AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

ನಿನ್ನೇ ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 09, 2021 | 7:32 AM

Share

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಇಂದು (ಅಕ್ಟೋಬರ್ 9) ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.

ನಿನ್ನೇ ಕೂಡಾ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಕಳೆದ ಕೆಲ ವರ್ಷಗಳಿಂದ ಭೂಮಿಯಿಂದ ಭಾರೀ ಸದ್ದು ಕೇಳಿ ಬರುತ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನದ ಅನುಭವವಾಗುತ್ತಿದೆ.

ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಗಳ ಜನರು ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವಡೆ ಲಘು ಭೂಕಂಪನವಾದ ಹಿನ್ನೆಲೆ, ಮನೆಯಿಂದ ಹೊರ ಬಂದಿದ್ದ ಜನರು, ಮಳೆಯಲ್ಲೇ ನಿಲ್ಲಬೇಕಾಯಿತು. ಕಳೆದ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಗಡಿಕೇಶ್ವರ, ಹಲಚೇರಾ ಗ್ರಾಮದ ಜನರು ಮಳೆಯಲ್ಲೇ ನೆನೆಯುವಂತಾಯಿತು.

ನಿನ್ನೆ ಜಿಲ್ಲೆಯಲ್ಲಿ 2.6 ತೀವ್ರತೆ ಕಂಪನ ಆಗಿತ್ತು. ಕಾಳಗಿ‌ ತಾಲೂಕಿನ ಹಲಚೇರಾ ಗ್ರಾಮದ ಕೇಂದ್ರ ಬಿಂದುವಿನಲ್ಲಿ ಭೂಕಂಪನ ನಡೆದಿತ್ತು. ಇಂದು ಕೂಡಾ ಲಘು ಭೂ ಕಂಪನವಾಗಿದೆ. ಕೆಲವೇ ಹೊತ್ತಲ್ಲಿ ಭೂಕಂಪನದ ತೀವ್ರತೆ ಬಗ್ಗೆ ಮಾಹಿತಿ ಸಿಗಲಿದೆ. ದೇಶದ ಅನೇಕ ಕಡೆ ಲಘು ಭೂಕಂಪನಗಳು ಆಗುತ್ತಿವೆ. ಅದೇ ರೀತಿ ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಲಘು ಭೂಕಂಪನ ಸಂಭವಿಸುತ್ತಿವೆ. ಕಾಳಗಿ ತಾಲೂಕಿನ ಹ‌ಲಚೇರಾ, ತೇಗಲತಿಪ್ಪಿ, ಹೊಸಳ್ಳಿ ಗ್ರಾಮದಲ್ಲಿ ಕೂಡಾ ಲಘು ಭೂಕಂಪನ ಅನುಭವವಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಜಯಪುರದ ತಿಕೋಟಾ ತಾಲೂಕಿನಲ್ಲಿ ಭೂಕಂಪನ; ರಿಕ್ಟರ್ ಮಾಪಕದಲ್ಲಿ 2.5 ರಷ್ಟು ತೀವ್ರತೆ ದಾಖಲು

ಕಲಬುರಗಿ: ರಾತ್ರಿ ಒಂದು ಗಂಟೆಗೆ ಲಘು ಭೂಕಂಪದ ಅನುಭವ; ಆತಂಕದಲ್ಲಿ ಮನೆಯಿಂದ ಹೊರಬಂದ ಜನರು

Published On - 7:25 am, Sat, 9 October 21

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್