ಎಐಸಿಸಿ ಅಧ್ಯಕ್ಷ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಲಬುರಗಿಯಲ್ಲಿ ಎಫ್​​ಐಆರ್

Kalaburagi News; ಖರ್ಗೆ ಅವರ ಬೆಂಬಲಿಗ ರಾಜೀವ್ ಜಾನೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಲಬುರಗಿಯಲ್ಲಿ ಎಫ್​​ಐಆರ್
ಆರಗ ಜ್ಞಾನೇಂದ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on: Aug 03, 2023 | 8:08 PM

ಕಲಬುರಗಿ, ಆಗಸ್ಟ್ 3: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರವಾಗಿ ಮಾಜಿ ಗೃಹ‌ ಸಚಿವ, ಬಿಜೆಪಿ ನಾಯಕ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಪ್ರಕರಣ ದಾಖಲಾಗಿದೆ. ಕಲಬುರಗಿ (Kalaburagi) ನಗರದ ಅಶೋಕ್ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಖರ್ಗೆ ಅವರ ಬೆಂಬಲಿಗ ರಾಜೀವ್ ಜಾನೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಆರಗ ಜ್ಞಾನೇಂದ್ರ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಆಕ್ಷೇಪ ವ್ಯಕ್ತಪಡಿಸಿತ್ತು. ಆರಗ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್​ಗೆ ಪತ್ರ ಬರೆದಿತ್ತು. ಈ ಮಧ್ಯೆ, ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಜಾತಿ‌ ನಿಂದನೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಖರ್ಗೆ, ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ; ವಿವಾದಿತ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅರಗ ಜ್ಞಾನೇಂದ್ರ

ಖಂಡ್ರೆ, ಖರ್ಗೆ ವಿರುದ್ಧ ಆರಗ ಜ್ಞಾನೇಂದ್ರ ಹೇಳಿದ್ದೇನು?

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಆಗಸ್ಟ್ 2ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ್ದ ಅವರು, ಅರಣ್ಯವೇ ಇಲ್ಲದ ಪ್ರದೇಶದಿಂದ ಬಂದವರು ಅರಣ್ಯ ಸಚಿವರಾಗಿದ್ದಾರೆ. ಇದು ಕರ್ನಾಟಕದ ದುರಂತ. ಪಶ್ಚಿಮ ಘಟ್ಟದವರ ಸಮಸ್ಯೆ ಬಗ್ಗೆ ಸಚಿವರಿಗೆ ಅರಿವಿಲ್ಲ. ಉತ್ತರ ಕರ್ನಾಟಕ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ. ಖಂಡ್ರೆ ಅವರ ತಲೆ ಕೂದಲಿನಿಂದ ಮುಚ್ಚಿಕೊಂಡಿದ್ದರಿಂದ ಉಳಿದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್