Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸಹರನ್‌ಪುರದಲ್ಲಿ ಯುವಕನೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆಂದು ಕಲಬುರಗಿಯ ವಿಡಿಯೋ ವೈರಲ್

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಉತ್ತರಪ್ರದೇಶದ ಸಹರಾನ್‌ಪುರಕ್ಕು ಈ ವಿಡಿಯೋಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕರ್ನಾಟಕದ ಕಲಬುರಗಿಯಲ್ಲಿ ನಡೆದ ಘಟನೆ ಆಗಿದೆ. ಈ ಘಟನೆಯಲ್ಲಿ ನಿಜವಾಗಿ ನಡೆದದ್ದು ಏನು? ಈ ಬಗ್ಗೆ ಸತ್ಯಾಂಶ ಇಲ್ಲಿದೆ ನೋಡಿ

Fact Check: ಸಹರನ್‌ಪುರದಲ್ಲಿ ಯುವಕನೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆಂದು ಕಲಬುರಗಿಯ ವಿಡಿಯೋ ವೈರಲ್
ವೈರಲ್​​ ಪೋಸ್ಟ್​
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 16, 2024 | 3:58 PM

ಜನನಿಬಿಡ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಕಾಲಿಗೆ ಗುಂಡು ಹಾರಿಸಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಘಟನೆಯನ್ನು ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ಲಿಂಕ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ಸಹರಾನ್‌ಪುರದ್ದು ಎಂದು ಹೇಳುವ ಮೂಲಕ ಕೆಲವು ಬಳಕೆದಾರರು ಯುಪಿ ಪೊಲೀಸರನ್ನು ಹೊಗಳುತ್ತಿದ್ದಾರೆ.

ವೈರಲ್ ಆಗುತ್ತಿರುವ ಪೋಸ್ಟ್ ಏನು?:

ಇನ್​ಸ್ಟಾಗ್ರಾಮ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಉತ್ತರ ಪ್ರದೇಶದ ಸಹರಾನ್‌ಪುರದ ಅಜ್ಜ ಅಬ್ದುಲ್ ಗಫಾರ್ ಭಾನುವಾರ ಮಾರುಕಟ್ಟೆಯಲ್ಲಿ ಬೆದರಿಸುತ್ತಿದ್ದರು, ನಂತರ ಯೋಗಿ ಜಿ ಅವರ ಪೊಲೀಸರು ಬಂದರು, ಆ ದೃಶ್ಯವು ನಿಮ್ಮ ಮುಂದೆ ಇದೆ’’ ಎಂದು ಬರೆದುಕೊಂಡಿದ್ದಾರೆ.

https://www.instagram.com/sunilkashyap9081/reel/DDeNw1TNjO5/

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಉತ್ತರಪ್ರದೇಶದ ಸಹರಾನ್‌ಪುರಕ್ಕು ಈ ವಿಡಿಯೋಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕರ್ನಾಟಕದ ಕಲಬುರಗಿಯಲ್ಲಿ ನಡೆದ ಘಟನೆ ಆಗಿದೆ.

ಗೂಗಲ್ ಲೆನ್ಸ್‌ನೊಂದಿಗೆ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಅನ್ನು ಹುಡುಕಿದಾಗ ಈ ಘಟನೆಗೆ ಸಂಬಂಧಿಸಿದ ಅನೇಕ ವರದಿಗಳನ್ನು ನಾವು ಕಂಡುಕೊಂಡಿದ್ದೇವೆ. ವರದಿಗಳ ಪ್ರಕಾರ, ಕರ್ನಾಟಕದ ಕಲಬುರಗಿ ಪೊಲೀಸರು ಮಾರುಕಟ್ಟೆಯಲ್ಲಿ ಮೊಹಮ್ಮದ್ ಫಜಲ್ ಜಾಫರ್ (28) ಎಂಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಈತ ಚಾಕು ಮತ್ತು ಆಯುಧಗಳಿಂದ ಜನರನ್ನು ಬೆದರಿಸುತ್ತಿದ್ದ ಎನ್ನಲಾಗಿದೆ. ನಂತರ ಆತನನ್ನು ಬಂಧಿಸಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫಜಲ್ ಹಣ್ಣು ಮಾರಾಟಗಾರನಾಗಿದ್ದು, ವಿಡಿಯೋದಲ್ಲಿ ಆತ ಚಾಕು ಹಿಡಿದು ತಿರುಗಾಡುತ್ತಿರುವುದು ಕಂಡು ಬಂದಿದೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಲ್ಲದೆ ಸ್ವತಃ ಟಿವಿ9 ಕನ್ನಡ ವೆಬ್​ವೈಟ್ ಈ ಕುರಿತು ಸುದ್ದಿ ಪ್ರಕಟಿಸಿತ್ತು. ‘ಕಲಬುರಗಿ: ಮಾರಕಾಸ್ತ್ರದಿಂದ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ, ಆರೋಪಿ ಮೇಲೆ ಫೈರಿಂಗ್‌’ ಎಂಬ ಹೆಡ್​ಲೈನ್​ನೊಂದಿಗೆ ಫೆಬ್ರವರಿ 5, 2023 ರಂದು ಸುದ್ದಿ ಪಬ್ಲಿಶ್ ಆಗಿದೆ.

