ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಯನ್ನ ಹೆದರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ, ನರೇಂದ್ರ ಮೋದಿ
Image Credit source: google
Edited By:

Updated on: Mar 08, 2026 | 8:57 PM

ಕಲಬುರಗಿ, ಮಾರ್ಚ್​​ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge)
ವಾಗ್ದಾಳಿ ಮಾಡಿದ್ದಾರೆ.

ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಟ್ರಂಪ್ ನನ್ನ ಸ್ನೇಹಿತ ಅಂತಾ ಪ್ರಧಾನಿ ಮೋದಿ ಹೇಳುತ್ತಾರೆ. ಟ್ರಂಪ್ ಅತಿ ಹೆಚ್ಚು ಟ್ಯಾಕ್ಸ್ ನಮ್ಮ ಮೇಲೆ ಹಾಕುತ್ತಿದ್ದಾರೆ. ಖಮೇನಿ ಹತ್ಯೆ ಮಾಡಿದರೆ ವಿಶ್ವ ಹೇಗೆ ಸುರಕ್ಷಿತ ಆಗುತ್ತೆ? ನೀವು ಎಲ್ಲರನ್ನೂ ಕೊಲ್ಲುತ್ತಾ ಹೋದರೆ ಎಲ್ಲಿ ಶಾಂತಿ ಬರುತ್ತೆ. ಅಮೆರಿಕ ಜೊತೆಗೂಡಿ ನಮ್ಮ ದೇಶವನ್ನು ಹಾಳು ಮಾಡುತ್ತಿದ್ದೀರಿ. ನೀವು ಸ್ವಾಭಿಮಾನ ಬೆಳೆಸಿಕೊಳ್ಳಿ. ಬ್ರಿಟಿಷರನ್ನ ಒದ್ದು ಓಡಿಸಿದ್ದೆವು. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ ಎಂದು ಕಿಡಿಕಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಟ್ವೀಟ್​

ಜವಾಹರ್ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್​ಗೆ ಹೋಗಿ ಬಂದ‌ ನಂತರ ಅದು ಇರಾನ್ ಮೇಲೆ‌ ಬಾಂಬ್ ಹಾಕಿತು. ಇರಾನ್ ದೇಶದ ಮಖ್ಯಸ್ಥ ಖಮೇನಿಯವರನ್ನು ಅಮೆರಿಕದವರು ಹತ್ಯೆ ಮಾಡಿದರು.‌ ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಭಾರತ ದೇಶದ 65% ರೈತರು ಕೃಷಿ ಅವಲಂಬಿತರಾಗಿದ್ದರೆ ಅಮೆರಿಕಾದಲ್ಲಿ 3% ಅವಲಂವಿತರಾಗಿದ್ದಾರೆ. ನಮ್ಮ ದೇಶದ ಉತ್ಪನ್ನಗಳಿಗೆ ಅಮೆರಿಕಾದಲ್ಲಿ ಮನಬಂದಂತೆ ತೆರಿಗೆ ಹಾಕಲಾಗುತ್ತಿದೆ. ಆದರೆ, ಅಮೆರಿಕಾದ ಉತ್ಪನ್ನಗಳ ಮೇಲೆ ಯಾವುದೇ ತೆರಿಗೆಯನ್ನು ಭಾರತ ಹೇರುತ್ತಿಲ್ಲ. ಟ್ರಂಪ್ ಜೊತೆ ದಿನಾಲೂ ಮಾತನಾಡುತ್ತಿರುವುದಾಗಿ ಮೋದಿ ಹೇಳುತ್ತಾರೆ. ತೆರಿಗೆ ಹಾಕುವ ಬಗ್ಗೆನೆ ಮಾತನಾಡುತ್ತಾರಾ? ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಗೆ ಹೆದರಿಸುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Sun, 8 March 26

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us