ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ಓರ್ವ ವ್ಯಕ್ತಿ ಅರೆಸ್ಟ್​

ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಕೆ ಎಕ್ಸ್‌ಪ್ರೆಸ್ ರೈಲಿಗೆ ಮಧ್ಯರಾತ್ರಿ ವ್ಯಕ್ತಿಯೋರ್ವನಿಂದ ಹುಸಿ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಕೂಡಲೇ ವಾಡಿ ಜಂಕ್ಷನ್ ಬಳಿ ರೈಲು ತಪಾಸಣೆ ನಡೆಸಲಾಯಿತು. ಪೊಲೀಸರು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ಓರ್ವ ವ್ಯಕ್ತಿ ಅರೆಸ್ಟ್​
ಪೊಲೀಸರಿಂದ ತೀವ್ರ ತಪಾಸಣೆ
Edited By:

Updated on: May 11, 2025 | 2:01 PM

ಬೆಂಗಳೂರು, ಮೇ 11: ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ (KK Express) ರೈಲಿಗೆ ಓರ್ವ ವ್ಯಕ್ತಿಯಿಂದ ಹುಸಿ ಬಾಂಬ್​ ಬೆದರಿಕೆ ಕರೆ (Fake Bomb Threat) ಮಾಡಲಾಗಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರಿಂದ ತೀವ್ರ ತಪಾಸಣೆ ಮಾಡಲಾಗಿದೆ. ಬಳಿಕ ಹುಸಿಬಾಂಬ್ ಕರೆ ಅನ್ನೋದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಹುಸಿಬಾಂಬ್ ಕರೆ ಮಾಡಿದ ಆರೋಪಿ ದೀಪಕ್​ ಸಿಂಗ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಬಂಧಿತ ವ್ಯಕ್ತಿ ಉತ್ತರ ಪ್ರದೇಶ ಮೂಲದ ದೀಪ್ ಸಿಂಗ್ ರಾಥೋಡ್ (33) ಎಂದು ಗುರುತಿಸಲಾಗಿದೆ. ದೆಹಲಿ-ಬೆಂಗಳೂರು ಮಾರ್ಗವಾಗಿ ಸಂಚರಿಸುವ ಕೆಕೆ ಎಕ್ಸ್​ಪ್ರೆಸ್​ ರೈಲಿನಲ್ಲಿ ಆತನು ಪ್ರಯಾಣಿಸುತ್ತಿದ್ದ. ಈ ವೇಳೆ ಭಾನುವಾರ ಬೆಳಿಗ್ಗೆ ರೈಲ್ವೆ ನಿಯಂತ್ರಣ ಕೊಠಡಿಗೆ ರೈಲಿನಲ್ಲಿ ಬಾಂಬ್​ ಇಡಲಾಗಿದೆ ಎಂದು ಬೆದರಿಕೆ ಕರೆ ಮಾಡುವ ಮೂಲಕ ಭಾರಿ ಭದ್ರತಾ ಭೀತಿಯನ್ನುಂಟುಮಾಡಿದ್ದಾನೆ. ಈ ಹಿನ್ನೆಲೆ ಪೊಲೀಸ್​ ಅಧಿಕಾರಿಗಳು ರೈಲನ್ನು ವಾಡಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿ, ನಾಲ್ಕು ಗಂಟೆಗಳ ಕಾಲ ಸಂಪೂರ್ಣ ಭದ್ರತಾ ತಪಾಸಣೆ ಮಾಡಿದ್ದಾರೆ.

ಇದನ್ನೂ ಓದಿ: Bomb Thteat: ಚಾಮರಾಜನಗರ, ರಾಯಚೂರು ಡಿಸಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಇದನ್ನೂ ಓದಿ
ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್
7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಯೋಧ!
ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ
ಕೆಕೆ ಎಕ್ಸ್​ಪ್ರೆಸ್​ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ವ್ಯಕ್ತಿ ಬಂಧನ

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ದೌಡಾಸಿದ್ದು, ರೈಲಿನ ಎಲ್ಲಾ 22 ಬೋಗಿಗಳನ್ನು ಪರಿಶೀಲಿಸಲಾಯಿತು. ಈ ತಪಾಸಣೆ ವೇಳೆ ಪ್ರಯಾಣಿಕರನ್ನು ಕೆಳಗಿಳಿಸಲಾಗಿತ್ತು. ಈ ವೇಳೆ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ ಮತ್ತು ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುತ್ತೇವೆ ಎಂದ ದುಷ್ಕರ್ಮಿಗಳು

ಸದ್ಯ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೀಪ್ ಸಿಂಗ್ ರಾಥೋಡ್​​ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್ಐ ವೀರಭದ್ರಪ್ಪ ಹೆಚ್​​ಎಸ್​ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:01 pm, Sun, 11 May 25

ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Loading...
Unable to load recommendations.
Follow Us