AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸಹೋದರಿ ಮೇಲೆ ಕಣ್ಣು ಹಾಕಿದ್ದವನ ಕಾಲು ಮುರಿದಿದ್ದ ಸಹೋದರನ ಕೊಲೆ

ತನ್ನ ಸಹೋದರಿ ಹಿಂದೆ ಬಿದ್ದಿದ್ದ ವ್ಯಕ್ತಿಯ ಕಾಲನ್ನು ಸಹೋದರ ಮುರಿದಿದ್ದನು. ಆದರೆ ಈ ವಿಚಾರವಾಗಿ ದ್ವೇಷ ಬೆಳೆಸಿದ್ದ ಕಾಲು ಮುರಿತಕ್ಕೊಳಗಾಗಿದ್ದ ವ್ಯಕ್ತಿ ತನ್ನ ಸಹಚರನೊಂದಿಗೆ ಸೇರಿಕೊಂಡು ಮಹಿಳೆಯ ಸಹೋದರನನ್ನ ಕೊಲೆ ಮಾಡಿದ್ದಾನೆ. ಈ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಭಾನುವಾರ (ಜುಲೈ 30) ನಡೆದಿದೆ.

ಕಲಬುರಗಿ: ಸಹೋದರಿ ಮೇಲೆ ಕಣ್ಣು ಹಾಕಿದ್ದವನ ಕಾಲು ಮುರಿದಿದ್ದ ಸಹೋದರನ ಕೊಲೆ
ಕೊಲೆಯಾದ ಮಹಾಂತಪ್ಪ ಮತ್ತು ಕೊಲೆ ಆರೋಪಿಗಳಾದ ಪ್ರಶಾಂತ್, ದಶರಥ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 31, 2023 | 3:52 PM

Share

ಕಲಬುರಗಿ, ಜುಲೈ 31: ಅನೈತಿಕ ಸಂಬಂಧ ಬೆಳೆಸುವಂತೆ ತನ್ನ ಸಹೋದರಿಗೆ ಒತ್ತಾಯಿಸುತ್ತಿದ್ದ ವ್ಯಕ್ತಿಯ ಕಾಲನ್ನು ಮುರಿದಿದ್ದ ಸಹೋದರನೇ ಇದೀಗ ಕೊಲೆಯಾಗಿದ್ದಾನೆ. ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಭಾನುವಾರ (ಜುಲೈ 30) ರಾತ್ರಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಾಂತಪ್ಪ ಗಂಡೋಳಿ (26) ಎಂಬವರನ್ನು ಕೊಲೆ (Murder) ಮಾಡಲಾಗಿದೆ.

ನಿನ್ನೆ ರಾತ್ರಿ ತನ್ನ ಸಂಬಂಧಿ ಜೊತೆ ಚೌಡಾಪುರ ಗ್ರಾಮದಲ್ಲಿರುವ ಬಾರ್ ಆಂಡ್ ರೆಸ್ಟೋರಂಟ್​ಗೆ ಹೋಗಿದ್ದ ಮಹಾಂತಪ್ಪ ಮದ್ಯ ಸೇವನೆ ಮಾಡುತ್ತಿದ್ದ. ಇದೇ ಸಂದರ್ಭದಲ್ಲಿ ಬಾರ್​ಗೆ ಬಂದಿದ್ದ ಇಬ್ಬರು ಯುವಕರು, ಮಹಾಂತಪ್ಪನ ಜೊತೆ ಜಗಳ ಆರಂಭಿಸಿದ್ದರು. ಬಾರ್​ನವರು ಹೊರಗೆ ಹೋಗಿ ಅಂತ ಹೇಳಿದ್ದಾರೆ. ಇದೇ ವೇಳೆ ತನ್ನ ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ಅರಿತ ಮಹಾಂತಪ್ಪ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ತಪ್ಪಿಸಿಕೊಳ್ಳುತ್ತಿದ್ದ ಮಹಾಂತಪ್ಪರನ್ನು ಬಿಡದ ಯುವಕರು ಮಾರಕಾಸ್ತ್ರದೊಂದಿಗೆ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಹಾಂತಪ್ಪರನ್ನು ಚೌಡಾಪುರ ಗ್ರಾಮದ ನಿವಾಸಿಗಳಾದ ಪ್ರಶಾಂತ್ ಮತ್ತು ದಶರಥ್ ಎಂಬವರು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರೇಮ ವಿವಾಹದ ಸಿಟ್ಟು: ಮೊಹರಂ ಹಬ್ಬದ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ, 8 ಜನರಿಗೆ ಗಾಯ

