AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ದೀಪಾವಳಿ ಹಬ್ಬದಂದು ದುರಂತ: ಪಟಾಕಿ ಅಂತ ಮದ್ದಿಗೆ ಬೆಂಕಿ ಹಚ್ಚಿದ ಬಾಲಕ; ಸ್ಫೋಟಗೊಂಡು ಸಾವು

ದೀಪಾವಳಿ ಹಬ್ಬದ ಸಂಭ್ರಮದಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಪಟಾಕಿ ಅಂತಾ ಕಾಡುಹಂದಿ ಓಡಿಸಲು ತಂದಿದ್ದ ಮದ್ದಿಗೆ ಬೆಂಕಿ ಹಚ್ಚಿದ್ದು, ಮದ್ದು ಸ್ಫೋಟಗೊಂಡು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಪ್ರಕರಣ ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಕಲಬುರಗಿಯಲ್ಲಿ ದೀಪಾವಳಿ ಹಬ್ಬದಂದು ದುರಂತ: ಪಟಾಕಿ ಅಂತ ಮದ್ದಿಗೆ ಬೆಂಕಿ ಹಚ್ಚಿದ ಬಾಲಕ; ಸ್ಫೋಟಗೊಂಡು ಸಾವು
ಪ್ರಾತಿನಿಧಿಕ ಚಿತ್ರImage Credit source: Getty images
ದತ್ತಾತ್ರೇಯ ಪಾಟೀಲ್​
| Edited By: |

Updated on: Nov 08, 2026 | 7:43 PM

Share

ಮುಖ್ಯಾಂಶಗಳು

  • ಪಟಾಕಿ ಅಂತಾ ಕಾಡುಹಂದಿ ಓಡಿಸಲು ತಂದಿಟ್ಟಿದ್ದ ಮದ್ದಿಗೆ ಬೆಂಕಿ ಹಚ್ಚಿದ ಬಾಲಕ
  • ಮದ್ದು ಸ್ಫೋಟಗೊಂಡು ಬಾಲಕ ಸ್ಥಳದಲ್ಲೇ ಸಾವು
  • ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಘಟನೆ

ಕಲಬುರಗಿ, ನವೆಂಬರ್​​ 08: ಪಟಾಕಿ ಹಚ್ಚುವ ಸಂಭ್ರಮ ಕ್ಷಣಾರ್ಧದಲ್ಲೇ ಸಾವಿನ ದುರಂತವಾಗಿ ಬದಲಾಗಿದೆ. ದೀಪಾವಳಿ ಪಟಾಕಿ ಅಂತ ಕಾಡುಹಂದಿಗಳಿಗಾಗಿ ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ 15 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭೀಮರಾಯ ಮೃತ ಬಾಲಕ. ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಈ ಘೋರ ದುರಂತ ನಡೆದಿದೆ.

ನಡೆದಿದ್ದೇನು? 

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದ ಬಾಲಕ ಭೀಮರಾಯ, ದೀಪಾವಳಿ ಪಟಾಕಿ ಅಂತ ಮನೆಯಲ್ಲಿ ಇಟ್ಟಿದ್ದ ಮದ್ದಿಗೆ ಬೆಂಕಿ ಹಚ್ಚಿದ್ದಾನೆ. ಆದರೆ ಅದು ಸಾಮಾನ್ಯ ಪಟಾಕಿಯಾಗಿರಲಿಲ್ಲ. ಕಾಡುಹಂದಿಗಳನ್ನ ಓಡಿಸಲು ತಂದಿಟ್ಟಿದ್ದ ಸ್ಫೋಟಕವಾಗಿತ್ತು. ಆ ಮದ್ದಿನ ಅಪಾಯ ಅರಿಯದ ಭೀಮರಾಯ, ಬೆಂಕಿ ಹಚ್ಚಿದ ಕ್ಷಣವೇ ದೊಡ್ಡ ಸ್ಫೋಟ ಸಂಭವಿಸಿದೆ.

ಶೋಕಸಾಗರದಲ್ಲಿ ಮುಳುಗಿದ ಕುಟುಂಬ

ಸ್ಫೋಟದ ತೀವ್ರತೆಗೆ ಬಾಲಕನ ತಲೆ ಛಿದ್ರಛಿದ್ರವಾಗಿದೆ. ಸ್ಥಳದಲ್ಲೇ ಭೀಮರಾಯ ಸಾವನ್ನಪ್ಪಿದ್ದಾನೆ. ಕೆಲವೇ ಕ್ಷಣಗಳ ಹಿಂದೆ ಜೀವಂತವಾಗಿದ್ದ ಮಗ, ಕಣ್ಣೆದುರೇ ಪ್ರಾಣ ಕಳೆದುಕೊಂಡಿರುವ ದುರಂತ ಕುಟುಂಬವನ್ನ ಶೋಕಸಾಗರದಲ್ಲಿ ಮುಳುಗಿಸಿದೆ. ಪಟಾಕಿ ಹಚ್ಚುವ ಖುಷಿಯಲ್ಲಿ ಇದ್ದ ಬಾಲಕನ ಬದುಕು ಒಂದೇ ಕ್ಷಣದಲ್ಲಿ ಅಂತ್ಯವಾಗಿದೆ.

LIVE TV

ಕಾಡುಹಂದಿಗಳನ್ನ ಓಡಿಸಲು ತಂದಿದ್ದ ಸ್ಫೋಟಕ 

ಇನ್ನು ಭೀಮರಾಯನ ತಂದೆ ಕಾಡುಹಂದಿಗಳನ್ನ ಓಡಿಸಲು ಸ್ಫೋಟಕ ಮದ್ದನ್ನ ಮನೆಯಲ್ಲಿ ತಂದಿಟ್ಟಿದ್ದರು. ಅದನ್ನೇ ದೀಪಾವಳಿ ಪಟಾಕಿ ಅಂತ ಬಾಲಕ ಭಾವಿಸಿದ್ದಾನೆ. ಅಪಾಯಕಾರಿ ಮದ್ದು ಮನೆಯಲ್ಲಿ ಇರುವುದೇ ಈ ದುರಂತಕ್ಕೆ ಕಾರಣವಾಗಿದೆ. ಮಕ್ಕಳ ಕೈಗೆ ಇಂಥ ಸ್ಫೋಟಕ ವಸ್ತುಗಳು ಸಿಕ್ಕರೆ ಎಂಥ ಅನಾಹುತ ಸಂಭವಿಸುತ್ತೆ ಅನ್ನೋದಕ್ಕೆ ಹಂದರಕಿ ಗ್ರಾಮದಲ್ಲಿ ನಡೆದಿರುವ ಈ ಘಟನೆಯೇ ಉದಾಹರಣೆ.

ಇದನ್ನೂ ಓದಿ: ದೀಪಾವಳಿ ಅಚ್ಚರಿ: ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!

ಇನ್ನು ಮಗನನ್ನ ಕಳೆದುಕೊಂಡ ಕುಟುಂಬದ ನೋವು ಹೇಳತೀರದಾಗಿದೆ. ಮಗನ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ಹೆತ್ತವರಿಗೆ ಈಗ ಉಳಿದಿರುವುದು ದುಃಖ ಮಾತ್ರ. ಹದಿನೈದು ವರ್ಷದ ಭೀಮರಾಯ ಇನ್ನೂ ಬದುಕಿ ಬಾಳಬೇಕಿತ್ತು, ಓದಿ ಬೆಳೆದು ಹೆತ್ತವರಿಗೆ ಆಸರೆಯಾಗಬೇಕಿತ್ತು. ಆದರೆ ಪಟಾಕಿ ಅಂತ ಬೆಂಕಿ ಹಚ್ಚಿದ ಮದ್ದು ಆತನ ಬದುಕನ್ನೇ ಕಸಿದುಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?