ಇದರಲ್ಲಿರುವ ಮಾಹಿತಿಯ ಪ್ರಕಾರ, ಮಾರಕಾಸ್ತ್ರಗಳನ್ನು ಹಿಡಿದ ಜನಬಿಡ ಪ್ರದೇಶಕ್ಕೆ ಬಂದ ವ್ಯಕ್ತಿಯೊಬ್ಬ ಸಾರ್ವಜನಿಕಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ತಿಳಿದ ಚೌಕ್ ಠಾಣೆ ಪೊಲೀಸರು ಸಾರ್ವಜನಿಕರ ರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಗಂಡೇಟು ತಿಂದ ಆರೋಪಿ ಅಬ್ದುಲ್ ಜಾಫರ್ ಪೊಲೀಸರು ಜಿಮ್ಸ್ ಆಸ್ಪತ್ರೆಗೆ ಸೇರಿಸಿದ್ದು, ಚೇತರಿಕೆ ನಂತರ ಜೈಲಿಗಟ್ಟಲಿದ್ದಾರೆ.

ತಮ್ಮ ಮೇಲೆ ದಾಳಿ ಮಾಡುವ ವಾತಾವರಣ ತಿಳಿದ ಪಿಎಸ್​ಐ ತಮ್ಮ ಹಾಗೂ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸುತ್ತಾರೆ. ಇದಕ್ಕೂ ಜಗ್ಗದಿದ್ದಾಗ ಪಿಎಸ್​ಐ ವಹೀದ್ ಕೊತ್ವಾಲ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಸ್ಥಳದಲ್ಲಿ ಕುಸಿದುಬಿದ್ದ ಆರೋಪಿಗೆ ಪೊಲೀಸರು ಹಿಗ್ಗಾಮುಗ್ಗ ಲಾಠಿ ರುಚಿ ತೋರಿಸಿದರು. ಬಳಿಕ ವಶಕ್ಕೆ ಪಡೆದು ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಇದರಲ್ಲಿದೆ.

ಕಲಬುರಗಿ: ಮಾರಕಾಸ್ತ್ರದಿಂದ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ, ಆರೋಪಿ ಮೇಲೆ ಫೈರಿಂಗ್‌

ನಾವು ಕಲಬುರಗಿ ವರದಿಗಾರರನ್ನು ಕೂಡ ಸಂಪರ್ಕಿಸಿದ್ದೆವು. ವೈರಲ್ ಆಗಿರುವ ವಿಡಿಯೋ ಬಗ್ಗೆ ಹೇಳುತ್ತಿರುವ ಆರೋಪಗಳು ಸುಳ್ಳು ಎಂದು ಅವರು ಹೇಳಿದ್ದಾರೆ. ಈ ವಿಡಿಯೋ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಒಂದರಲ್ಲಿ ನಡೆದ ಘಟನೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆತ್ಮರಕ್ಷಣೆಗಾಗಿ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಹೀಗಾಗಿ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಆಯುಧ ತೋರಿಸಿ ಬೆದರಿಸುವ ವಿಡಿಯೋ ಉತ್ತರ ಪ್ರದೇಶದ ಸಹರಾನ್‌ಪುರದ್ದಲ್ಲ. ಇದು ಕಳೆದ ವರ್ಷ ಕರ್ನಾಟಕದ ಕಲಬುರಗಿ ನಗರದ ಸೂಪರ್ ಮಾರ್ಕೆಟ್‌ನಲ್ಲಿ ನಡೆದ ಘಟನೆಯಾಗಿದೆ ಎಂದು ಟಿವಿ9 ಕನ್ನಡ ಖಚಿತ ಪಡಿಸುತ್ತದೆ.

ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Mon, 16 December 24

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು