ಆಗಸ್ಟ್ 15 ರಿಂದ ಕಂದಾಯ ಇಲಾಖೆಯಲ್ಲಿ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಕಡ್ಡಾಯ: ಸಚಿವ ಕೃಷ್ಣ ಬೈರೇಗೌಡ

Kalaburagi News: ರಾಜ್ಯ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳಿಂದ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಆಗಸ್ಟ್ 15 ರಿಂದ ಕಂದಾಯ ಇಲಾಖೆಯಲ್ಲಿ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಕಡ್ಡಾಯ: ಸಚಿವ ಕೃಷ್ಣ ಬೈರೇಗೌಡ
ಅಧಿಕಾರಿಗಳೊಂದಿಗೆ ಸಚಿವ ಕೃಷ್ಣ ಬೈರೇಗೌಡ ಸಭೆ
Edited By:

Updated on: Jul 31, 2023 | 8:46 PM

ಕಲಬುರಗಿ, ಜುಲೈ 31: ನಾವು ತಾಂತ್ರಿಕವಾಗಿ ಸಾಕಷ್ಟು ಮುಂದುವರೆದಿದ್ದೇವೆ. ತಂತ್ರಜ್ಞಾನ ಹೆಚ್ಚಾದರು ಕೂಡಾ ಇನ್ನು ಅನೇಕ ಸರ್ಕಾರಿ ಕಚೇರಿಯಲ್ಲಿ ಪತ್ರ ವ್ಯವಹಾರ ನಿಂತಿರಲಿಲ್ಲಾ. ಆದರೆ ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಬೇಕು. ಇನ್ನು ಮುಂದೆ ರಾಜ್ಯ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು.

ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ‘ವಿಪಕ್ಷ ನಾಯಕ ಯಾರು ಅಂತಾ ಕರ್ನಾಟಕದ ಜನತೆ ಕೇಳ್ತಾ ಇದಾರೆ’

ಒಂದು ಪ್ರಕರಣ ಉಲ್ಲೇಖಿಸಿದ‌ ಸಚಿವ ಕೃಷ್ಣ ಬೈರೇಗೌಡ, ಗ್ರಾಮ ಪಂಚಾಯತಿಯ ಸ್ವಚ್ಛತಾ ಸಂಕೀರ್ಣಕ್ಕೆ ಜಮೀನು ನೀಡಲು ಎರಡು ವರ್ಷ ಬೇಕೆ? ಮೊನ್ನೆ ಈ ಕಡತ ಇ-ಆಫೀಸ್​ನಲ್ಲಿ ನನ್ನ ಲಾಗಿನ್​ಗೆ ಬಂದಾಗ 2 ದಿನದಲ್ಲಿ ವಿಲೇವಾರಿ ಮಾಡಿದ್ದೇನೆ ಎಂದರು.

ಇ-ಆಫೀಸ್ ಸಹಜವಾಗಿ ಕಾರ್ಯ ದಕ್ಷತೆ ಹೆಚ್ಚಿಸಲಿದೆ. ಯಾವುದೇ ಸ್ಥಳದಲ್ಲಿಂದಲೂ ನೀವು ಕಡತ ವಿಲೇವಾರಿ ಮಾಡಬಹುದಾಗಿದೆ. ಸ್ವತ ನಾನು ಇ-ಆಫೀಸ್ ಮೂಲಕ ಕಡತ ವಿಲೇವಾರಿ ಮಾಡುತ್ತಿದ್ದೇನೆ. ಶಾಲೆ, ಗ್ರಾಮ ಪಂಚಾಯತಿಗೆ ಜಮೀನು ನೀಡಲು ಇಷ್ಟೊಂದು‌ ವಿಳಂಬವೇಕೆ, ಇದರಲ್ಲಿ ಕಾಯುವಂತದೇನಿದೆ ಎಂದು ಡಿ.ಸಿ. ಅವರನ್ನು ಪ್ರಶ್ನಿಸಿದರು.

ಇದನ್ನೂ ಓದಿ: ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ನೀಡುತ್ತೇನೆ ಎಂದಿದ್ದು ನಿಜ: ಸತ್ಯ ಒಪ್ಪಿಕೊಂಡ ಕಾಂಗ್ರೆಸ್ ಶಾಸಕ

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ ಮಾತನಾಡಿ, ಇ-ಕಚೇರಿ ಅನುಷ್ಟಾನಕ್ಕೆ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳು, ಕೆಸ್ವಾನ್ ಸಂಪರ್ಕ ಪಡೆದುಕೊಳ್ಳಬೇಕು ಮತ್ತು ತಹಶೀಲ್ದಾರ ಕಚೇರಿ ಹಂತದಲ್ಲಿಯೂ ಇದನ್ನು ಅನುಷ್ಟಾನಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಡಿ.ಸಿ. ಗಳಿಗೆ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us