ಹಿಜಾಬ್ ಧರಿಸಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ; ಕೊಠಡಿ ಮೇಲ್ವಿಚಾರಕನನ್ನು ಅಮಾನತ್ತು ಮಾಡಿದ ಡಿಡಿಪಿಐ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 28 ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿನಿ ಆಗಮಿಸಿದ್ದಳು. ಆದರೆ ಇದಕ್ಕೆ ಕೊಠಡಿ ಮೇಲ್ವಿಚಾರಕ ಹಯಾದ್ ಭಾಗವಾನ್ ಪ್ರಶ್ನೆ ಮಾಡದೆ ಅವಕಾಶ ನೀಡಿದ್ದಾರೆ.

ಹಿಜಾಬ್ ಧರಿಸಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ; ಕೊಠಡಿ ಮೇಲ್ವಿಚಾರಕನನ್ನು ಅಮಾನತ್ತು ಮಾಡಿದ ಡಿಡಿಪಿಐ
ಕಲಬುರಗಿ ಡಿಡಿಪಿಐ ಅಶೋಕ್ ಭಜಂತ್ರಿ ಅಮಾನತ್ತು
Follow us
TV9 Web
| Updated By: preethi shettigar

Updated on: Mar 31, 2022 | 2:42 PM

ಕಲಬುರಗಿ: ಹಿಜಾಬ್​ ಧರಿಸಿ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆ ಬರೆಯಲು ಅವಕಾಶ ನೀಡಿದ ಹಿನ್ನಲೆ ಕೊಠಡಿ ಮೇಲ್ವಿಚಾರಕನನ್ನು ಅಮಾನತ್ತು ಮಾಡಿ ಕಲಬುರಗಿ ಡಿಡಿಪಿಐ (DDPI) ಆದೇಶ ಹೊರಡಿಸಿದ್ದಾರೆ. ಕಲಬುರಗಿ ಡಿಡಿಪಿಐ ಅಶೋಕ್ ಭಜಂತ್ರಿ ಅಮಾನತ್ತು (Suspend) ಮಾಡಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕ ಹಯಾದ್ ಭಾಗವಾನ್​ ಅನ್ನು ಅಮಾನತ್ತು ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 28 ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿನಿ ಆಗಮಿಸಿದ್ದಳು. ಆದರೆ ಇದಕ್ಕೆ ಕೊಠಡಿ ಮೇಲ್ವಿಚಾರಕ ಹಯಾದ್ ಭಾಗವಾನ್ ಪ್ರಶ್ನೆ ಮಾಡದೆ ಅವಕಾಶ ನೀಡಿದ್ದಾರೆ. ಹೀಗಾಗಿ ಈ ಬಗ್ಗೆ ಜೇವರ್ಗಿ ಶ್ರೀರಾಮಸೇನೆ ಅಧ್ಯಕ್ಷ ನಿಂಗನಗೌಡ ಡಿಡಿಪಿಐಗೆ ದೂರು ನೀಡಿದ್ದರು. ಸದ್ಯ ಡಿಡಿಪಿಐ ಶಿಕ್ಷಕನನ್ನು ಅಮಾನತ್ತು ಮಾಡಿದ್ದಾರೆ.

ಗದಗ: ಹಿಜಾಬ್ ಅವಕಾಶ ನೀಡಿದ್ದಕ್ಕೆ ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರ ಅಮಾನತು ಜಿಲ್ಲೆಯಲ್ಲಿಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಿಜಾಬ್ ಹಾಕಿಕೊಂಡ ವಿದ್ಯಾರ್ಥಿಗಳಿಗೆ ಅನುಮತಿ ನೀಡಿದ ಹಿನ್ನೆಲೆ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರ ಅಮಾನತುಗೊಳಿಸಲಾಗಿದೆ. ಗದಗ ನಗರದ ಸಿಎಸ್ ಪಾಟೀಲ್ ಬಾಲಕರ ಹಾಗೂ ಬಾಲಕಿಯರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಿನ್ನೆ ಹಿಜಾಬ್ ಹಾಕಿಕೊಂಡು ಕೆಲ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಹಿಜಾಬ್ ಹಾಕಿಕೊಂಡ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೊಠಡಿಯಲ್ಲಿ ಅವಕಾಶ ನೀಡಿದಕ್ಕೆ ಅಮಾನತುಗೊಳಿಸಿ ಆದೇಶ ನೀಡಲಾಗಿದೆ. ಸಿಎಸ್ ಪಾಟೀಲ್ ಬಾಲಕರ ಪ್ರೌಢ ಶಾಲೆಯ ಮುಖ್ಯ ಅಧೀಕ್ಷಕ ಕೆಬಿ ಭಜಂತ್ರಿ ಅಮಾನತುಗೊಂಡಿದ್ದಾರೆ. ಸಿಎಸ್ ಪಾಟೀಲ್ ಬಾಲಕಿಯರ ಪ್ರೌಢಶಾಲಾ ಮುಖ್ಯ ಅಧೀಕ್ಷಕ ಬಿಎಸ್ ಹೊನಗುಂಡಿ ಅಮಾನತುಗೊಳಿಸಿ ಗದಗ ಡಿಡಿಪಿಐ ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಮಾಡುವಂತೆ ಒತ್ತಾಯ; ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು