ಕಲಬುರಗಿ ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್​​​ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಹಿಂದೂ ಜಾಗೃತಿ ಸೇನೆ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಕಲಬುರಗಿ ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್​​​ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ
ದೂರಿನ ಪತ್ರಿ, ಆಸ್ಪತ್ರೆ
Edited By: ವಿವೇಕ ಬಿರಾದಾರ

Updated on: Feb 23, 2024 | 11:21 AM

ಕಲಬುರಗಿ, ಫೆಬ್ರವರಿ 23: ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ (Christianity) ಮತಾಂತರಕ್ಕೆ (Conversion) ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಅಶ್ವಿನಿ ಹಾಗೂ ರುಬಿಕಾ ಎಂಬ ನರ್ಸ್​​ಗಳು ಗುರುವಾರ (ಫೆ.22)ರ ರಾತ್ರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಭೋಧಿಸುತ್ತಿದ್ದರು. ಹಾಗೆ ದುಡ್ಡಿನ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಿಸುತ್ತಿದ್ದರು. ಈ ವೇಳೆ ಹಿಂದು ಜಾಗೃತಿ ಸೇನೆ ದಾಳಿ ಮಾಡಿದ್ದು, ಕ್ವಾಟರ್ಸ್‌ನಲ್ಲಿದ್ದ ನರ್ಸ್‌ಗಳಿಗೆ ಪ್ರಶ್ನೆ ಮಾಡಿದೆ.

ಬಳಿಕ ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಮತಾಂತರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಟಕಲ್ ಪೊಲೀಸರು ತಡರಾತ್ರಿ ಆಸ್ಪತ್ರೆಯ ಕ್ವಾಟರ್ಸ್​​ಗೆ ಭೇಟಿ ನೀಡಿದ್ದಾರೆ. ನಂತರ ಮತಾಂತರ ಮಾಡುತ್ತಿದ್ದವರ ವಿರುದ್ಧ ಹಿಂದೂ ಜಾಗೃತಿ ಸೇನೆ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us