ಪ್ರಾದೇಶಿಕ ಅಸಮತೋಲನ ಖಂಡಿಸಿ ಕಾಂಗ್ರೆಸ್‌ನಿಂದ ಕಲ್ಯಾಣ ಕರ್ನಾಟಕ ಯಾತ್ರೆ: ಈಶ್ವರ ಖಂಡ್ರೆ ಮಾಹಿತಿ
ಬರುವ ಏಪ್ರೀಲ್ನಲ್ಲಿ ಯಾತ್ರೆ ನಡೆಸೋ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ ಎಂದು ಕಲಬುರಗಿ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಲಬುರಗಿ: ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲಾಗುವುದು. ಕಾಂಗ್ರೆಸ್‌ನಿಂದ ಕಲ್ಯಾಣ ಕರ್ನಾಟಕ ಯಾತ್ರೆ ಮಾಡುತ್ತೇವೆ. ಕಲ್ಯಾಣ ಕರ್ನಾಟಕ ಯಾತ್ರೆಗೆ ರೂಪರೇಷೆ ಸಿದ್ಧಗೊಳಿಸುತ್ತಿದ್ದೇವೆ. ಈಗಾಗಲೇ ಈ ಬಗ್ಗೆ 2 ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭಾನುವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿಯವರು ಕೋಮ ಸೌಹರ್ದಾತೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸುತ್ತೇವೆ. ಬರುವ ಏಪ್ರೀಲ್ನಲ್ಲಿ ಯಾತ್ರೆ ನಡೆಸೋ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ ಎಂದು ಕಲಬುರಗಿ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಬಜೆಟ್ ನಲ್ಲಿ ಮೂರು ಸಾವಿರ ಕೋಟಿ ನೀಡಿದ್ದಾರೆ. ಆದ್ರೆ ಈ ಹಿಂದೆ ನೀಡಿದ್ದ ಹಣವನ್ನೇ ಇನ್ನು ಖರ್ಚು ಮಾಡಿಲ್ಲ. ಹಣ ನೀಡಿರೋದು ಟ್ರಜರಿಯಲ್ಲಿಟ್ಟು ಪೂಜೆ ಮಾಡಲಿಕ್ಕಾ? ಬಿಜೆಪಿಯವರು ಕೇವಲ ತುಟಿಗೆ ತುಪ್ಪ ಹಚ್ಚೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಖಂಡ್ರೆ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ಸರ್ಕಾರ ಕೋಟಿ ರೂಪಾಯಿ ನೀಡಿದೆ. ಹೆಚ್.ಡಿ ಕುಮಾರಸ್ವಾಮಿ ಅವರು ಹೊಟ್ಟೆಕಿಚ್ಚಿನಿಂದ ಮಾತಾಡ್ತಿದ್ದಾರೆ ಎಂದು ಪಾದಯಾತ್ರೆ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.
ಪಾದಯಾತ್ರೆ ವೇಳೆ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಳ್ಳಿದ್ದನ್ನು ಖಂಡಿಸುತ್ತೇನೆ
ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ವೇಳೆ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಳ್ಳಿದ್ದನ್ನು ಖಂಡಿಸುತ್ತೇನೆ. ನನ್ನ ಜೀವನದಲ್ಲಿ ಯಾವುದಕ್ಕೂ ನಾನು ಕಾಂಪ್ರಮೈಸ್ ಮಾಡಿಕೊಂಡಿಲ್ಲ. ಆತ್ಮಗೌರವ ಇದ್ದವರು ಆ ಘಟನೆಯನ್ನು ಸಹಿಸೋದಕ್ಕೆ ಆಗುವುದಿಲ್ಲ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ; ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ: ಹೆಚ್ಡಿ ಕುಮಾರಸ್ವಾಮಿ
ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳ ಮೇಕೆದಾಟು ಮಕ್ಮಲ್ ಟೋಪಿ; ಕಾಂಗ್ರೆಸ್, ಬಿಜೆಪಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ
Published On - 1:05 pm, Sun, 6 March 22