ಕಲಬುರಗಿ ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಹಿಂದೂ ಜಾಗೃತಿ ಸೇನೆ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಕಲಬುರಗಿ, ಫೆಬ್ರವರಿ 23: ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ (Christianity) ಮತಾಂತರಕ್ಕೆ (Conversion) ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಅಶ್ವಿನಿ ಹಾಗೂ ರುಬಿಕಾ ಎಂಬ ನರ್ಸ್ಗಳು ಗುರುವಾರ (ಫೆ.22)ರ ರಾತ್ರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಭೋಧಿಸುತ್ತಿದ್ದರು. ಹಾಗೆ ದುಡ್ಡಿನ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಿಸುತ್ತಿದ್ದರು. ಈ ವೇಳೆ ಹಿಂದು ಜಾಗೃತಿ ಸೇನೆ ದಾಳಿ ಮಾಡಿದ್ದು, ಕ್ವಾಟರ್ಸ್‌ನಲ್ಲಿದ್ದ ನರ್ಸ್‌ಗಳಿಗೆ ಪ್ರಶ್ನೆ ಮಾಡಿದೆ.
ಬಳಿಕ ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಮತಾಂತರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಟಕಲ್ ಪೊಲೀಸರು ತಡರಾತ್ರಿ ಆಸ್ಪತ್ರೆಯ ಕ್ವಾಟರ್ಸ್ಗೆ ಭೇಟಿ ನೀಡಿದ್ದಾರೆ. ನಂತರ ಮತಾಂತರ ಮಾಡುತ್ತಿದ್ದವರ ವಿರುದ್ಧ ಹಿಂದೂ ಜಾಗೃತಿ ಸೇನೆ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