AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi Earthquake: ಲಘು ಭೂಕಂಪನ; ಬೆಳಿಗ್ಗೆ 11.40ರ ಸುಮಾರಿಗೆ ಭೂಮಿಯಿಂದ ಭಾರೀ ಸದ್ದು

ಬೆಳಿಗ್ಗೆ 11.40ರ ಸುಮಾರಿಗೆ ಭೂಮಿಯಿಂದ ಭಾರೀ ಸದ್ದು ಕೇಳಿ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಗ್ರಾಮದಲ್ಲಿ ಹಲವು ಬಾರಿ ಭೂಕಂಪನ ಉಂಟಾಗಿದೆ.

Kalaburagi Earthquake: ಲಘು ಭೂಕಂಪನ; ಬೆಳಿಗ್ಗೆ 11.40ರ ಸುಮಾರಿಗೆ ಭೂಮಿಯಿಂದ ಭಾರೀ ಸದ್ದು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 16, 2021 | 12:39 PM

Share

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನ ಸಂಭವಿಸಿದೆ. ಬೆಳಿಗ್ಗೆ 11.40ರ ಸುಮಾರಿಗೆ ಭೂಮಿಯಿಂದ ಭಾರೀ ಸದ್ದು ಕೇಳಿ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಗ್ರಾಮದಲ್ಲಿ ಹಲವು ಬಾರಿ ಭೂಕಂಪನ ಉಂಟಾಗಿದೆ. ಇದರಿಂದ ಈಗಾಗಲೇ ಗ್ರಾಮದ ಕೆಲ ಜನರು ತಮ್ಮ ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಆದರೆ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಿದ ಅನೇಕರಿಗೆ ಯಾವ ಸಮಯದಲ್ಲಿ ಏನು ಸಂಭವಿಸಬಹುದು ಎಂಬ ಆತಂಕ ಕಾಡುತ್ತಿದೆ.

ಕೆಲ ದಿನಗಳಿಂದ ಭೂಕಂಪನದ ಆತಂಕ ಒಂದಲ್ಲಾ, ಎರಡಲ್ಲಾ, ಕಳೆದ ಒಂದು ವಾರದಿಂದ ಕಲಬುರಗಿ ಜಿಲ್ಲೆಯ ಜನರು ಭಯದಲ್ಲಿಯೇ ಬದಕುತ್ತಿದ್ದಾರೆ. ಯಾವಾಗ ಏನಾಗುತ್ತೋ ಎನ್ನುವ ಆತಂಕ ಈ ಗ್ರಾಮಗಳ ಜನರನ್ನು ಕಾಡುತ್ತಿದೆ. ಕೆಲವರು ಮನೆಯೊಳಗೆ ಇರಲು ಭಯ ಪಡುತ್ತಿದ್ದರೆ, ಇನ್ನು ಕೆಲವರು ಗ್ರಾಮಗಳನ್ನು ಬಿಟ್ಟು ಸಂಬಂಧಿಕರ ಮನೆಗಳಿಗೆ ಹೋಗುತ್ತಿದ್ದಾರೆ. ಇದಕ್ಕೆ ಕಾರಣ ಮೇಲಿಂದ ಮೇಲೆ ಸಂಭವಿಸುತ್ತಿರುವ ಲಘು ಭೂಕಂಪನ ಮತ್ತು ಭೂಮಿಯಿಂದ ಬರುತ್ತಿರುವ ಭಾರಿ ಸದ್ದು.

ಹೌದು ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಇನ್ನು ಕಳೆದ ರಾತ್ರಿ ಜಿಲ್ಲೆಯ ಕಾಳಗಿ, ಚಿಂಚೋಳಿ, ಸೇಡಂ, ಶಹಬಾದ್ ತಾಲೂಕಿನಲ್ಲಿ ನೂರಕ್ಕೂ ಹೆಚ್ಚು ಹಳ್ಳಿಯಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಗಡಿಕೇಶ್ವರ ಬಳಿ 4.1 ತೀರ್ವತೆಯ ಭೂಕಂಪನವಾಗಿರೋದು ದಾಖಲಾಗಿದೆ.

ಅಕ್ಟೋಬರ್ 12 ರಂದು ಬೆಳಿಗ್ಗೆ ಕೂಡಾ ಹೊಡೆಬೀರನಳ್ಳಿ, ಕೆರೂರು, ಹಲಚೇರಾ, ಗಡಿಕೇಶ್ವರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಮತ್ತೆ ಎರಡು ಭಾರಿ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ರಷ್ಟು ತೀವೃತೆಯ ಭೂಕಂಪನ ಆಗಿದೆ. ಇನ್ನು ಕಳೆದ ಭಾನುವಾರ ಇಪ್ಪತ್ನಾಲ್ಕು ಗಂಟೆಯಲ್ಲಿ ಹದಿನಾರಕ್ಕು ಹೆಚ್ಚು ಬಾರಿ ಲಘು ಭೂಕಂಪನ ಮತ್ತು ಭೂಮಿಯಿಂದ ಸದ್ದು ಬಂದಿದೆ. ಕಳೆದ ಶುಕ್ರವಾರ, ಶನಿವಾರ ಕೂಡಾ ಲಘು ಭೂಕಂಪನಗಳು ಕಾಳಗಿ, ಚಿಂಚೋಳಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಉಂಟಾಗಿವೆ.

