ಕಲಬುರಗಿಯಲ್ಲಿ ಭಾರೀ ಮಳೆ: ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆ ಗ್ರಾಮದ ಕರ್ನಾಟಕ ಪಬ್ಲಿಕ್ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ. ವಿದ್ಯಾರ್ಥಿನಿಯರು ಪಾಠ ಕೇಳುವಾಗಲೇ ಮೇಲ್ಚಾವಣಿ ಕುಸಿದಿದೆ.
ಕಲಬುರಗಿ: ರಾಜ್ಯದಲ್ಲಿ ಮಳೆಯು ಬಿಟ್ಟು ಬಿಡದೆ ಸುರಿಯುತ್ತಿದೆ(Karnataka Rains). ಇದರಿಂದ ಭಾರೀ ಅನಾಹುತಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ನಿರಂತರ ಮಳೆಯಿಂದ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ. ಕೊಠಡಿಯಲ್ಲಿದ್ದ ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ.
ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆ ಗ್ರಾಮದ ಕರ್ನಾಟಕ ಪಬ್ಲಿಕ್ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ. ವಿದ್ಯಾರ್ಥಿನಿಯರು ಪಾಠ ಕೇಳುವಾಗಲೇ ಮೇಲ್ಚಾವಣಿ ಕುಸಿದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಿಖಿತಾ ತಲೆಗೆ ಗಂಭೀರ ಗಾಯಗಳಾಗಿದ್ದು ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಲಬುರಗಿಯಲ್ಲಿ ಹೆಚ್ಚಾದ ಮಳೆಯ ಅಬ್ಬರ
ಕಲಬುರಗಿ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ. ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನ ಪರದಾಡಿದ್ದಾರೆ. ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ವಾಣಿಜ್ಯ ಮಳಿಗೆಗಳಿಗೆ ಮಳೆ ನೀರು ಮತ್ತು ಚರಂಡಿ ನೀರು ನುಗ್ಗಿದ್ದರಿಂದ ಜನ, ವ್ಯಾಪರಸ್ಥರು ಪರದಾಡುವಂತಾಗಿದೆ. ಇನ್ನು ಜಿಲ್ಲೆಯಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ. ಆಳಂದ- ಮುನ್ನಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಗೆ ಸಂಪರ್ಕ ಸೇತುವೆ ಜಲಾವೃತಗೊಂಡಿದ್ದು ಆಳಂದ- ಮುನ್ನಳ್ಳಿ ರಸ್ತೆಯಲ್ಲಿ ಹಳ್ಳದ ನೀರು ರಭಸವಾಗಿ ಹರಿಯುತ್ತಿದೆ.
ಜಲಾವೃತ ಸೇತುವೆ ಮೇಲೆ ಸಾಗಿದ ಶಾಲಾ ವಾಹನ
ಸ್ಕೂಲ್ ಬಸ್ ಡ್ರೈವರ್ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಉಕ್ಕಿ ಹರಿಯುತ್ತಿರೋ ಸೇತುವೆ ಮೇಲೆಯೇ ಶಾಲಾ ಬಸ್ ಓಡಿಸಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿತ್ತಾಪುರದಲ್ಲಿ ಈ ದುಸ್ಸಾಹಸ ಪ್ರದರ್ಶನವಾಗಿದೆ. ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿರೊ ಬೆಂಡೋಣಿ ಹಳ್ಳದ ಸೇತುವೆ ಮೇಲೆ ಶಾಲಾ ಬಸ್ ಚಲಾಯಿಸಲಾಗಿದೆ. ಬಸ್‌ನಲ್ಲಿ ಸುಮಾರು 30 ಮಕ್ಕಳು ಇದ್ದರೆಂದು ತಿಳಿದುಬಂದಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.