಲಿದಿದ್ದು, ಇವರು ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಆಪ್ತರೂ ಹೌದು. ಲೀಲಾಧರ ಠಾಕೂರ್​​ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸೇವೆ ಕೂಡ ಸಲ್ಲಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:44 pm, Thu, 12 November 26

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