PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ಈಗಾಗಲೇ ರಾಜ್ಯದಲ್ಲಿ ಪಿಎಸ್​ಐ ಪರೀಕ್ಷೆ ಹಗರಣ ಬಯಲಿಗೆ ಬಂದಿದೆ. ಇಷ್ಟಾದರೂ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರೀಮೂರ್ತಿ ಎಂಬಾತ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ.

PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ
ಅಭ್ಯರ್ಥಿಯ ಬಂಧನ
Updated By: ಕಿರಣ್ ಹನುಮಂತ್​ ಮಾದಾರ್

Updated on: Oct 28, 2023 | 3:23 PM

ಕಲಬುರಗಿ, ಅ.28: ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿ(Kalaburagi)ಯಲ್ಲಿ ಮತ್ತೊಂದು ಹಗರಣ ಬಯಲಿಗೆ ಬಂದಿದೆ. ಹೌದು, ಕೆಇಎ(KEA) ವತಿಯಿಂದ ಇಂದು ಮತ್ತು ನಾಳೆ ವಿವಿಧ ಇಲಾಖೆಗಳ ಎಸ್​ಡಿಎ(SDA) ಮತ್ತುಎಫ್​ಡಿಎ(FDA) ಪರೀಕ್ಷೆಯನ್ನು ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಗುತ್ತಿದೆ. ಅದರಂತೆ ಇಂದು(ಅ.28) ಆಹಾರ ಮತ್ತು ಕಾರ್ಮಿಕ ಇಲಾಖೆಯ ಎಫ್‌ಡಿಎ ಪರೀಕ್ಷೆ ಇಂದು ನಡೆಯುತ್ತಿವೆ. ಈ ವೇಳೆ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಹಿನ್ನಲೆ ಆತನನ್ನು ಬಂಧಿಸಲಾಗಿದೆ.

ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಅರೆಸ್ಟ್​

ಹೌದು, ಈಗಾಗಲೇ ರಾಜ್ಯ ಬಹುದೊಡ್ಡ ಪರೀಕ್ಷಾ ಹಗರಣ ಬಯಲಿಗೆ ಬಂದಿದೆ. ಇಷ್ಟಾದರೂ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರೀಮೂರ್ತಿ ಎಂಬಾತ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ. ಕೂಡಲೇ ತ್ರಿಮೂರ್ತಿಯನ್ನು ಬಂಧಿಸಿದ ಪೊಲೀಸರು, ಇದೀಗ ವಿಚಾರಣೆ ನಡೆಸುತ್ತಿದ್ದಾರೆ.  ಈ ಘಟನೆ ಅರ್‌ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪೇಪರ್ ಲೀಕ್ ಮಾಡಿದ ತಂದೆ-ಮಗ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣವನ್ನ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರ

ಇನ್ನು ಪಿಎಸ್​ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಹೊರಡಿಸಲಾಗಿ, ಅಕ್ಟೋಬರ್​ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು. ಬಳಿಕ ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವು ದೃಢಪಟ್ಟಿದ್ದ ಹಿನ್ನೆಲೆ 1977ರ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳ ಪ್ರಕಾರ ಪೊಲೀಸ್​ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು. ಈ ಪ್ರಕರಣವನ್ನು ಜುಲೈ 4ರಂದು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇಂತಹ ಮತ್ತೊಂದು ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 28 October 23