AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಪ್ರಯುಕ್ತ ಕೆಕೆಆರ್​ಟಿಸಿಯಿಂದ 600 ಹೆಚ್ಚುವರಿ ಬಸ್​​ಗಳು: ಮುಂಗಡ ಬುಕ್ಕಿಂಗ್​​​ ಮಾಡುವವರಿಗೆ ಭಾರೀ ರಿಯಾಯಿತಿ

KKRTC Deepavali extra buses: ದೀಪಾವಳಿ ಹಬ್ಬ ಮತ್ತು ಹುಲಿಜಂತಿ ಜಾತ್ರೆ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 600 ಹೆಚ್ಚುವರಿ ಬಸ್​ಗಳು ಕಾರ್ಯಾಚರಣೆ ಮಾಡಲಿವೆ. ಈ ಕುರಿತಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ. ಹಾಗಾದರೆ ಯಾವ ದಿನ, ಯಾವೆಲ್ಲಾ ಸ್ಥಳಗಳಿಗೆ ಹೆಚ್ಚುವರಿ ಬಸ್​​ ಸಂಚಾರವಿರಲಿದೆ ಎಂಬ ಮಾಹಿತಿ ಇಲ್ಲಿದೆ.

ದೀಪಾವಳಿ ಪ್ರಯುಕ್ತ ಕೆಕೆಆರ್​ಟಿಸಿಯಿಂದ 600 ಹೆಚ್ಚುವರಿ ಬಸ್​​ಗಳು: ಮುಂಗಡ ಬುಕ್ಕಿಂಗ್​​​ ಮಾಡುವವರಿಗೆ ಭಾರೀ ರಿಯಾಯಿತಿ
ಕೆಕೆಆರ್​ಟಿಸಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 16, 2025 | 7:35 AM

Share

ಕಲಬುರಗಿ, ಅಕ್ಟೋಬರ್​ 16: ದೀಪಾವಳಿ ಹಬ್ಬ (deepavali festival) ಹಾಗೂ ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಮಹೋತ್ಸವ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಇತರೆ ಸ್ಥಳಗಳಿಗೆ ಸಂಚರಿಸಲು 600 ಹೆಚ್ಚುವರಿ ಬಸ್​​ಗಳು ಕಾರ್ಯಾಚರಣೆ ನಡೆಸಲಿವೆ. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರಯಾಣಿಕರು ಇದರ ಸೌಲಭ್ಯ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.

ಯಾವೆಲ್ಲಾ ದಿನ ಹೆಚ್ಚುವರಿ ಬಸ್​​ಗಳ ಸಂಚಾರ

ಈ ಕುರಿತು ಡಾ.ಬಿ.ಸುಶೀಲಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅಕ್ಟೋಬರ್ 16, 17 ಮತ್ತು 18 ರಂದು ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಅಕ್ಟೋಬರ್ 17, 18, ಮತ್ತು 19 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ಬಸ್​​ಗಳು ಕಾರ್ಯಾಚರಣೆ ಮಾಡುತ್ತಿವೆ.

ಇದನ್ನೂ ಓದಿ: Deepavali: ಬೆಂಗಳೂರಿನಿಂದ ವಿವಿಧ ಊರುಗಳಿಗೆ ಕೆಎಸ್​ಆರ್​ಟಿಸಿಯಿಂದ 2500 ಹೆಚ್ಚುವರಿ ಬಸ್

ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಪ್ರಮುಖ ದಿನದಂದು ಅಂದರೆ ಅಕ್ಟೋಬರ್ 20, 21 ಮತ್ತು 22 ರಂದು ಜಾತ್ರಾ ಸಾರಿಗೆಗಳ ಭಕ್ತಾದಿಗಳು ಪ್ರಯೋಜನ ಪಡೆಯಬಹುದಾಗಿದೆ. ಇನ್ನು ಹಬ್ಬ ಮತ್ತು ರಜೆ ಮುಗಿದ ನಂತರ ಅಕ್ಟೋಬರ್ 22 ರಿಂದ 26ರವರೆಗೆ ಸಹ ಸಂಚಾರ ದಟ್ಟಣೆಗನುಗುಣವಾಗಿ ಬಸ್​​ಗಳು ರಸ್ತೆಗಿಳಿಯಲಿವೆ.

ಸಾರ್ವಜನಿಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್‍ನಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅವಕಾಶವಿದ್ದು, ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿರುವ 18 ಗಣಕೀಕೃತ ಬುಕ್ಕಿಂಗ್ ಕೌಂಟರ್‍ಗಳ ಮುಖಾಂತರ ಆಸನ ಕಾಯ್ದಿರಿಸಬಹುದಾಗಿದೆ.

ಮುಂಗಡ ಟಿಕೆಟ್ ಕಾಯ್ದಿರಿಸುವವರಿಗೆ ರಿಯಾತಿಯಿ

4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್​​ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೆಟ್​​ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ ಅಪ್ ಪಾಯಿಂಟ್ ಸ್ಥಳ ಮತ್ತು ಹೆಸರು ಗಮನಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.