ಗ್ರಾಮಗಳನ್ನು ತೊರೆಯುತ್ತಿರುವ ಜನರು ನಿರಂತರವಾಗಿ ಲಘು ಭೂಕಂಪನ ಮತ್ತು ಭೂಮಿಯಿಂದ ಬರುತ್ತಿರುವ ಸದ್ದಿನಿಂದ ಗ್ರಾಮಗಳ ಜನರು ಕಂಗಾಲಾಗಿದ್ದಾರೆ. ಅನೇಕರು ಮನೆಯ ಹೊರಗಡೆ ಮಲಗುತ್ತಿದ್ದರೆ, ಇನ್ನು ಕೆಲವರು ಗ್ರಾಮವನ್ನೇ ಬಿಟ್ಟು ಸಂಬಂಧಿಕರ ಮನೆಗಳಿಗೆ ಹೋಗುತ್ತಿದ್ದಾರೆ. ಇಂದು ಹೊಸಳ್ಳಿ ಎಚ್ ಗ್ರಾಮದಲ್ಲಿ ಅನೇಕರು ಮನೆಗಳನ್ನು ಬಿಟ್ಟು ಸಂಬಂಧಿಕರ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಬಾಣಂತಿಯರಿದ್ದಾರೆ. ವೃದ್ದರು ಇದ್ದಾರೆ. ಅವರಿಗೆ ಹೆಚ್ಚಿನ ಆರೈಕೆ ಬೇಕಾಗುತ್ತದೆ. ಆದರೆ ಮನೆಯಲ್ಲಿ ಇರಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೆಲ ದಿನಗಳ ಕಾಲ ತಮ್ಮೂರು ಬಿಟ್ಟು ಸಂಬಂಧಿಕರ ಮನೆಗೆ ಹೋಗುತ್ತಿದ್ದೇವೆ ಎಂದು ಹೊಸಳ್ಳಿ ಗ್ರಾಮದ ಜನರು ಹೇಳಿದ್ದಾರೆ.

ಬಿರಕು ಬಿಟ್ಟಿರುವ ಮನೆಗಳು, ನೆಲಕ್ಕುರುಳಿದ ಗೋಡೆಗಳು ಗಡಿಕೇಶ್ವರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಲಘು ಭೂಕಂಪನದಿಂದ ಅನೇಕ ಮನೆಗಳು ಬಿರಕು ಬಿಟ್ಟಿದ್ದರೆ, ಇನ್ನು ಅನೇಕರ ಮನೆಗಳ ಗೋಡೆಗಳು ನೆಲಕ್ಕುರುಳಿವೆ. ಗಡಿಕೇಶ್ವರ ಗ್ರಾಮದಲ್ಲಿಯೇ ಹತ್ತಕ್ಕೂ ಹೆಚ್ಚು ಜನರ ಮನೆಗಳು ಗೋಡೆಗಳು ಬಿದ್ದಿವೆ. ನೂರಾರು ಜನರ ಮನೆಗಳು ಬಿರಕು ಬಿಡುತ್ತಿವೆ. ಇನ್ನು ಗಡಿಕೇಶ್ವರ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರು ತಮ್ಮ ಮನೆಗಳ ಮೇಲ್ಛಾವಣಿಗೆ ಕಲ್ಲಿನ ಹೊದಿಕೆ ಹಾಕಿದ್ದಾರೆ. ಅನೇಕರು ಮನೆಗಳು ತುಂಬಾ ಹಳೆಯ ಮನೆಗಳಾಗಿವೆ. ಹೀಗಾಗಿ ಮನೆಯೊಳಗೆ ಮಲಗಿದ್ದಾಗ, ಭೂಕಂಪನವಾದರೆ ನಮ್ಮ ಗತಿಯೇನು ಎನ್ನುವ ಚಿಂತೆಯಲ್ಲಿ ಗ್ರಾಮಗಳ ಜನರು ಇದ್ದಾರೆ.

ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಗಡಿಕೇಶ್ವರ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಭೂಮಿಯಿಂದ ಬಾರಿ ಸದ್ದು ಬರುತ್ತಿದೆ. ಇದೀಗ ವಾರದಿಂದ ಮೇಲಿಂದ ಮೇಲೆ ಹತ್ತಕ್ಕೂ ಹೆಚ್ಚು ಹಳ್ಳಿಯಲ್ಲಿ ಲಘು ಭೂಕಂಪನವಾಗುತ್ತಿವೆ. ಇಷ್ಟಾದರು ಕೂಡಾ ಕಲಬುರಗಿ ಜಿಲ್ಲಾಡಳಿತ ಮಾತ್ರ ನಿದ್ದೆಯಲ್ಲಿರುವುದು ಜನರ ಆಕ್ರೋಶವನ್ನು ಹೆಚ್ಚಿಸಿದೆ. ಹೀಗಾಗಿ ನಿನ್ನೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜನರು, ಚಿಂಚೋಳಿ ತಾಲೂಕಿನ ಹೊಡೆಬೀರನಹಳ್ಳಿ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಭೂಕಂಪ ಪೀಡಿತ ಹಳ್ಳಿಗಳಿಗೆ ಜಿಲ್ಲಾಧಿಕಾರಿ, ಸಚಿವರು, ಸಂಸದರು, ಶಾಸಕರು ಭೇಟಿ ನೀಡಿ ಜನರ ಗೋಳು ಕೇಳುವ ಕೆಲಸ ಮಾಡುತ್ತಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kalaburagi Earthquake: ಕಲಬುರಗಿ ಜಿಲ್ಲೆಯ ಹಲವೆಡೆ ಭೂಕಂಪನ; ಭಯದಲ್ಲಿ ಗ್ರಾಮಗಳನ್ನೇ ತೊರೆಯುತ್ತಿರುವ ಜನರು

Kalaburagi Earthquake: ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗಲೇ ಭೂಮಿಯಿಂದ ಕೇಳಿ ಬಂದ ಭಾರಿ ಸದ್ದು

Published On - 12:37 pm, Sat, 16 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?