ಗ್ರಾ.ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ಸಿನಿಮೀಯ ರೀತಿಯಲ್ಲಿ ಹೋಟೆಲ್ಗೆ ನುಗ್ಗಿ ಸದಸ್ಯರನ್ನು ಕಿಡ್ನ್ಯಾಪ್ ಮಾಡಿದ ಆರೋಪ
ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾ.ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಬಿಜೆಪಿ ಬೆಂಬಲಿತ ನಾಲ್ವರು ಗ್ರಾ.ಪಂಚಾಯತಿ ಸದಸ್ಯರನ್ನು ಕಾಂಗ್ರೆಸ್ ಕಾರ್ಯಕರ್ತರು ಕಿಡ್ನ್ಯಾಪ್ ಮಾಡಿದ ಆರೋಪ ಕೇಳಿಬಂದಿದೆ.
ಕಲಬುರಗಿ, ಆ.5: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾ.ಪಂಚಾಯತಿ(Grama Panchayt) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಬಿಜೆಪಿ ಬೆಂಬಲಿತ ನಾಲ್ವರು ಗ್ರಾ.ಪಂಚಾಯತಿ ಸದಸ್ಯರನ್ನು ಕಾಂಗ್ರೆಸ್ ಕಾರ್ಯಕರ್ತರು ಕಿಡ್ನ್ಯಾಪ್ ಮಾಡಿದ ಆರೋಪ ಕೇಳಿಬಂದಿದೆ. ಜುಲೈ 13ರಂದು ಒಟ್ಟು 11 ಗ್ರಾ.ಪಂಚಾಯತಿ ಸದಸ್ಯರು ಮಹಾರಾಷ್ಟ್ರದ ಪುಣೆಗೆ ಪ್ರವಾಸಕ್ಕೆ ತೆರಳಿದ್ದರು. ಬಳಿಕ ಅಲ್ಲಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯವಿದ್ದರು. ಈ ವೇಳೆ ನಾಲ್ವರು ಸದಸ್ಯರನ್ನು ಅಪಹರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಅಪಹರಣ ಆರೋಪದ ಮೇಲೆ ಪುಣೆಯ ಚಿಕ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 ಸದಸ್ಯರನ್ನು ಸದಸ್ಯರನ್ನು ಒಳಗೊಂಡ ಐನೊಳ್ಳಿ ಗ್ರಾ.ಪಂಚಾಯತಿ
ಇನ್ನು ಐನೊಳ್ಳಿ ಗ್ರಾ.ಪಂಚಾಯತಿ 18 ಸದಸ್ಯರನ್ನು ಸದಸ್ಯರನ್ನು ಒಳಗೊಂಡಿದೆ. ಆ.7ರಂದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಪರಿಶಿಷ್ಟ ಜಾತಿಯ ಮಹಿಳೆಯರ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಅದರಂತೆ ಅಧ್ಯಕ್ಷರಾಗಲು 10 ಸದಸ್ಯರ ಬೆಂಬಲ ಬೇಕಾಗಿದೆ. ಆದರೆ, ಈಗಾಗಲೇ ಬಿಜೆಪಿ ಬೆಂಬಲಿತ ಒಟ್ಟು 11 ಸದಸ್ಯರಿರುವ ಹಿನ್ನಲೆ ಪ್ರವಾಸಕ್ಕೆ ಹೋಗಿದ್ದ 11ಬಿಜೆಪಿ ಬೆಂಬಲಿತ ಸದಸ್ಯರಲ್ಲಿ ನಾಲ್ವರನ್ನು ಕಾಂಗ್ರೆಸ್ನವರು ಅಪಹರಿಸಿದ್ದಾರೆಮದು ಬಿಜೆಪಿಯವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಸದಸ್ಯೆ ಅಪಹರಣ ಆರೋಪ
ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸದಸ್ಯರ ಅಪಹರಣ ಆರೋಪ
ಇನ್ನು ಇಂತಹುದೇ ಘಟನೆ ಆಗಸ್ಟ್ 04ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದಿತ್ತು. ಹೌದು, ಜೆಡಿಎಸ್ ಬೆಂಬಲಿತ ಸದಸ್ಯರುಗಳಿಂದ ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯೆ ರೇಷ್ಮಾ ಆರೋಪಿಸಿದ್ದರು. ಬಳಿಕ ಅಪಹರಣಕ್ಕೊಳಗಾದ ಸದಸ್ಯೆಯ ಗಂಡ ಪಯಾಜ್ ಪಾಷರಿಂದ ಚಿಂತಾಮಣಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಘಟನೆ ಕುರಿತು ಜೆಡಿಎಸ್ ಬೆಂಬಲಿತ ಸದಸ್ಯರಾದ ದೊಡ್ಡಬೊಮ್ಮನಹಳ್ಳಿಯ ವೆಂಕಟರೆಡ್ಡಿ, ಕೋಡಿಹಳ್ಳಿ ಶಿವಾರೆಡ್ಡಿ ವಿರುದ್ಧ ದೂರು ದಾಖಲಾಗಿತ್ತು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