ಕೊಲೆಯಾಗಿರುವ ಮಹಾಂತಪ್ಪನ ಸಹೋದರಿ ಸುನಿತಾಗೆ ಮದುವೆಯಾಗಿದ್ದು, ಕೆಲವು ವರ್ಷಗಳ ಹಿಂದೆ ಆಕೆಯ ಪತಿ ಮೃತಪಟ್ಟಿದ್ದಾರೆ. ತನ್ನ ಪತಿ ಸಾವಿನ ನಂತರ ಮೂವರು ಮಕ್ಕಳೊಂದಿಗೆ ಸುನಿತಾ ತವರು ಸೇರಿದ್ದರು. ಜೀವನ ಸಾಗಿಸಲು ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಈಕೆಯ ಮೇಲೆ ಕಣ್ಣು ಹಾಕಿದ ಆರೋಪಿ ಪ್ರಶಾಂತ್, ತನ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಸುನಿತಾಗೆ ಪೀಡಿಸಲು ಆರಂಭಿಸಿದ್ದನು.

ಒಂದು ಬಾರಿ ಸುನಿತಾಳ ಮೇಲೆ ಅತ್ಯಾಚಾರಕ್ಕೂ ಪ್ರಶಾಂತ್ ಯತ್ನಸಿದ್ದನಂತೆ. ಎರಡು ವರ್ಷಗಳ ಹಿಂದೆ ಈ ವಿಚಾರವಾಗಿ ಮಹಾಂತಪ್ಪ, ಪ್ರಶಾಂತ್​ನನ್ನು ಹಿಡಿದು ಕಾಲು ಮುರಿದಿದ್ದನು. ಈ ಕಾರಣಕ್ಕೆ ಪ್ರಶಾಂತ್ ಮಹಾಂತಪ್ಪನ ಮೇಲೆ ದ್ವೇಷ ಬೆಳೆಸಿದ್ದನು. ಅದರಂತೆ ನಿನ್ನೆ ಮಹಾಂತಪ್ಪರನ್ನು ಪ್ರಶಾಂತ್ ಮತ್ತು ಸಹಚರ ಅಟ್ಟಾಡಿಸಿ ಕೊಲೆ ಮಾಡಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದ್ದೊಬ್ಬ ಗಂಡು ಮಗನನ್ನು ಕಳೆದುಕೊಂಡ ಕುಟುಂಬ ಇದೀಗ ಕಂಗಾಲಾಗಿದೆ.

ಪ್ರಕರಣದ ಬಗ್ಗೆ ಮಾತನಾಡಿದ ಕಲಬುರಗಿ ಎಸ್​.ಪಿ. ಇಶಾ ಪಂತ್, ಮಹಾಂತಪ್ಪನ ಕೊಲೆಗೆ ಸಂಬಂಧಿದಂತೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ತನ್ನ ಸಹೋದರಿ ಜೊತೆ ಕಿರಿಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆರೋಪಿ, ಮಹಾಂತಪ್ಪನನ್ನು ಕೊಲೆ ಮಾಡಿದ್ದಾನೆ. ಆರೋಪಿಗಳಿಗೆ ಕಠೀಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಕ್ರೈಂ ಸುದ್ದಿಗಳಣ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್