ಬರದಿಂದ ತತ್ತರಿಸಿದ ಕರ್ನಾಟಕ: ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾದ ಗ್ರಾಮೀಣಾಭಿವೃದ್ಧಿ ಇಲಾಖೆ

ಕರ್ನಾಟಕದ ಬಹುಪಾಲು ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು ಬರ ಸ್ಥಿತಿಯನ್ನು ಎದುರಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜು ಪರಿಸ್ಥಿತಿಯ ಮೇಲೆ ತೀವ್ರವಾಗಿ ನಿಗಾ ಇರಿಸಲು ಮುಂದಾಗಿದ್ದಾರೆ. ತೊಂದರೆಗೀಡಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಬರದಿಂದ ತತ್ತರಿಸಿದ ಕರ್ನಾಟಕ: ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾದ ಗ್ರಾಮೀಣಾಭಿವೃದ್ಧಿ ಇಲಾಖೆ
ಸಚಿವ ಪ್ರಿಯಾಂಕ್ ಖರ್ಗೆ
Edited By: Rakesh Nayak Manchi

Updated on: Oct 16, 2023 | 7:28 PM

ಕಲಬುರಗಿ, ಅ.16: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬರ ದೊಡ್ಡ ತಲೆನೋವು ಹೆಚ್ಚಿಸಿದೆ. ರಾಜ್ಯದ ಬಹುಪಾಲು ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು ಬರ (Drought) ಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜು ಪರಿಸ್ಥಿತಿಯ ಮೇಲೆ ತೀವ್ರವಾಗಿ ನಿಗಾ ಇರಿಸಲು ಮುಂದಾಗಿದ್ದಾರೆ. ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ನೀರು ಸರಬರಾಜು ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

152 ಗ್ರಾಮಗಳಲ್ಲಿ ತೀರ್ವ ಕುಡಿಯುವ ನೀರಿನ ಕೊರತೆ

ರಾಜ್ಯದ 36 ತಾಲ್ಲೂಕುಗಳ 100 ಗ್ರಾಮ ಪಂಚಾಯತಿಗಳಲ್ಲಿನ 152 ಗ್ರಾಮಗಳು ಕುಡಿಯುವ ನೀರಿನ ತೀವ್ರ ಅಭಾವವನ್ನು ಎದುರಿಸುತ್ತಿದ್ದು, ತೊಂದರೆಗೀಡಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಪೈಕಿ 22 ಗ್ರಾಮಗಳಿಗೆ ಇಲಾಖೆಯ ಟ್ಯಾಂಕರ್ ಹಾಗೂ 16 ಗ್ರಾಮಗಳಿಗೆ ಬಾಡಿಗೆ ಆಧಾರದ ಮೇಲೆ ಪಡೆಯಲಾಗಿರುವ ಟ್ಯಾಂಕರ್ ಬಳಸಲಾಗುತ್ತಿದ್ದು, ಪ್ರತಿ ಟ್ಯಾಂಕರ್ ಸರಾಸರಿ ಪ್ರತಿ ನಿತ್ಯ 17 ಟ್ರಿಪ್ ಮೂಲಕ ನೀರು ಸರಬರಾಜು ಮಾಡುತ್ತಿವೆ. 142 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಈ ಮೂಲಕ 130 ಗ್ರಾಮಗಳಿಗೆ ನೀರು ಸರಬರಾಜಾಗುತ್ತಿದೆ.

ಇದನ್ನೂ ಓದಿ: ಭೀಕರ ಬರಗಾಲದಿಂದ ರಾಜ್ಯದ ರೈತರಿಗೆ 30 ಸಾವಿರ ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ

ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯ ಮೇಲೆ ನಿಗಾ ಇರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇತ್ತೀಚಿಗೆ ನಡೆದ ಸಭೆಯಲ್ಲಿ ಸಚಿವರು ಸೂಚಿಸಿದ್ದಾರೆ. ಪ್ರತಿ ವಾರಾಂತ್ಯದಲ್ಲಿ ಜಿಲ್ಲೆಯ ಅಧಿಕಾರಿಗಳು ಕಳುಹಿಸುವ ಮಾಹಿತಿಯನ್ನು ಆಧರಿಸಿ ವಿಮರ್ಶೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮೀಣ ನೀರು ಸರಬರಾಜು ಮಾಡುವಲ್ಲಿ ತೊಂದರೆಯುಂಟಾದಲ್ಲಿ ತಕ್ಷಣವೇ ತಮ್ಮ ಗಮನಕ್ಕೆ ತರಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us